Sunday, January 19, 2025
Sunday, January 19, 2025

ಉಡುಪಿ: ಸರ್ಕಾರಿ ಐ.ಟಿ.ಐ ಪ್ರವೇಶಾತಿಗೆ ಅರ್ಜಿ ಆಹ್ವಾನ

ಉಡುಪಿ: ಸರ್ಕಾರಿ ಐ.ಟಿ.ಐ ಪ್ರವೇಶಾತಿಗೆ ಅರ್ಜಿ ಆಹ್ವಾನ

Date:

ಉಡುಪಿ, ಮೇ 25: ಬೈಂದೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿಗೆ ಎನ್.ಸಿ.ವಿ.ಟಿ ಸಂಯೋಜನೆ ಹೊಂದಿರುವ ಎಲೆಕ್ಟ್ರಿಷಿಯನ್ ಮತ್ತು ಫಿಟ್ಟರ್ ವೃತ್ತಿಗಳಿಗೆ ಹಾಗೂ ಉದ್ಯೋಗ ಯೋಜನೆಯ ಟಾಟಾ ಟೆಕ್ನಾಲಜೀಸ್ ಸಹಯೋಗದೊಂದಿಗೆ ಇಂಡಸ್ಟ್ರಿಯಲ್ ರೋಬೋಟಿಕ್ಸ್ & ಡಿಜಿಟಲ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಿಷಿಯನ್ ಮತ್ತು ಮೆಷಿನ್ ಎಲೆಕ್ಟ್ರಿಕ್ ವೆಹಿಕಲ್ ಕೋರ್ಸ್ಗಳ ಪ್ರವೇಶಾತಿಗೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 7 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ http://www.cite.karnataka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಣಿಪಾಲ ಐ.ಟಿ.ಐ: ಪ್ರಸಕ್ತ ಸಾಲಿನಲ್ಲಿ ಉಡುಪಿಯ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿವಿಧ ತಾಂತ್ರಿಕ ಕೋರ್ಸುಗಳ ಪ್ರವೇಶಾತಿಗೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಹಾಗೂ ಪಿ.ಯು.ಸಿ ಅನುತ್ತೀರ್ಣ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 7 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ http://www.cite.karnataka.gov.in ಅಥವಾ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಪ್ರಗತಿನಗರ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2986145, ಮೊ.ನಂ. 9900329668, 9964247101, 9902001790, 9535270498 ಹಾಗೂ 9738439619 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೊಕ್ಕರ್ಣೆ ಐ.ಟಿ.ಐ: ಕೊಕ್ಕರ್ಣೆ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನ ಫಿಟ್ಟರ್ ಹಾಗೂ ಇಲೆಕ್ಟಿçಷಿಯನ್ ಕೋರ್ಸುಗಳ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣ ಅಥವಾ ಪಿ.ಯು.ಸಿ ಅನುತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೊ.ನಂ: 9483593148 ಮತ್ತು 8277558812 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಕ್ಕರ್ಣೆ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!