Monday, November 25, 2024
Monday, November 25, 2024

ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ: ಜಿಲ್ಲಾ ಮಟ್ಟದ ಕಾರ್ಯಗಾರ

ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ: ಜಿಲ್ಲಾ ಮಟ್ಟದ ಕಾರ್ಯಗಾರ

Date:

ಮಣಿಪಾಲ, ಮೇ 26: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ಘಟಕ ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಸಮುದಾಯ ಆರೋಗ್ಯ ಅಧಿಕಾರಿಗಳಿಗೆ ಒಂದು ದಿನದ ಕಾರ್ಯಾಗಾರ ಮಾಹೆ ಮಣಿಪಾಲದ ಇಂಟರಾಕ್ಟ್ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು. ಕಾರ್ಯಾಗಾರದಲ್ಲಿ ನೇತ್ರ ಮತ್ತು ಸಂಬಂಧಿತ ಕಾಯಿಲೆಗಳ ಶಿಕ್ಷಣ ಹಾಗೂ ಅಂಧತ್ವ ನಿಯಂತ್ರಣ ಕಾರ್ಯಕ್ರಮದ ಕುರಿತು ಶಿಕ್ಷಣ ನೀಡಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ, ಇಡೀ ರಾಜ್ಯದಲ್ಲಿ ಮೊದಲ ಬಾರಿಗೆ ನೇತ್ರಪ್ರಧಾನ ಕಾರ್ಯಕ್ರಮದ ಅಂಗವಾಗಿ ಈ ಕಾರ್ಯಕ್ರಮವನ್ನು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಸಹಯೋಗದೊಂದಿಗೆ ನಡೆಸುತ್ತಿದ್ದೇವೆ. ಈ ಕಾರ್ಯಕ್ರಮವು ಇಡೀ ರಾಜ್ಯಕ್ಕೆ ಮಾದರಿಯಾಗಬೇಕು, ಇದರ ಮೂಲಕ ಹುಟ್ಟಿದ ಮಗುವಿನೊಂದಿಗೆ ಎಲ್ಲರೂ ಅಂಧತ್ವದಿಂದ ಮುಕ್ತರಾಗಬೇಕು ಎಂದು ಆಶಿಸಿದರು. ಇದಕ್ಕೆ ಸಹಕರಿಸುತ್ತಿರುವ ಕಸ್ತೂರ್ಬಾ ಆಸ್ಪತ್ರೆಗೆ ಅಭಿನಂದೆನೆಗಳನ್ನು ಸಲ್ಲಿಸಿದರು.

ಅಧ್ಯಕ್ಷತೆ ವಹಿಸಿದ್ದ ಕೆಎಂಸಿ ಡೀನ್ ಡಾ. ಪದ್ಮರಾಜ್ ಹೆಗ್ಡೆ ಅವರು, ಈಗ ನಾವು ಕಂಪ್ಯೂಟರ್ ಮತ್ತು ತಂತ್ರಜ್ಞಾನ ಕಾಲದಲ್ಲಿ ಇದ್ದೇವೆ. ಸಣ್ಣ ಮಕ್ಕಳಿಂದ ಎಲ್ಲರೂ ಮೊಬೈಲ್ ಮತ್ತು ದೂರದರ್ಶನದಿಂದ ಕಣ್ಣಿನ ಸಮಸ್ಯೆಗೆ ಒಳಪಡುತ್ತಿದ್ದಾರೆ. ಅದಕ್ಕೆ ಸೂಕ್ತ ಸಮಯದಲ್ಲಿ ವೈದ್ಯರಿಗೆ ತೋರಿಸಿ ಚಿಕಿತ್ಸೆ ಪಡೆಯುತ್ತಿರುವುದರಿಂದ ಸಮಸ್ಯೆಗೆ ಪರಿಹಾರ ಪಡೆದುಕೊಳ್ಳಬಹುದು. ಇನ್ನು ಮುಂದೆಯೂ ಜಿಲ್ಲಾ ಅರೋಗ್ಯ ಇಲಾಖೆಯ ಯಾವುದೇ ಕಾರ್ಯಕ್ರಮಕ್ಕೆ ನಾವು ಸಹಕರಿಸಲಿದ್ದೇವೆ ಎಂದು ಹೇಳಿದರು. ಜಿಲ್ಲಾ ಅಂಧತ್ವ ನಿಯಂತ್ರಣ ಅಧಿಕಾರಿ ಡಾ. ಲತಾ ನಾಯಕ್, ಈ ತರಬೇತಿ ಕಾರ್ಯಕ್ರಮದಿಂದ ನೇತ್ರಕ್ಕೆ ಸಂಬಂಧಿಸಿದ ಎಲ್ಲಾ ಕಾಯಿಲೆಗಳನ್ನು ಹಳ್ಳಿ ಹಳ್ಳಿಗಳಲ್ಲಿ ಪತ್ತೆಹಚ್ಚಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗಲು ಸಹಕಾರಿಯಾಗಲಿದೆ ಎಂದರು. ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಅವರು ಅತಿಥಿಗಳಿಗೆ ನೆನಪಿನ ಕಾಣಿಕೆಗಳನ್ನು ಹಸ್ತಾಂತರಿಸಿದರು.

ಸಮುದಾಯ ಆರೋಗ್ಯ ವಿಭಾಗದ ಮುಖ್ಯಸ್ಥ ಡಾ. ಅಶ್ವಿನಿ ಕುಮಾರ್ ಗೋಪಾಡಿ ಸ್ವಾಗತಿಸಿ, ನೇತ್ರಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಯೋಗೀಶ್ ಕಾಮತ್ ವಂದಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಸಹ ಪ್ರಾಧ್ಯಾಪಕಿ ಡಾ. ನೀತಾ ಕೆ.ಐ.ಆರ್, ಸಹಾಯಕ ಪ್ರಾಧ್ಯಾಪಕಿ ಡಾ. ಸುಶನ ಶೆಟ್ಟಿ, ಮತ್ತು ಸಹ ಪ್ರಾಧ್ಯಾಪಕಿ ಡಾ. ರಶ್ಮಿ ಕೆ ಭಾಗವಿಸಿದ್ದರು. ಉಡುಪಿ ಜೆಲ್ಲೆಯ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 250 ಸಮುದಾಯ ಆರೋಗ್ಯ ಅಧಿಕಾರಿಗಳು ಪಾಲ್ಗೊಂಡು ಇದರ ಪ್ರಯೋಜನ ಪಡೆದುಕೊಂಡರು. ಡಾ. ಶ್ರುತಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!