Sunday, January 19, 2025
Sunday, January 19, 2025

ಜೆಇಇ ಮೈನ್ (ಬಿ.ಆರ್ಕ್): ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳ ಅಮೋಘ ಸಾಧನೆ

ಜೆಇಇ ಮೈನ್ (ಬಿ.ಆರ್ಕ್): ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳ ಅಮೋಘ ಸಾಧನೆ

Date:

ಕಾರ್ಕಳ, ಮೇ 26: ರಾಷ್ಟ್ರಮಟ್ಟದಲ್ಲಿ ಎನ್.ಟಿ.ಎ ನಡೆಸುವ ಜೆಇಇ ಮೈನ್.ಬಿ.ಆರ್ಕ್ನ ಎರಡನೇ ಫೇಸ್‌ನ ಅಂತಿಮ ಫಲಿತಾಂಶದಲ್ಲಿ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್ ಹಾಗೂ 10 ವಿದ್ಯಾರ್ಥಿಗಳಿಗೆ 90ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿ ಉತ್ತಮ ಸಾಧನೆ ಮಾಡಿರುತ್ತಾರೆ.

ವಿದ್ಯಾರ್ಥಿಗಳಾದ ಚಮನ್ ಡಿ.ಪಿ 99.8141321 ಪರ್ಸಂಟೈಲ್, ಶ್ರೀಕಾಂತ್ ಎಚ್ 99.6402022 ಪರ್ಸಂಟೈಲ್, ಸೂರ್ಯ ವಿ 96.6726137 ಪರ್ಸಂಟೈಲ್, ಹರ್ಷಿತ್.ಎಸ್.ಎಸ್ 96.0327859 ಪರ್ಸಂಟೈಲ್, ವಿಶಾಲ್ ಎಂ.ವಿ 94.8139797 ಪರ್ಸಂಟೈಲ್, ಸಾಯಿ ಲಿಖಿತ್ ರೆಡ್ಡಿ 92.4129315 ಪರ್ಸಂಟೈಲ್, ಅಖಿಲ್ ದಯಾನಂದ್ ನಾಯಕ್ 92.2271781 ಪರ್ಸಂಟೈಲ್, ಶ್ರೀರಾಮ ಗಜಾನನ ಪಟಗಾರ್ 92.2271781 ಪರ್ಸಂಟೈಲ್, ಅಮೋಘ ಎಸ್.ಆರ್ 91.8465656 ಪರ್ಸಂಟೈಲ್, ದರ್ಶನ್ ರಾಜು ನಾಯಕ್ 91.0783388 ಪರ್ಸಂಟೈಲ್ ಪಡೆದಿರುತ್ತಾರೆ.

ಈ ಹಿಂದೆ ರಾಷ್ಟ್ರಮಟ್ಟದಲ್ಲಿ ನಡೆದ ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಯಾದ ಜೆಇಇ ಮೈನ್ ೨ನೇ ಫೇಸ್‌ನ ಅಂತಿಮ ಫಲಿತಾಂಶದಲ್ಲಿಯೂ ಕಾರ್ಕಳ ಜ್ಞಾನಸುಧಾ ಪಿಯು ಕಾಲೇಜಿನ ಒಟ್ಟು 9 ವಿದ್ಯಾರ್ಥಿಗಳು 98 ಪರ್ಸಂಟೈಲ್‌ಗಿಂತ ಅಧಿಕ, 45 ವಿದ್ಯಾರ್ಥಿಗಳು 95 ಪರ್ಸಂಟೈಲ್‌ಗಿಂತ ಅಧಿಕ ಹಾಗೂ 97 ವಿದ್ಯಾರ್ಥಿಗಳು 90ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿರುತ್ತಾರೆ.

ಒಟ್ಟು 126 ವಿದ್ಯಾರ್ಥಿಗಳು ಐಐಟಿ ಪರೀಕ್ಷೆಯಾದ ಜೆಇಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆ ಗಿಟ್ಟಿಸಿಕೊಂಡಿರುತ್ತಾರೆ. 2020-21 ಮತ್ತು 2021-22ರ ಜೆಇಇ ಮೈನ್ ಅಂತಿಮ ಫಲಿತಾಂಶದಲ್ಲಿಯೂ ಜ್ಞಾನಸುಧಾದ ಐವರು ವಿದ್ಯಾರ್ಥಿಗಳು 99ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ಸಾಧಕ ವಿದ್ಯಾರ್ಥಿಗಳನ್ನು ಹಾಗೂ ಸಾಧನೆಗೆ ಬೆನ್ನೆಲುಬಾದ ಜ್ಞಾನಸುಧಾ ಎಂಟ್ರನ್ಸ್ ಅಕಾಡೆಮಿಯಾ ಪರಿಶ್ರಮವನ್ನು ಶ್ಲಾಘಿಸಿ ಎಲ್ಲರನ್ನು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!