Home ಸುದ್ಧಿಗಳು ಪ್ರಾದೇಶಿಕ ಯಕ್ಷಗಾನ ಕಲಾರಂಗ: ತಾಳಮದ್ದಲೆ ಸಪ್ತಾಹದ ಸಮಾರೋಪ ಸಮಾರಂಭ

ಯಕ್ಷಗಾನ ಕಲಾರಂಗ: ತಾಳಮದ್ದಲೆ ಸಪ್ತಾಹದ ಸಮಾರೋಪ ಸಮಾರಂಭ

192
0

ಶಿರ್ವ, ಮೇ 27: ಯಕ್ಷಗಾನ ಕಲಾರಂಗ ಆಯೋಜಿಸಿದ ತಾಳಮದ್ದಲೆ ಸಪ್ತಾಹದ ಸಮಾರೋಪ ಸಮಾರಂಭ ಶನಿವಾರ ಶಿರ್ವದಲ್ಲಿ ನಡೆಯಿತು. ಶ್ರೀಕರ ಭಟ್ ಇವರಿಗೆ ಮಟ್ಟಿ ಮುರಲೀಧರ ರಾವ್ ಪ್ರಶಸ್ತಿಯನ್ನು ಹಾಗೂ ಪಂಡಿತ ಪೆರ್ಲ ಕೃಷ್ಣ ಭಟ್ ಪ್ರಶಸ್ತಿಯನ್ನು ಡಾ. ಪಾದೇಕಲ್ಲು ವಿಷ್ಣು ಭಟ್ ರಿಗೆ ಪ್ರದಾನ ಮಾಡಲಾಯಿತು. ಪ್ರಶಸ್ತಿಯು ಇಪ್ಪತ್ತು ಸಾವಿರ ರೂಪಾಯಿ ನಗದು ಮತ್ತು ಪ್ರಶಸ್ತಿ ಪತ್ರವನ್ನೊಳಗೊಂಡಿದೆ. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರನ್ನು ಸಂಸ್ಥೆಯ ವತಿಯಿಂದ ಅಭಿನಂದಿಸಲಾಯಿತು.

ಕಾಪು ವಿಧಾನಸಭಾ ಕ್ಷೇತ್ರದ ಕೆಲವು ಶಾಲೆಗಳಲ್ಲಾದರೂ ಯಕ್ಷ ಶಿಕ್ಷಣ ಟ್ರಸ್ಟ್ ಮೂಲಕ ವಿದ್ಯಾರ್ಥಿಗಳಿಗೆ ಯಕ್ಷಗಾನ ಕಲಿಸಿ ಪ್ರದರ್ಶನ ವ್ಯವಸ್ಥೆ ಮಾಡಬೇಕೆಂಬ ಅಪೇಕ್ಷೆಯನ್ನು ಶಾಸಕರಾದ ಗುರ್ಮೆಯವರು ವ್ಯಕ್ತಪಡಿಸಿದರು. ಪೆರ್ಲ ಪ್ರಶಸ್ತಿ ಸ್ಥಾಪಿಸಿದ ಕ್ರಷ್ಣ ಪ್ರಸಾದ್ ಅಡ್ಯಂತಾಯ ಅಧ್ಯಕ್ಷೀಯ ಮಾತುಗಳನ್ನಾಡಿ, ಕಲಾರಂಗದ ಚತುರ್ಮುಖಧ ಚಟುವಟಿಕೆಗಳನ್ನು ಮೆಚ್ಚಿ, ಸನ್ಮಾನಿತರನ್ನು ಅಭಿನಂದಿಸಿದರು. ಶಿರ್ವದ ವಿಶ್ರಾಂತ ಮುಖ್ಯೋಪಾಧ್ಯಾಯ ರಾಮ ಶೆಟ್ಟಿ ಹಾಗೂ ಯಕ್ಷಗಾನ ಅಭಿಮಾನಿ ಬಳಗದ ಪ್ರಮುಖರಾದ ಶ್ರೀಪತಿ ಕಾಮತ್ ಅಭ್ಯಾಗತರಾಗಿ ಶುಭ ಹಾರೈಸಿದರು.

ಸಂಸ್ಥೆಯ ಅಧ್ಯಕ್ಷರಾದ ಎಂ.ಗಂಗಾಧರ ರಾವ್ ಸ್ವಾಗತಿಸಿದರು. ತಾಳಮದ್ದಲೆಯ ಸಂಯೋಜಕರಾದ ನಾರಾಯಣ ಎಂ ಹೆಗಡೆ ಸನ್ಮಾನಿತರನ್ನು ಪರಿಚಯಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿದರು. ಎಚ್.ಎನ್.ಶ್ರಂಗೇಶ್ವರ ವಂದಿಸಿದರು. ಉಪಾಧ್ಯಕ್ಷರಾದ ಎಸ್.ವಿ.ಭಟ್, ವಿ.ಜಿ.ಶೆಟ್ಟಿ ಹಾಗೂ ಪೆರ್ಲ ರಾಜಾರಾಮ್ ಭಟ್ ಸಭೆಯಲ್ಲಿ ಉಪಸ್ಥಿತರಿದ್ದರು. ಶ್ರೀ ಕೃಷ್ಣ ಸಂಧಾನ ತಾಳಮದ್ದಲೆ ನಡೆಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.