Home ಸುದ್ಧಿಗಳು ಪ್ರಾದೇಶಿಕ ಪಿ.ಎಂ.ಇ.ಜಿ.ಪಿ ಯೋಜನೆ: ಅರ್ಜಿ ಆಹ್ವಾನ

ಪಿ.ಎಂ.ಇ.ಜಿ.ಪಿ ಯೋಜನೆ: ಅರ್ಜಿ ಆಹ್ವಾನ

377
0

ಉಡುಪಿ, ಮೇ 31: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿಎಂಇಜಿಪಿ) ಯಡಿ ಜಿಲ್ಲೆಯಲ್ಲಿ ಸ್ವ-ಉದ್ಯೋಗ ಆರಂಭಿಸಲು ಆಸಕ್ತಿ ಹೊಂದಿರುವ 18 ವರ್ಷ ಮೇಲ್ಪಟ್ಟ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಗರಿಷ್ಠ ಯೋಜನಾ ವೆಚ್ಚ ರೂ. 50.00 ಲಕ್ಷ ಮೊತ್ತದ ಹೊಸ ಕೈಗಾರಿಕೆ ಉತ್ಪಾದನೆ ಚಟುವಟಿಕೆ ಹಾಗೂ ಗರಿಷ್ಠ ಯೋಜನಾ ವೆಚ್ಚ ರೂ. 20.00 ಲಕ್ಷ ಮೊತ್ತದ ಆಯ್ದ ಕೆಲವು ಸೇವಾ ಘಟಕ ಸ್ಥಾಪಿಸಲು ಅವಕಾಶವಿದ್ದು, ಯೋಜನಾ ವೆಚ್ಚದ ಮೇಲೆ ಶೇ. 15 ರಿಂದ 35 ರ ವರೆಗೆ ಸಹಾಯಧನ ನೀಡಲಾಗುವುದು.

ವೆಬ್‌ಸೈಟ್ https://www.kviconline.gov.in/pmegpeportal/jsp/pmegponline.jsp ಮೂಲಕ ಅರ್ಜಿಯನ್ನು ಸಲ್ಲಿಸುವಾಗ ಫೋಟೋ, ಯೋಜನಾ ವರದಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಜನಸಂಖ್ಯೆ ಪ್ರಮಾಣ ಪತ್ರ ಹಾಗೂ ವಿದ್ಯಾಭ್ಯಾಸದ ದಾಖಲಾತಿಗಳನ್ನು ಹಾಗೂ ಸ್ಕೋರ್ ಕಾರ್ಡ್ನಲ್ಲಿಯೂ ಸಂಬಂಧಿಸಿದ ದಾಖಲಾತಿಗಳನ್ನು ಅಪ್‌ಲೋಡ್ ಮಾಡಿದ ನಂತರ, ಅರ್ಜಿಯ ಪ್ರಿಂಟ್‌ಅನ್ನು ಸಂಬAಧಪಟ್ಟ ದಾಖಲಾತಿಗಳೊಂದಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ ಕೈಗಾರಿಕಾ ಪ್ರದೇಶ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2575650, ಜಿಲ್ಲಾ ಅಧಿಕಾರಿಗಳು, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574855, ರಾಜ್ಯ ನಿರ್ದೇಶಕರು, ಖಾದಿ ಗ್ರಾಮೋದ್ಯೋಗ ಆಯೋಗ, ದೂರವಾಣಿ ನಗರ, ವಿಜಿನಾಪುರ, ಬೆಂಗಳೂರು ದೂ.ಸಂಖ್ಯೆ: 080-25665885/ 080-25665883 ಹಾಗೂ ಪ್ರಾದೇಶಿಕ ಕಚೇರಿ, ಕಾಯರ್ ಬೋರ್ಡ್, ಪೀಣ್ಯಾ ಕೈಗಾರಿಕಾ ಪ್ರದೇಶ, ಟಿವಿಎಸ್ ಕ್ರಾಸ್ ಹತ್ತಿರ, ಬೆಂಗಳೂರು ದೂ.ಸಂಖ್ಯೆ: 080-28375023 ಕಚೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.