Home ಸುದ್ಧಿಗಳು ಪ್ರಾದೇಶಿಕ ಹಿರಿಯಡ್ಕ: ಉಚಿತ ಕಣ್ಣಿನ ತಪಾಸಣಾ ಶಿಬಿರ

ಹಿರಿಯಡ್ಕ: ಉಚಿತ ಕಣ್ಣಿನ ತಪಾಸಣಾ ಶಿಬಿರ

277
0

ಉಡುಪಿ, ಮೇ 31: ಜಿಲ್ಲಾ ಸಂಚಾರಿ ನೇತ್ರ ಘಟಕ ಉಡುಪಿ ಜಿಲ್ಲೆ ಇವರ ವತಿಯಿಂದ ಇಂದು ಪ್ರಾಥಮಿಕ ಆರೋಗ್ಯ ಕೇಂದ್ರ ಹಿರಿಯಡ್ಕದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಸಲಾಯಿತು. ಶಿಬಿರದಲ್ಲಿ 56 ಮಂದಿ ಕಣ್ಣಿನ ತಪಾಸಣೆಯನ್ನು ಮಾಡಿಸಿಕೊಂಡಿದ್ದು. 11 ಮಂದಿಗೆ ಕನ್ನಡಕವನ್ನು ಉಚಿತವಾಗಿ ನೀಡಲಾಗಿದೆ. 8 ಮಂದಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಆಯ್ಕೆಯಾಗಿದ್ದಾರೆ.

ಯ್ಕೆಯಾದ ಫಲಾನುಭವಿಗಳನ್ನು ಜಿಲ್ಲಾ ಆಸ್ಪತ್ರೆ ಉಡುಪಿ ದಿನಾಂಕ 14.06.2023 ಶಸ್ತ್ರಚಿಕಿತ್ಸೆ ಮಾಡಲಾಗುವುದು. ಶಿಬಿರದಲ್ಲಿ ನೇತ್ರತಜ್ಞರಾದ ಡಾ. ಲತಾ ನಾಯಕ್, ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿ ಡಾ. ಸತ್ಯಶಂಕರ್, ಆಡಳಿತ ವೈದ್ಯಾಧಿಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಿರಿಯಡ್ಕ ನೇತ್ರ ಸಹಾಯಕಿ ಸುಪ್ರಿತ ಹಾಗೂ ಇತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.