Sunday, January 19, 2025
Sunday, January 19, 2025

ರಾಷ್ಟ್ರಮಟ್ಟದ ಅಥ್ಲೀಟ್, ನೌಕರರ ಸಂಘದ ಕಾರ್ಯದರ್ಶಿಗೆ ಅಭಿನಂದನೆ

ರಾಷ್ಟ್ರಮಟ್ಟದ ಅಥ್ಲೀಟ್, ನೌಕರರ ಸಂಘದ ಕಾರ್ಯದರ್ಶಿಗೆ ಅಭಿನಂದನೆ

Date:

ಉಡುಪಿ, ಮೇ 31: ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಕಾರ್ಯದರ್ಶಿ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಅಥ್ಲೀಟ್, ಆರೋಗ್ಯ ಇಲಾಖೆಯ ಜಿಲ್ಲಾ ಸರ್ವೇಕ್ಷಣಾ ಕಚೇರಿಯ ಹಿರಿಯ ಪ್ರಯೋಗಶಾಲಾ ಅಧಿಕಾರಿ ಆದ ಹೆಚ್. ಉದಯ ಕುಮಾರ್ ಶೆಟ್ಟಿ ಅವರ ಸೇವಾ ನಿವೃತ್ತಿಯ ಪ್ರಯುಕ್ತ ಉಡುಪಿಯ ಪುರಭವನದಲ್ಲಿ ಅಭಿನಂದನಾ ಸಮಾರಂಭದಲ್ಲಿ, ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ವತಿಯಿಂದ ಆತ್ಮೀಯವಾಗಿ ಅಭಿನಂದಿಸಲಾಯಿತು.

ಹೆಚ್. ಉದಯ ಕುಮಾರ್ ಶೆಟ್ಟಿ ಅವರು ಆರೋಗ್ಯ ಇಲಾಖೆಯಲ್ಲಿ 34 ವರ್ಷಗಳ ಸೇವೆ ಸಲ್ಲಿಸಿದ್ದು, ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದಲ್ಲಿ 12 ವರ್ಷಗಳ ಕಾಲ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಅತ್ಯುತ್ತಮ ಕ್ರೀಡಾಪಟು ಆಗಿರುವ ಇವರು, ಅಖಿಲ ಭಾರತ ಮಟ್ಟದ ನಾಗರೀಕ ಸೇವಾ ಕ್ರೀಡಾಕೂಟದಲ್ಲಿ 7 ವರ್ಷಗಳ ಕಾಲ ಸತತವಾಗಿ ರಾಜ್ಯವನ್ನು ಪ್ರತಿನಿಧಿಸಿದ್ದು, ಕಂಚಿನ ಪದಕವನ್ನೂ ಹಾಗೂ ರಾಜ್ಯಮಟ್ಟದ ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಸಹ ಹಲವು ಪದಕಗಳನ್ನು ಪಡೆದಿದ್ದಾರೆ. ಮ್ಯಾರಾಥಾನ್ ಓಟಗಾರರಾಗಿರುವ ಇವರು ದೇಶದಲ್ಲಿ ಮಾತ್ರವಲ್ಲದೇ ವಿದೇಶಗಳಲ್ಲಿ ನಡೆದ ಮಾಸ್ಟರ್ ಅಥ್ಲೀಟ್ ಕ್ರೀಡಾಕೂಟಗಳಲ್ಲಿ ಸಹ ಭಾಗವಹಿಸಿ ಪದಕಗಳನ್ನು ಪಡಿದಿದ್ದು, ಅನೇಕ ಯುವ ಅಥ್ಲೀಟ್ ಗಳಿಗೆ ಮಾರ್ಗದರ್ಶಕರಾಗಿದ್ದಾರೆ. ಆರೋಗ್ಯ ಇಲಾಖೆಯ ನೌಕರರ ಸಂಘ, ವಿವಿಧ ಕ್ರೀಡಾ ಸಂಸ್ಥೆಗಳ ವತಿಯಿಂದ ಕೂಡಾ ಉದಯ ಕುಮಾರ್ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು.

ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಅಂಪಾರು ದಿನಕರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಸ್ವಾಗತಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ, ಜಿಲ್ಲಾ ಸರಕಾರಿ ನೌಕರರ ಸಂಘದ ಉಪಾಧ್ಯ್ಯಕ್ಷ ಪ್ರಶಾಂತ್ ಹಾವಂಜೆ, ಕೋಶಾಧಿಕಾರಿ ಷರೀಫ್ ಮ ರೋಣ, ನಿಕಟಪೂರ್ವ ಜಿಲ್ಲಾ ಸರಕಾರಿ ನೌಕರರ ಸಂಘದ ಆಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್, ಕಾರ್ಕಳ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಬಾಲಕೃಷ್ಣ ಎನ್, ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು, ಅರೋಗ್ಯ ಇಲಾಖೆಯ ವೈದ್ಯರು ಮತ್ತು ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಅಭಿನಂದನೆ ಸಲ್ಲಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...

ಮಾನವೀಯ ಮೌಲ್ಯಗಳೇ ವಿವೇಕಾನಂದರ ತತ್ವ: ಡಾ. ನಿಕೇತನ

ಉಡುಪಿ, ಜ.18: ಶಾಂತಿ ಮತ್ತು ಪ್ರೀತಿಯ ಮೂಲಕ ಮಾನವ ಜನಾಂಗ ಉತ್ತಮ...

ತಾಂತ್ರಿಕ ಸಹಾಯಕರ ಹುದ್ದೆ: ಅರ್ಜಿ ಅಹ್ವಾನ

ಉಡುಪಿ, ಜ.19: ಕೃಷಿ ಇಲಾಖೆಯ ವತಿಯಿಂದ ಅನುಷ್ಟಾನಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ...

ಜ. 19-21 ರವರೆಗೆ ನಾಟಕೋತ್ಸವ ಪ್ರದರ್ಶನ

ಉಡುಪಿ, ಜ.19: ಕಾರ್ಕಳ ಯಕ್ಷ ರಂಗಾಯಣ ಇವರ ವತಿಯಿಂದ ಜನವರಿ 19...
error: Content is protected !!