Sunday, January 19, 2025
Sunday, January 19, 2025

ಶಿಕ್ಷಣ, ಆರೋಗ್ಯಕ್ಕೆ ಮೊದಲ ಆದ್ಯತೆ: ಶಾಸಕ ಯಶ್‌ಪಾಲ್ ಸುವರ್ಣ

ಶಿಕ್ಷಣ, ಆರೋಗ್ಯಕ್ಕೆ ಮೊದಲ ಆದ್ಯತೆ: ಶಾಸಕ ಯಶ್‌ಪಾಲ್ ಸುವರ್ಣ

Date:

ಉಡುಪಿ, ಜೂ. 1: ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಮೊದಲ ಆದ್ಯತೆ ನೀಡಲಾಗುವುದು. ನಗರದ ಅಜ್ಜರಕಾಡು ವಾರ್ಡ್ ಒಂದರಲ್ಲೇ 9 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಎಲ್‌ಕೆಜಿಯಿಂದ ಉನ್ನತ ಶಿಕ್ಷಣದ ವರೆಗೂ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಅಧಿಕಾರಿಗಳು, ಶಿಕ್ಷಕರು ಶೈಕ್ಷಣಿಕ ಗುಣಮಟ್ಟವನ್ನು ಇನ್ನಷ್ಟು ಮೇಲ್ದರ್ಜೆಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ಶಾಸಕ ಯಶ್‌ಪಾಲ್ ಎ. ಸುವರ್ಣ ತಿಳಿಸಿದರು.

ಒಳಕಾಡು ಶಾಲೆಯಲ್ಲಿ ಬುಧವಾರ ನಡೆದ ಶಾಲಾ ಆರಂಭೋತ್ಸವದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಕಲಿಕಾ ಪರಿಕರಗಳನ್ನು ವಿತರಿಸಿ ಮಾತನಾಡಿದ ಅವರು, ಶೈಕ್ಷಣಿಕವಾಗಿ ಉಡುಪಿ ದೇಶ ವಿದೇಶದಲ್ಲಿ ಹೆಸರು ಮಾಡಿದೆ. ಇಲ್ಲಿನ ವಿದ್ಯಾರ್ಥಿಗಳು ಹೆಚ್ಚು ಪರಿಶ್ರಮ ಪಟ್ಟು ವ್ಯಾಸಂಗ ಮಾಡುತ್ತಾರೆ. ಅದಕ್ಕೆ ಪೂರಕವಾಗಿ ಶಿಕ್ಷಕರು ಬೋಧಿಸುತ್ತಾರೆ.

ಆರೋಗ್ಯ ಕ್ಷೇತ್ರದಲ್ಲೂ ಜಿಲ್ಲೆ ಸಾಕಷ್ಟು ಸಾಧನೆ ಮಾಡಿದೆ. ಇನ್ನಷ್ಟು ಅಭಿವೃದ್ಧಿ ಕಾಣಬೇಕಾಗಿದೆ. ಶಿಕ್ಷಣ ಹಾಗೂ ಆರೋಗ್ಯದ ವಿಷಯದಲ್ಲಿ ಯಾವುದೇ ರಾಜೀ ಮಾಡಿಕೊಳ್ಳುವ ಪ್ರಮೇಯವೇ ಇಲ್ಲ. ವಿದ್ಯಾರ್ಥಿಗಳಿಗೆ ಉತ್ಕೃಷ್ಟ ಗುಣಮಟ್ಟದ ಶಿಕ್ಷಣ ಸಿಗಬೇಕು. ಅಷ್ಟೇ ಉತ್ತಮ ಆರೋಗ್ಯ ಸೇವೆಯೂ ಜನ ಸಾಮಾನ್ಯರಿಗೆ ಲಭ್ಯವಾಗಬೇಕು. ಶಾಲೆಗಳು, ವಿದ್ಯಾರ್ಥಿಗಳು, ಶಿಕ್ಷಕರು ಜಿಲ್ಲೆಯ ನಿಜವಾದ ಸಂಪತ್ತು ಎಂದರು. ಮನೋವೈದ್ಯ ಡಾ. ಪಿ.ವಿ.ಭಂಡಾರಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಕೆನರಾ ಬ್ಯಾಂಕ್ ಡಿಜಿಎಂ ಸಬಿತಾ ನಾಯಕ್, ಡಿಡಿಪಿಐ ಕೆ. ಗಣಪತಿ, ಡಯಟ್ ಉಪ ಪ್ರಾಂಶಪಾಲರಾದ ಡಾ. ಅಶೋಕ್ ಕಾಮತ್, ಬಿಇಒ ಚಂದ್ರೇಗೌಡ, ನಗರಸಭೆ ಸದಸ್ಯೆ ರಜನಿ ಹೆಬ್ಬಾರ್, ಎಸ್‌ಡಿಎಂಸಿ ಉಪಾಧ್ಯಕ್ಷ ಶ್ಯಾಮಪ್ರಸಾದ್, ಪ್ರಾಥಮಿಕ ಶಾಲೆ ಎಸ್‌ಡಿಎಂಸಿ ಅಧ್ಯಕ್ಷ ಪ್ರಕಾಶ್ ಚಂದ್ರ, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಕುಸುಮಾ, ಶಿಕ್ಷಕರು, ಪಾಲಕ, ಪೋಷಕರು, ವಿದ್ಯಾರ್ಥಿಗಳು ಮೊದಲಾದವರು ಉಪಸ್ಥಿತರಿದ್ದರು.

ಪ್ರೌಢಶಾಲೆ ಮುಖ್ಯ ಶಿಕ್ಷಕಿ ನಿರ್ಮಲಾ ಸ್ವಾಗತಿಸಿ, ವಿದ್ಯಾರ್ಥಿನಿ ಸನ್ನಿಧಿ ನಾಯಕ್ ನಿರೂಪಿಸಿದರು. ಅನಂತರ ಶಾಸಕ ಯಶ್‌ಪಾಲ್ ಸುವರ್ಣ ಅವರು ನಿಟ್ಟೂರು ಹನುಮಂತ ನಗರದ ಸರಕಾರಿ ಶಾಲೆ, ಬ್ರಹ್ಮಾವರದ ಬೋರ್ಡ್ ಹೈಸ್ಕೂಲ್ ಹಾಗೂ ಕೊಕ್ಕರ್ಣೆಯ ಕರ್ನಾಟಕ ಪಬ್ಲಿಕ್ ಶಾಲಾ ಆರಂಭೋತ್ಸವದಲ್ಲಿ ಪಾಲ್ಗೊಂಡರು.

ಸಿಹಿ ವಿತರಣೆ: ಶಾಸಕ ಯಶ್‌ಪಾಲ್ ಸುವರ್ಣ ಅವರು ತಮ್ಮ ತಂದೆ ತಾಯಿಯ ಸವಿನೆನಪಿನಲ್ಲಿ ಪುಷ್ಪಾನಂದ ಫೌಂಡೇಶನ್ ವತಿಯಿಂದ ಉಡುಪಿ ಕ್ಷೇತ್ರ ವ್ಯಾಪ್ತಿಯ ಎಲ್ಲ ಸರಕಾರಿ ಹಾಗೂ ಅನುದಾನಿತ ಶಾಲೆಗಳ ಸುಮಾರು 17 ಸಾವಿರ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ(ಲಡ್ಡು) ವಿತರಣೆ ಮಾಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!