Monday, November 25, 2024
Monday, November 25, 2024

ರಾಷ್ಟ್ರೀಯ ಲೋಕ್ ಅದಾಲತ್

ರಾಷ್ಟ್ರೀಯ ಲೋಕ್ ಅದಾಲತ್

Date:

ಉಡುಪಿ, ಜೂನ್ 2: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಇವರ ವತಿಯಿಂದ ರಾಜ್ಯಾದ್ಯಂತ 2023 ರ ಜುಲೈ 8 ರಂದು ರಾಷ್ಟ್ರೀಯ ಲೋಕ್ ಅದಾಲತ್/ ಮೆಗಾ ಲೋಕ್ ಅದಾಲತ್‌ನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಈ ಮೂಲಕ ತಕ್ಷಣ ಪರಿಹಾರ ಕಂಡುಕೊಳ್ಳಬಹುದಾಗಿದೆ. ಅದಾಲತ್‌ನಲ್ಲಿ ಸಾರ್ವಜನಿಕರು ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣ, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣ, ರಾಜ್ಯ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣ, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಸಾಲ ವಸೂಲಾತಿ ನ್ಯಾüಯಾಧೀಕರಣದ ಪ್ರಕರಣ, ವೈವಾಹಿಕ ಪ್ರಕರಣಗಳು, ಜಿಲ್ಲಾ ಗ್ರಾಹಕ ಪರಿಹಾರ ಆಯೋಗದಲ್ಲಿನ ಪ್ರಕರಣ, ಚೆಕ್ ಅಮಾನ್ಯ ಪ್ರಕರಣ, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣ, ಮೋಟಾರು ವಾಹನ ಪ್ರಕರಣ, ನ್ಯಾಯಾಧೀಕರಣದ ಪ್ರಕರಣ, ಕಾರ್ಮಿಕರ ವಿವಾದ, ವಿದ್ಯುತ್ ಹಾಗೂ ನೀರಿನ ಶುಲ್ಕಕ್ಕೆ ಸಂಬಂಧಿಸಿದ ಪ್ರಕರಣ, ಭೂಸ್ವಾಧೀನ ಪ್ರಕರಣ, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣ ಹಾಗೂ ಪಿಂಚಣಿ ಪ್ರಕರಣ, ರಾಜಿಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣ ಹಾಗೂ ಖಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.

ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಟೋಲ್ ಫ್ರೀ ಸಂಖ್ಯೆ: 1800-425-90900 ಅಥವಾ ಸಮೀಪದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಥವಾ ತಾಲೂಕು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!