Sunday, October 18, 2026
Sunday, October 18, 2026

ತೆಂಕನಿಡಿಯೂರು ಕಾಲೇಜು: ರಾಷ್ಟ್ರ‍ೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ

ತೆಂಕನಿಡಿಯೂರು ಕಾಲೇಜು: ರಾಷ್ಟ್ರ‍ೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ

Date:

ಮಲ್ಪೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ ಕಛೇರಿ ಉಡುಪಿ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರ‍ೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ ಇಂದು ನಡೆಯಿತು.

ಕ್ಷಯ ನಿರ್ಮೂಲನಾಧಿಕಾರಿ ಪ್ರಶಾಂತ್ ಶೆಟ್ಟಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. 2025ರ ವೇಳೆಗೆ ಕ್ಷಯರೋಗವನ್ನು ಪೂರ್ಣ ಪ್ರಮಾಣದಲ್ಲಿ ಮುಕ್ತಗೊಳಿಸಬೇಕೆಂದು ತಿಳಿಸಿದರು.

ಕ್ಷಯ ರೋಗದ ಲಕ್ಷಣಗಳು ಮತ್ತು ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಪ್ರಭಾರ ಪ್ರಾಂಶುಪಾಲ ಡಾ. ಸುರೇಶ್ ರೈ ಕೆ. ವಹಿಸಿದರು. ಕಾರ್ಯಕ್ರಮವನ್ನು ದೈಹಿಕ ಶಿಕ್ಷಣ ನಿರ್ದೇಶಕ ಡಾ. ರಾಮಚಂದ್ರ ಪಾಟ್ಕರ್ ನಿರೂಪಿಸಿದರು. ಸಂಖ್ಯಾಶಾಸ್ತ್ರ ವಿಭಾಗ ಮುಖ್ಯಸ್ಥ ಉಮೇಶ್ ಪೈ ಸ್ವಾಗತಿಸಿ ವಂದಿಸಿದರು.

ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಸಂಚಾಲಕ ರಾಧಾಕೃಷ್ಣ ಮತ್ತು ಡಾ. ದುಗ್ಗಪ್ಪ ಕಜೆಕಾರ್ ಹಾಗೂ ಕೆಮ್ಮಣ್ಣು ಪ್ರಾಥಮಿಕ ಆರೋಗ್ಯ ಕೇಂದ್ರ ಘಟಕದ ಕವಿತಾ, ಪ್ರಿಯಾಂಕ ರೆಬೆಲ್ಲೊ ಉಪಸ್ಥಿತರಿದ್ದರು. ಕ್ಷಯರೋಗ ನಿರ್ಮೂಲನೆಯ ಬಗ್ಗೆ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ ನಡೆಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!