Sunday, January 19, 2025
Sunday, January 19, 2025

ಆಗುಂಬೆ ಘಾಟ್‌ ಸ್ವಚ್ಛತೆ

ಆಗುಂಬೆ ಘಾಟ್‌ ಸ್ವಚ್ಛತೆ

Date:

ಸೋಮೇಶ್ವರ, ಜೂನ್ 4: ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಕಾರ್ಕಳದ ಕ್ರಿಯೇಟಿವ್‌ ಪದವಿಪೂರ್ವ ಕಾಲೇಜು ಮತ್ತು ಶಿರ್ಡಿ ಸಾಯಿಬಾಬ ಡಿಗ್ರಿ ಕಾಲೇಜಿನ ವಿದ್ಯಾರ್ಥಿಗಳಿಂದ ಆಗುಂಬೆಯ ಘಾಟಿಯ ಇಕ್ಕೆಲಗಳಲ್ಲಿ “ಸ್ವಚ್ಛತೆಯೆಡೆಗೆ ನಮ್ಮ ಹೆಜ್ಜೆ, ಪರಿಸರ ಕಾಳಜಿ ನಮ್ಮೆಲ್ಲರ ಹೊಣೆ” ಎಂಬ ಧ್ಯೇಯ ವಾಕ್ಯದೊಂದಿಗೆ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು. ಅರಣ್ಯದಲ್ಲಿ ಅಳಿವಿನಂಚಿನಲ್ಲಿರುವ ಅನನ್ಯ ಪ್ರಾಣಿ, ಪಕ್ಷಿ ಪ್ರಬೇಧಗಳಿವೆ. ನಾವು ಮಾಡುವ ಪ್ಲಾಸ್ಟಿಕ್‌ ತ್ಯಾಜ್ಯದಿಂದ ಅವುಗಳ ಜೀವನ ದುಸ್ತರವಾಗುವಂತಾಗಿದೆ. ಆದ್ದರಿಂದ ನಾವು ಪ್ರಕೃತಿಯನ್ನು ಹಾಳುಗೆಡಹುವ ಕಾರ್ಯ ಬಿಟ್ಟು ಸಾಧ್ಯವಾದಷ್ಟು ಪರಿಸರದ ಸ್ವಚ್ಛತೆಗೆ ಆದ್ಯತೆಯಾಗುವಂತೆ ಬದುಕಬೇಕಾಗಿದೆ ಎಂದು ಪ್ರಾಂಶುಪಾಲರಾದ ವಿದ್ವಾನ್‌ ಗಣಪತಿ ಭಟ್‌ ಹೇಳಿದರು.
ನಾವು ಶಿಕ್ಷಿತರಾದರೂ ಅನಕ್ಷರಸ್ಥರಂತೆ ವರ್ತಿಸುತ್ತಿದ್ದೇವೆ. ನಾವು ಬಳಸಿದ ತ್ಯಾಜ್ಯ ವಸ್ತುಗಳನ್ನು, ಕಸ, ಪ್ಲಾಸ್ಟಿಕ್‌ ಇತ್ಯಾದಿಗಳನ್ನು ಜವಾಬ್ದಾರಿಯಿಲ್ಲದೇ ಕಂಡಲ್ಲಿ ಎಸೆಯುತ್ತಿದ್ದೇವೆ. ಅದು ಕಾಡಿನ ಪರಿಸರವನ್ನು ಮಾಲಿನ್ಯಗೊಳಿಸಿ ಅಲ್ಲಿನ ಪ್ರಾಣಿಪಕ್ಷಿಗಳಿಗೂ ತೊಂದರೆಯುಂಟುಮಾಡುತ್ತಿದೆ. ಆದ್ದರಿಂದ ಪ್ರವಾಸಿ ಸ್ಥಳ ಹಾಗೂ ಪ್ರೇಕ್ಷಣೀಯ ಸ್ಥಳಗಳನ್ನು ಸ್ವಂತ ಕಾಳಜಿಯಿಂದ ನಿರ್ಮಲವಾಗಿಡುವ ಕಡೆಗೆ ಗಮನ ಹರಿಸಬೇಕಾಗಿದೆ ಎಂದು ಎನ್‌.ಎಸ್.ಎಸ್‌. ಯೋಜನಾಧಿಕಾರಿ ಉಮೇಶ್‌ ಕರೆ ನೀಡಿದರು.
ಶಿರ್ಡಿ ಡಿಗ್ರಿ ಕಾಲೇಜಿನ ಆಶೀಶ್‌ ಶೆಟ್ಟಿ ಮಾತನಾಡಿ, ಪ್ರತಿಯೊಬ್ಬರಿಗೂ ಸಾಮಾಜಿಕ ಪ್ರಜ್ಞೆಯಿರಬೇಕು. ಕೊಳಕು ಮಾಡುವ ಸಂಸ್ಕೃತಿ ನಿಲ್ಲಬೇಕು. ಎಲ್ಲರೂ ಬದುಕಿ ಬಾಳುವ ವಾತಾವರಣ ನಿರ್ಮಾಣ ಮಾಡುವುದಕ್ಕಾಗಿ ನಾವೆಲ್ಲ ಟೊಂಕಕಟ್ಟಿ ನಿಲ್ಲಬೇಕಾದ ಅನಿರ್ವಾಯತೆಯಿದೆ. ಪರಿಸರ ಪ್ರೀತಿ ಬೆಳೆಸೋಣ ಎಂದರು. ಆಗುಂಬೆಯ ಘಾಟಿಯ ಆರಂಭದಿಂದ ಸೋಮೇಶ್ವರದವರೆಗೆ ಕ್ರಿಯೇಟಿವ್‌ ಕಾಲೇಜು ಹಾಗೂ ಶಿರ್ಡಿ ಕಾಲೇಜಿನ ವಿದ್ಯಾರ್ಥಿಗಳು ಸ್ವಚ್ಛತಾ ಅಭಿಯಾನ ನಡೆಸಿದರು. ಉಪನ್ಯಾಸಕರಾದ ಚಂದ್ರಕಾಂತ ಆಚಾರ್ಯ, ಶ್ರೀನಿಧಿ, ಪ್ರಿಯಾಂಕ, ತಿಪ್ಪೇಸ್ವಾಮಿ, ಶಶಿಧರ ಭಟ್‌ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಹರೀಶ್‌, ಚ್ರೈತ್ರಾ, ಆರ್.ಎಫ್.ಓ ಗೌರವ್‌ ಹಾಗೂ ಅರಣ್ಯಾಧಿಕಾರಿಗಳು ಮತ್ತು ಶಿರ್ಡಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...

ಮಾನವೀಯ ಮೌಲ್ಯಗಳೇ ವಿವೇಕಾನಂದರ ತತ್ವ: ಡಾ. ನಿಕೇತನ

ಉಡುಪಿ, ಜ.18: ಶಾಂತಿ ಮತ್ತು ಪ್ರೀತಿಯ ಮೂಲಕ ಮಾನವ ಜನಾಂಗ ಉತ್ತಮ...

ತಾಂತ್ರಿಕ ಸಹಾಯಕರ ಹುದ್ದೆ: ಅರ್ಜಿ ಅಹ್ವಾನ

ಉಡುಪಿ, ಜ.19: ಕೃಷಿ ಇಲಾಖೆಯ ವತಿಯಿಂದ ಅನುಷ್ಟಾನಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ...

ಜ. 19-21 ರವರೆಗೆ ನಾಟಕೋತ್ಸವ ಪ್ರದರ್ಶನ

ಉಡುಪಿ, ಜ.19: ಕಾರ್ಕಳ ಯಕ್ಷ ರಂಗಾಯಣ ಇವರ ವತಿಯಿಂದ ಜನವರಿ 19...
error: Content is protected !!