Monday, November 25, 2024
Monday, November 25, 2024

ಪರಿಸರ ಸಮತೋಲನ ಕಾಪಾಡಿ: ನ್ಯಾ. ಶಾಂತವೀರ ಶಿವಪ್ಪ

ಪರಿಸರ ಸಮತೋಲನ ಕಾಪಾಡಿ: ನ್ಯಾ. ಶಾಂತವೀರ ಶಿವಪ್ಪ

Date:

ಉಡುಪಿ, ಜೂನ್ 5: ದೈನಂದಿನ ಜೀವನದಲ್ಲಿ ನಮ್ಮ ಸುತಮುತ್ತಲಿನ ಪರಿಸರದಲ್ಲಿ ಪರಿಸರ ಸ್ನೇಹಿ ಚಟುವಟಿಕೆಗಳನ್ನು ಕೈಗೊಳ್ಳುವ ಮೂಲಕ ಪರಿಸರ ಸಮತೋಲನ ಕಾಪಾಡುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಧ್ಯಕ್ಷ ಶಾಂತವೀರ ಶಿವಪ್ಪ ಹೇಳಿದರು. ಅವರು ಸೋಮವಾರ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಉಡುಪಿ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉಡುಪಿ ಇವರ ಸಹಯೋಗದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪರಿಸರ ಜಾಗೃತಿಯ ಕಾರಣ ರಾಜ್ಯದಲ್ಲಿ ಪ್ರತೀ ವರ್ಷ ಶೇ. 1.5 ರಷ್ಟು ಅರಣ್ಯದ ಬೆಳವಣಿಗೆ ಆಗುತ್ತಿದ್ದು, ಹಸಿರು ವಲಯ ಹೆಚ್ಚಳವಾಗುತ್ತಿದೆ. ಪರಿಸರ ಸಂರಕ್ಷಣೆಗಾಗಿ ಗಿಡಗಳನ್ನು ನೆಡುವಾಗ ಒಂದೇ ರೀತಿಯ ಗಿಡಗಳನ್ನು ನೆಡದೇ ಆ ಪರಿಸರಕ್ಕೆ ಸೂಕ್ತವಾದ ಹಾಗೂ ಹಣ್ಣಿನ ಗಿಡಗಳನ್ನು ನೆಟ್ಟು ಪೋಷಿಸುವ ಮೂಲಕ ಪರಿಸರ ಸಮತೋಲನ ಕಾಪಾಡಬೇಕು. ಅರಣ್ಯ ಪ್ರದಶದಲ್ಲಿ ಹಣ್ಣಿನ ಗಿಡಗಳನ್ನು ನೆಡುವುದರಿಂದ ಮಾನವ ಮತ್ತು ವನ್ಯ ಜೀವಿ ಸಂಘರ್ಷ ತಡೆಯಲು ಸಾಧ್ಯ. ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವ ಮೂಲಕ ಪ್ಲಾಸ್ಟಿಕ್ ಮಾಲಿನ್ಯ ನಿಯಂತ್ರಣ ಮಾಡಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಮಾತನಾಡಿ, ಪರಿಸರ ನಾಶದಿಂದ ಮಾನವ ಹಾಗೂ ಪ್ರಾಣಿ ಸಂಕುಲದ ನಾಶವಾಗಲಿದ್ದು, ಅಂತರ್ಜಲ ಸಂರಕ್ಷಣೆ ಮತ್ತು ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಅತ್ಯಂತ ಪ್ರಮುಖವಾದುದು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ಪ್ರಕೃತಿಯು ಮಾನವನ ಸಹಜ ಅವಶ್ಯಕತೆಗಳನ್ನು ಪೂರೈಸಲಿದೆ ಆದರೆ ದುರಾಸೆಗಳನ್ನಲ್ಲ. ಪರಿಸರ ಸಂರಕ್ಷಣೆಯ ಕಾರ್ಯಕ್ರಮಗಳಲ್ಲಿ ವ್ಯವಸ್ಥಿತ ರೀತಿಯ ಯೋಜನೆಗಳನ್ನು ರೂಪಿಸಿ, ಅದರಂತೆ ಅನುಷ್ಠಾನಗೊಳಿಸಬೇಕು. ಉಡುಪಿ ಜಿಲ್ಲೆ ನೈಸರ್ಗಿಕ ಸಮೃದ್ದಿಯಿಂದ ಕೂಡಿದ ಜಿಲ್ಲೆಯಾಗಿದ್ದು , ಜಿಲ್ಲೆಯಲ್ಲಿನ ಪರಿಸರ ಸಂರಕ್ಷಣೆಯ ಬಗ್ಗೆ ಪ್ರತಿಯೊಬ್ಬರಲ್ಲೂ ಸ್ವಯಂ ಜಾಗೃತಿ ಮೂಡಬೇಕು ಎಂದರು.

ಕಾರ್ಯಕ್ರಮದಲ್ಲಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಪ್ರಾದೇಶಿಕ ಪರಿಸರ ಅಧಿಕಾರಿ ಡಾ.ಕೆ.ಎಂ. ರಾಜು, ಕೇಂದ್ರ ಮತ್ತು ರಾಜ್ಯದಲ್ಲಿ ವಿಷನ್ ಲೈಪ್ ಕಾರ್ಯಕ್ರಮ ನಡೆಯುತ್ತಿದ್ದು, ಅದರಂತೆ ನಮ್ಮ ಜೀವನಶೈಲಿಯಲ್ಲಿ ನೀರು, ವಿದ್ಯುತ್ ನ ಮಿತಬಳಕೆ, ಸಾವಯವ ಆಹಾರ ಉತ್ಪಾದನೆ ಮತ್ತು ಬಳಕೆಯ ಮೂಲಕ ಪರಿಸರ ಸಂರಕ್ಷಣೆ ಸಾಧ್ಯವಾಗಲಿದ್ದು, ದೈನಂದಿನ ಜೀವನದಲ್ಲಿ ಪ್ಲಾಸ್ಟಿಕ್ ನ ಕಡಿಮೆ ಬಳಕೆ, ಮರುಬಳಕೆ, ನಿಷೇಧದ ಮೂಲಕ ಅದರ ದುಷ್ಪರಿಣಾಮಗಳನ್ನು ತಡೆಯಲು ಸಾಧ್ಯವಾಗಲಿದೆ ಎಂದರು.

ಪರಿಸರ ದಿನಾಚರಣೆ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಜಿಲ್ಲೆಯಲ್ಲಿ ಪರಿಸರ ಸಂರಕ್ಷಣೆಯ ಕಾರ್ಯದಲ್ಲಿ ಗಮನಾರ್ಹ ಚಟುವಟಿಕೆಗಳನ್ನು ಕೈಗೊಂಡಿರುವ ಕೋಟದ ಪಂಚವರ್ಣ ಯುವಕ ಮಂಡಲವನ್ನು ಅಭಿನಂದಿಸಲಾಯಿತು.

ಪರಿಸರ ಸಂರಕ್ಷಣೆ ಕುರಿತಂತೆ ಪ್ರತಿಜ್ಞಾ ವಿಧಿ ಭೋದಿಸಲಾಯಿತು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಗಣಪತಿ, ಜಿಲ್ಲಾ ಸ್ಕೌಟ್ ಮತ್ತು ಗೈಡ್ಸ್ ನ ಆಯುಕ್ತ ಡಾ.ವಿಜಯೇಂದ್ರ ವಸಂತ ರಾವ್ ಉಪಸ್ಥಿತರಿದ್ದರು. ಪ್ಲಾಸ್ಟಿಕ್ ಮಾಲಿನ್ಯ ಮತ್ತು ಪರಿಹಾರಗಳ ಬಗ್ಗೆ ಜೋಸೆಫ್ ಎಂ ರೆಬೆಲ್ಲೋ ವಿಶೇಷ ಉಪನ್ಯಾಸ ನೀಡಿದರು. ಸಹಾಯಕ ಪರಿಸರ ಅಧಿಕಾರಿ ಅಮೃತಾ ವಂದಿಸಿದರು. ಪರಿಸರ ದಿನಾಚರಣೆಯ ಅಂಗವಾಗಿ ಮಣಿಪಾಲದ ಎಂ.ಜೆ.ಸಿ.ಕಾಲೇಜು ಮೈದಾನದಿಂದ ರಜತಾದ್ರಿಯ ವಾಜಪೇಯಿ ಸಭಾಂಗಣದವರೆಗೆ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಪರಿಸರ ಜಾಥಾ ನಡೆಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!