ಬಾರ್ಕೂರು, ಜೂನ್ 6: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಾರ್ಕೂರು ಇಲ್ಲಿ ೨೫ ನೇ ವಾರ್ಷಿಕೋತ್ಸವ ಸಮಾರಂಭ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ವಹಿಸಿಕೊಂಡಿದ್ದರು.
ಮುಖ್ಯ ಅತಿಥಿಗಳಾಗಿ ಕಾಲೇಜು ಶಿಕ್ಷಣ ಇಲಾಖೆ ಬೆಂಗಳೂರು ನಿವೃತ್ತ ಹೆಚ್ಚುವರಿ ನಿರ್ದೇಶಕರಾದ ಪ್ರೊ. ರಾಜಶೇಖರ್ ಹೆಬ್ಬಾರ್ ಸಿ. ಮಾತನಾಡಿ, ವಿದ್ಯಾರ್ಥಿಗಳಿಗೆ ಗುರಿ ಇರಬೇಕು ಹಾಗೂ ತಂದೆ ತಾಯಿಯರಿಗೆ ಗೌರವ ಕೊಡಬೇಕೆಂದರು. ಶಾಸಕರಿಗೆ ಹಾಗೂ ಪ್ರೊ.ರಾಜಶೇಖರ್ ಹೆಬ್ಬಾರ್ ರವರಿಗೆ ಶ್ರೀಮತಿ ರುಕ್ಮಿಣಿ ಶೆಡ್ತಿ ಸಂಸ್ಥೆಯ ಪರವಾಗಿ ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಗೌರವ ಸಮರ್ಪಣೆ ಮಾಡಿ ಶುಭ ಹಾರೈಸಿದರು.
ಪ್ರಾಂಶುಪಾಲರಾದ ಪ್ರೊ. ರಮೇಶ್ ಆಚಾರ್, ಕಾಲೇಜಿನ ಸಾಂಸ್ಕೃತಿಕ ವೇದಿಕೆ ಸಂಚಾಲಕರಾದ ಡಾ. ಸ್ವರ್ಣ ಕುಮಾರಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಹರೀಶ್ ಸಿ.ಕೆ. ಉಪಸ್ಥಿತರಿದ್ದರು. ಶಿಕ್ಷಕ ರಕ್ಷಕ ಸಂಘ, ಕಾಲೇಜು ಅಭಿವೃದ್ಧಿ ಸಮಿತಿ, ಹಳೆ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.