Sunday, January 19, 2025
Sunday, January 19, 2025

ಮಲ್ಪೆ ಪಡುಕರೆ ಭಾಗಕ್ಕೆ ಅಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

ಮಲ್ಪೆ ಪಡುಕರೆ ಭಾಗಕ್ಕೆ ಅಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

Date:

ಮಲ್ಪೆ, ಜೂನ್ 7: ಉಡುಪಿ ಶಾಸಕ ಯಶ್ಪಾಲ್ ಸುವರ್ಣ ರವರು ಕಡೆಕಾರ್ ಮತ್ತು ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಕರೆ ಭಾಗಕ್ಕೆ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಂಭಾವ್ಯ ಕಡಲ್ಕೊರೆತ ಪ್ರದೇಶಗಳನ್ನು ಗುರುತಿಸಿ ಕಡಲ್ಕೊರೆತ ತಡೆಗೆ ಪೂರಕ ಕಾಮಗಾರಿಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಬಂದರು ಮತ್ತು ಮೀನುಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕುತ್ಪಾಡಿ ಪಡುಕರೆಯಲ್ಲಿ ನಿರ್ಮಾಣಗೊಂಡಿರುವ ನೂತನ ಕೊಠಡಿಗೆ ಅಂಗನವಾಡಿಯನ್ನು ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಮಲ್ಪೆ ಪಡುಕರೆಯ ನದಿದಂಡೆ ಸಂರಕ್ಷಣೆ ಕಾಮಗಾರಿಯ ಪರಿಶೀಲನೆ ನಡೆಸಿ ಶೀಘ್ರವಾಗಿ ಪೂರ್ಣಗೊಳಿಸುವಂತೆ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಮಲ್ಪೆ ಸೆಂಟ್ರಲ್ ವಾರ್ಡಿನ ಶಾಂತಿನಗರದ 21 ಕುಟುಂಬದ ಹಕ್ಕು ಪತ್ರದ ಮನವಿ ಸ್ವೀಕರಿಸಿದರು. ಕ್ರೀಡಾಂಗಣ ನಿರ್ಮಾಣಕ್ಕೆ ಸ್ಥಳ ಗುರುತಿಸಿ ಯೋಜನೆ ರೂಪಿಸುವಂತೆ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಅಧಿಕಾರಿಗಳಿಗೆ ಹಾಗೂ ಪಡುಕರೆ ಬೀಚ್ ಅಭಿವೃದ್ಧಿ ಕಾರ್ಯಗಳ ಬಗ್ಗೆ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದರು.

ಸಣ್ಣ ನೀರಾವರಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ಅರುಣ್ ಭಂಡಾರಿ, ಯುವಜನ ಸೇವಾ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಶೆಟ್ಟಿ, ಜಯರಾಜ್, ಸಹಾಯಕ ಅಭಿಯಂತರರು, ಬಂದರು ಮತ್ತು ಮೀನುಗಾರಿಕಾ ಇಲಾಖೆ, ಸಿದ್ದೇಶ್ ಪಿಡಿಒ, ಕಡೇಕಾರ್ ಗ್ರಾಮ ಪಂಚಾಯತ್, ವಸಂತಿ, ಪಿಡಿಒ, ಅಂಬಲಪಾಡಿ ಗ್ರಾಮ ಪಂಚಾಯತ್, ಅಂಬಲಪಾಡಿ ಪಂಚಾಯತ್ ಅಧ್ಯಕ್ಷರಾದ ರೋಹಿಣಿ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ರಾಜೇಂದ್ರ ಪಂದುಬೆಟ್ಟು, ನಗರಸಭಾ ಸದಸ್ಯರಾದ ವಿಜಯ ಕುಂದರ್, ಪಂಚಾಯತ್ ಸದಸ್ಯರಾದ ವಸಂತ್ ಪ್ರವೀಣ್, ವೇದಾವತಿ, ಪ್ರಮೋದ್, ಸುಭಾಷಿಣಿ, ಸ್ಥಳೀಯರಾದ ಶಂಕರ್, ಭುವನ್, ನಾಗೇಶ್ ಬಂಗೇರ, ಗಣೇಶ್ ಬಂಗೇರ, ಪುರಂದರ ಕೋಟ್ಯಾನ್, ಹೇಮಂತ್ ಖಾರ್ವಿ, ವಸುಮತೀಶ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!