ಉಡುಪಿ, ಜೂನ್ 8: ಸರಕಾರದ ಆದೇಶದಂತೆ ಈಗಾಗಲೇ ಜೂನ್ 1 ರಿಂದ ಜುಲೈ 31 ರ ವರೆಗೆ ಮೀನುಗಾರಿಕೆ ನಿಷೇಧ ಜಾರಿಯಲ್ಲಿದ್ದು, ಈ ಅವಧಿಯಲ್ಲಿ ಮೀನುಗಾರಿಕೆ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಲಾಗಿರುತ್ತದೆ. ಮಲ್ಪೆ ಬಂದರಿನಲ್ಲಿ ಬೆಂಕಿಯಿಂದ ಉಂಟಾಗುವ ಅವಘಡಗಳನ್ನು ತಡೆಯಲು ಅಗ್ನಿಶಾಮಕ ವಾಹನವು ತಿರುಗಾಡಲು ಅನುಕೂಲವಾಗುವಂತೆ ಜಟ್ಟಿಯ ಮೇಲಿರುವ ಡಿಂಗಿ, ಬಲೆ, ಪ್ಲಾಸ್ಟಿಕ್ ಕ್ರೇಟ್ಸ್ ಹಾಗೂ ಇತ್ಯಾದಿ ವಸ್ತುಗಳನ್ನು ತೆರವುಗೊಳಿಸಬೇಕು.
ಜಟ್ಟಿಯ ಮೇಲೆ ನೀರು ಸರಬರಾಜು ಮಾಡುವ ವಾಹನ ಹಾಗೂ ಕ್ರೇನ್‌ಗಳ ಓಡಾಟವನ್ನು ನಿರ್ಬಂಧಿಸಲಾಗಿದ್ದು, ಮೀನುಗಾರಿಕೆ ಇಲಾಖೆಯ ಅನುಮತಿ ಮೇರೆಗೆ ಬೆಳಗ್ಗೆ 9 ರಿಂದ ಸಂಜೆ 6 ರ ವರೆಗೆ ಬೋಟುಗಳ ದುರಸ್ತಿ ಕಾರ್ಯ ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಮಲ್ಪೆ ಮೀನುಗಾರಿಕೆ ಬಂದರು ಯೋಜನೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.