Monday, January 20, 2025
Monday, January 20, 2025

ಕೆ.ಎಂ.ಸಿ ಮಣಿಪಾಲ: ಥೆರಪಿ ಮುಗಿದ ನಂತರದ (ಆಫ್ಟರ್ ಕಂಪ್ಲೀಷನ್ ಥೆರಪಿ-ACT) ಕ್ಲಿನಿಕ್ ಪ್ರಾರಂಭ

ಕೆ.ಎಂ.ಸಿ ಮಣಿಪಾಲ: ಥೆರಪಿ ಮುಗಿದ ನಂತರದ (ಆಫ್ಟರ್ ಕಂಪ್ಲೀಷನ್ ಥೆರಪಿ-ACT) ಕ್ಲಿನಿಕ್ ಪ್ರಾರಂಭ

Date:

ಮಣಿಪಾಲ, ಜೂನ್ 9: ಭಾರತದಲ್ಲಿ ವಾರ್ಷಿಕವಾಗಿ ಕ್ಯಾನ್ಸರ್ ಹೊಂದಿರುವ 78,000 ಮಕ್ಕಳಲ್ಲಿ 80% ಕ್ಕಿಂತ ಹೆಚ್ಚು ಮಕ್ಕಳು ಪೂರ್ಣ ಗುಣಮುಖವಾಗುವ ಅವಕಾಶವನ್ನು ಹೊಂದಿದ್ದಾರೆ. ಕ್ಯಾನ್ಸರ್ ನಿಂದ ಬದುಕುಳಿದವರು ಚಿಕಿತ್ಸೆಯ ತಡ ಪರಿಣಾಮಗಳು ಮತ್ತು ಮಾನಸಿಕ ಸಮಸ್ಯೆಗಳಿಗೆ ಸಂಬಂಧಿಸಿದ ವಿಶಿಷ್ಟ ಸಮಸ್ಯೆಗಳನ್ನು ಎದುರಿಸುವುದರಿಂದ, ಕ್ಯಾನ್ಸರ್ ಚಿಕಿತ್ಸೆಯಿಂದ ಬದುಕುಳಿದವರಿಗೆ ವಿಶೇಷ ಚಿಕಿತ್ಸಾಲಯವನ್ನು ಹೊಂದಿರುವುದು ಮುಖ್ಯವಾಗಿದೆ.

ಕ್ಯಾನ್ಸರ್ ಬದುಕುಳಿದವರಿಗೆ ಸಮಗ್ರ ಆರೈಕೆ ಮತ್ತು ಸಮಗ್ರ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳಲು, ಥೆರಪಿ ಮುಗಿದ ನಂತರದ (ಆಫ್ಟರ್ ಕಂಪ್ಲೀಷನ್ ಥೆರಪಿ-ACT) ಕ್ಲಿನಿಕ್ ಅನ್ನು ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗ, ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಮಣಿಪಾಲದಲ್ಲಿ ಎನ್‌ಜಿಒ ಸಂಸ್ಥೆ – ಇಂಡಿಯನ್ ಕ್ಯಾನ್ಸರ್ ಸೊಸೈಟಿ, ಮುಂಬೈ ಸಹಯೋಗದೊಂದಿಗೆ ಪ್ರಾರಂಭಿಸಲಾಯಿತು.

ವಿಭಾಗದ ಸಹ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ. ವಾಸುದೇವ ಭಟ್ ಕೆ ಅತಿಥಿಗಳನ್ನು ಸ್ವಾಗತಿಸಿ ಮಾತಾನಾಡುತ್ತಾ, ಬಾಲ್ಯದ ಕ್ಯಾನ್ಸರ್ ಪೀಡಿತರು ನಮ್ಮ ದೇಶದ ಭವಿಷ್ಯದ ಪ್ರಜೆಗಳಾಗಿದ್ದು, ಅವರು ಸಾಮಾನ್ಯ, ಆರೋಗ್ಯಕರ ಮತ್ತು ಫಲದಾಯಕ ಜೀವನ ನಡೆಸುವುದು ಮುಖ್ಯ ಎಂದು ಒತ್ತಿ ಹೇಳಿದರು.

ಕಾರ್ಯಕ್ರಮದ ಅತಿಥಿಯಾಗಿದ್ದ ವೈದ್ಯಕೀಯ ವ್ಯವಹಾರ, ಭಾರತೀಯ ಕ್ಯಾನ್ಸರ್ ಸೊಸೈಟಿ ಮುಂಬೈ ನ ಡೆಪ್ಯುಟಿ ಡೈರೆಕ್ಟರ್ ಜನರಲ್ ಡಾ. ವಂದನಾ ಧಮಾನ್ಕರ್ ಕ್ಲಿನಿಕ್ ಅನ್ನು ಅಧಿಕೃತವಾಗಿ ಉದ್ಘಾಟಿಸಿದರು. ಅವರು ಮಾತನಾಡುತ್ತಾ, ಭಾರತೀಯ ಕ್ಯಾನ್ಸರ್ ಸೊಸೈಟಿ, ಮುಂಬೈ ಕ್ಯಾನ್ಸರ್ ಚಿಕಿತ್ಸೆಯಿಂದ ಬದುಕುಳಿದವರ ಯೋಗಕ್ಷೇಮ ನೋಡಿಕೊಳ್ಳಲು ಪ್ರತ್ಯೇಕ ವಿಭಾಗವನ್ನು ಹೊಂದಿದ್ದು ತಡವಾದ ಪರಿಣಾಮಗಳಿಗೆ ಚಿಕಿತ್ಸಾ ನಿಧಿಗಳನ್ನು ಒದಗಿಸುತ್ತಿದೆ. ಇಂತಹ ವಿಶೇಷ ಚಿಕಿತ್ಸಾಲಯಗಳು ಭಾರತದಲ್ಲಿ ಕೆಲವೇ ಕೇಂದ್ರಗಳಲ್ಲಿ ಅಸ್ತಿತ್ವದಲ್ಲಿವೆ ಮತ್ತು ಇದು ಬಾಲ್ಯದ ಕ್ಯಾನ್ಸರ್ ರೋಗಿಗಳಿಗೆ ಸಮಗ್ರ ಆರೈಕೆಯನ್ನು ಪೂರ್ಣಗೊಳಿಸುತ್ತದೆ ಎಂದರು.

ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಎಮಿನ್ ರಹಿಮಾನ್ ಮತ್ತು ಮನೋವೈದ್ಯಕೀಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಅಮೃತವರ್ಷಿಣಿ ಅವರು ಇಂತಹ ವಿಶೇಷ ಚಿಕಿತ್ಸಾಲಯಗಳ ಅಗತ್ಯತೆಯ ಕುರಿತು ಸ್ಥೂಲ ವಿವರಣೆ ನೀಡಿದರು. ಕಾರ್ಯಕ್ರಮದಲ್ಲಿ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಡಾ. ಪದ್ಮರಾಜ್ ಹೆಗ್ಡೆ ಮತ್ತು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಉಪಸ್ಥಿತರಿದ್ದರು. ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಅರ್ಚನಾ ಎಂ.ವಿ ಕಾರ್ಯಕ್ರಮ ನಿರೂಪಿಸಿದರು, ವಿಭಾಗದ ಸ್ಥಾನಿಕ ವೈದ್ಯೆ ಡಾ. ಸ್ವಾತಿ ಪಿ.ಎಂ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!