Sunday, January 19, 2025
Sunday, January 19, 2025

ಉಡುಪಿ ಜಿಲ್ಲೆ: ಜೂನ್ 12-14 ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಉಡುಪಿ ಜಿಲ್ಲೆ: ಜೂನ್ 12-14 ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Date:

ಉಡುಪಿ, ಜೂನ್ 9: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಜೂನ್ 12 ರಿಂದ 14 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 110/33/11 ಕೆ.ವಿ ವಿದ್ಯುತ್ ಸ್ಥಾವರ ಮಣಿಪಾಲದಲ್ಲಿ 110 ಕೆ.ವಿ ಬಸ್‌ನ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಸದರಿ ಸ್ಥಾವರದಿಂದ ಹೊರಡುವ 110 ಕೆ.ವಿ ನಿಟ್ಟೂರು, 110 ಕೆ.ವಿ ಬ್ರಹ್ಮಾವರ, 33 ಕೆ.ವಿ ಶಿರ್ವ, 33 ಕೆ.ವಿ ಕುಂಜಿಬೆಟ್ಟು 1 ಮತ್ತು 2 ಮಾರ್ಗಗಳಲ್ಲಿ, 33 ಕೆ.ವಿ ಮಲ್ಪೆ/ಉದ್ಯಾವರ ಹಾಗೂ ಎಲ್ಲಾ 11 ಕೆ.ವಿ ಫೀಡರಿನಲ್ಲಿ ಉಡುಪಿ, ಕುಂಜಿಬೆಟ್ಟು, ನಿಟ್ಟೂರು, ಮಲ್ಪೆ, ಉದ್ಯಾವರ, ಶಿರ್ವ, ಬ್ರಹ್ಮಾವರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಜೂನ್ 12 ರಂದು ಮಧ್ಯಾಹ್ನ 2 ರಿಂದ ಸಂಜೆ 6 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

110/11 ಕೆ.ವಿ ಹಾಲಾಡಿ ವಿದ್ಯುತ್ ಉಪಕೇಂದ್ರದಲ್ಲಿ 110 ಕೆ.ವಿ ಬಸ್ ಮತ್ತು ಇದಕ್ಕೆ ಸಂಬಂಧಿಸಿದ ಉಪಕರಣಗಳ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ 110/11 ಕೆ.ವಿ ಹಾಲಾಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಶಂಕರನಾರಾಯಣ, ಆವರ್ಸೆ, ಬಿದ್ಕಲ್ಕಟ್ಟೆ, ಬೆಳ್ವೆ, ವಾರಾಹಿ ಮತ್ತು ಹೈಕಾಡಿ ಮಾರ್ಗಗಳಲ್ಲಿ ಅಮಾಸೆಬೈಲು, ಕುಳುಂಜೆ, ಶಂಕರನಾರಾಯಣ, ಹಾಲಾಡಿ-76, ಮಚ್ಚಟ್ಟು, ಹಾಲಾಡಿ-28, ಹೆಂಗವಳ್ಳಿ, ಮಡಾಮಕ್ಕಿ, ಸಿದ್ದಾಪುರ, ಉಳ್ಳೂರು-74, ಕಕ್ಕುಂಜೆ, ಹೆಸ್ಕತ್ತೂರು, ಯಡಾಡಿ-ಮತ್ಯಾಡಿ, ಹಳ್ಳಾಡಿ-ಹರ್ಕಾಡಿ, ಹಾರ್ದಳ್ಳಿ-ಮಂಡಳ್ಳಿ, ಬೆಳ್ವೆ, ಮಡಾಮಕ್ಕಿ, ಅಲ್ಬಾಡಿ ಮತ್ತು ಶೇಡಿಮನೆ, ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜೂನ್ 13 ರಂದು ಬೆಳಗ್ಗೆ 10 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಮಾಡಲಾಗುವುದು.

110/11 ಕೆ.ವಿ ಹಾಲಾಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಆವರ್ಸೆ, ಬಿದ್ಕಲ್ಕಟ್ಟೆ, ಬೈಲೂರು, ಬೆಳ್ವೆ ಮತ್ತು ಹೈಕಾಡಿ ಮಾರ್ಗಗಳಲ್ಲಿ ಪಾಲನಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬಿದ್ಕಲ್ಕಟ್ಟೆ, ಕುಳಂಜೆ, ಶಂಕರನಾರಾಯಣ, ಹಾಲಾಡಿ, ಮೊಳಹಳ್ಳಿ, ಹಾರ್ದಳ್ಳಿ-ಮಂಡಳ್ಳಿ ಯಡಾಡಿ-ಮತ್ಯಾಡಿ, ರಟ್ಟಾಡಿ, ಅಮಾಸೆಬೈಲು, ಮಚ್ಚಟ್ಟು, ಹಳ್ಳಾಡಿ-ಹರ್ಕಾಡಿ, ಅಲ್ಬಾಡಿ, ಆರ್ಡಿ, ಶೇಡಿಮನೆ, ಹೈಕಾಡಿ, ಗೋಳಿಯಂಗಡಿ, ಬೆಳ್ವೆ, ಹೆಂಗವಳ್ಳಿ, ಮಡಾಮಕ್ಕಿ, ಕಕ್ಕುಂಜೆ, ಹಾಲಾಡಿ-76, ಹೆಸ್ಕತ್ತೂರು, ಸೂರ್ಗೋಳಿ, ಬೈಲೂರು, ಕಾಜಾಡಿ ಮತ್ತು ಕೊಂಡಳ್ಳಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜೂನ್ 13 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

220/110/11ಕೆವಿ ಕೇಮಾರ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ. ವಿ ಫೀಡರ್‌ಗಳಾದ ನಿಟ್ಟೆ, ಕಲ್ಯಾ, ಲೆಮಿನಾ, ನಿಟ್ಟೆ ವಾಟರ್ ಸಪ್ಲೈ, 110/11 ಕೆ.ವಿ ಕಾರ್ಕಳ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಪದವು ಫೀಡರ್ ಹಾಗೂ 110/11 ಕೆ.ವಿ ಬೆಳ್ಮಣ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆ.ವಿ ಫೀಡರ್‌ಗಳಾದ ಮುಂಡ್ಕೂರು, ಬೋಳ ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಿಟ್ಟೆ, ನಿಟ್ಟೆ ಕಾಲೇಜು, ನಿಟ್ಟೆ ವಾಟರ್ ಸಫ್ಲೈ, ಬೊರ್ಗಲ್ ಗುಡ್ಡೆ, ಹಾಮಾಜೆ, ಕುಂಟಾಡಿ, ಕೈರಬೆಟ್ಟು, ನಿಟ್ಟೆ ಪಂಚಾಯತ್, ನಿಟ್ಟೆ ಮಸೀದಿ, ಲೆಮಿನಾ ಇಂಡಸ್ಟ್ರಿಸ್, ದೂಪದಕಟ್ಟೆ, ಕೆಮ್ಮಣ್ಣು, ನೆಲ್ಲಿಗುಡ್ಡೆ, ಬಾರಾಡಿ, ಬೇಲಾಡಿ, ಕಾಂತಾವರ, ಕಲ್ಯಾ, ಮುಂಡ್ಕೂರು, ಕಾಂಜರಕಟ್ಟೆ, ಸಚ್ಚರಿಪೇಟೆ, ಮುಲ್ಲಡ್ಕ, ಕೋಡಿಮಾರು, ಸಂಕಲಕರಿಯ, ನಾನಿಲ್ ತಾರ್, ಜಾರಿಗೆಕಟ್ಟೆ, ಅಂಬರಾಡಿ, ಬೋಳ ಪಂಚಾಯತ್, ಪಿಲಿಯೂರು, ಕೆರೆಕೋಡಿ, ಒಂಜಾರೆ ಕಟ್ಟೆ, ಬಾರೆಬೈಲು, ಕೆಂಪುಜೋರ, ಪುಕ್ಕಲ್ಲು, ಗುಂಡ್ಯಡ್ಕ, ಕಲ್ಲಂಬಾಡಿ, ಪದವು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜೂನ್ 13 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

33/11 ಕೆ.ವಿ ಹೆಬ್ರಿ ಉಪವಿದ್ಯುತ್ ಸ್ಥಾವರದಿಂದ ಹೊರಡುವ 11 ಕೆ.ವಿ ಮುದ್ರಾಡಿ, ಚಾರ, ಕಳ್ತೂರು ಫೀಡರಿನಲ್ಲಿ ವ್ಯವಸ್ಥಾ ಸುಧಾರಣಾ ಕಾಮಗಾರಿ ಹಾಗೂ ಮಾರ್ಗನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮುದ್ರಾಡಿ, ಮುನಿಯಾಲು, ಬಚ್ಚಪ್ಪು, ಕಬ್ಬಿನಾಲೆ, ಮಂಡಾಡಿಜೆಡ್ಡು, ಕಳ್ತೂರು, ಸಂತೆಕಟ್ಟೆ, ಕರ್ಜೆ, ಕುರ್ಪಾಡಿ, ಕನ್ಯಾನ, ಚಾರ, ಹೊಸೂರು, ಕೆರೆಬೆಟ್ಟು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜೂನ್ 14 ರಂದು ಬೆಳಗ್ಗೆ 9 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಾನವೀಯ ಮೌಲ್ಯಗಳೇ ವಿವೇಕಾನಂದರ ತತ್ವ: ಡಾ. ನಿಕೇತನ

ಉಡುಪಿ, ಜ.18: ಶಾಂತಿ ಮತ್ತು ಪ್ರೀತಿಯ ಮೂಲಕ ಮಾನವ ಜನಾಂಗ ಉತ್ತಮ...

ತಾಂತ್ರಿಕ ಸಹಾಯಕರ ಹುದ್ದೆ: ಅರ್ಜಿ ಅಹ್ವಾನ

ಉಡುಪಿ, ಜ.19: ಕೃಷಿ ಇಲಾಖೆಯ ವತಿಯಿಂದ ಅನುಷ್ಟಾನಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ...

ಜ. 19-21 ರವರೆಗೆ ನಾಟಕೋತ್ಸವ ಪ್ರದರ್ಶನ

ಉಡುಪಿ, ಜ.19: ಕಾರ್ಕಳ ಯಕ್ಷ ರಂಗಾಯಣ ಇವರ ವತಿಯಿಂದ ಜನವರಿ 19...

ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ

ಉಡುಪಿ, ಜ.19: ರಾಷ್ಟ್ರೀಯ ಹೆದ್ದಾರಿ 169 ಎ ರ ಉಡುಪಿ ನಗರ...
error: Content is protected !!