Sunday, January 19, 2025
Sunday, January 19, 2025

ಕೆ.ಎಂ.ಸಿ ಮಣಿಪಾಲ: ಹಾರ್ವರ್ಡ್ ಮೆಡಿಕಲ್ ಸ್ಕೂಲ್ ಬೋಸ್ಟನ್‌ನಿಂದ ಅನುಮೋದನೆ

ಕೆ.ಎಂ.ಸಿ ಮಣಿಪಾಲ: ಹಾರ್ವರ್ಡ್ ಮೆಡಿಕಲ್ ಸ್ಕೂಲ್ ಬೋಸ್ಟನ್‌ನಿಂದ ಅನುಮೋದನೆ

Date:

ಮಣಿಪಾಲ, ಜೂನ್ 10: ಅಮೇರಿಕನ್ ಪ್ರತಿಷ್ಠಿತ ಆಸ್ಪತ್ರೆ ಮ್ಯಾಸಚೂಸೆಟ್ಸ್ ಜನರಲ್ ಆಸ್ಪತ್ರೆ, ಹಾರ್ವರ್ಡ್ ಮೆಡಿಕಲ್ ಸ್ಕೂಲ್ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಗ್ಯಾಸ್ಟ್ರೋಎಂಟರಾಲಜಿ ಹಾಗೂ ಹೆಪಟಾಲಜಿ ವಿಭಾಗದೊಂದಿಗೆ ಸಹಯೋಗಕ್ಕೆ ಸಹಿ ಹಾಕಿದೆ. ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಈ ಗ್ಯಾಸ್ಟ್ರೋಇಂಟೆಸ್ಟಿನಲ್ ಎಂಡೋಸ್ಕೋಪಿ ಘಟಕವನ್ನು ಭಾರತಕ್ಕೆ ಬರುವ ಅಂತರಾಷ್ಟ್ರೀಯ ವೈದ್ಯರಿಗೆ ತರಬೇತಿ ನೀಡಲು ಮ್ಯಾಸಚೂಸೆಟ್ಸ್ ಜನರಲ್ ಆಸ್ಪತ್ರೆ, ಹಾರ್ವರ್ಡ್ ಮೆಡಿಕಲ್ ಸ್ಕೂಲ್, ಬೋಸ್ಟನ್ ಅನುಮೋದಿಸಿದೆ.

ಕೆಎಂಸಿ ಮತ್ತು ಹಾರ್ವರ್ಡ್ ಮೆಡಿಕಲ್ ಸ್ಕೂಲ್, ಬೋಸ್ಟನ್ ನಡುವೆ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ವಿನಿಮಯವನ್ನು ಹೊಂದುವ ಪ್ರತಿಷ್ಠಿತ ಕ್ಷಣ ಇದಾಗಲಿದೆ. ಮಾಹೆ ಮಣಿಪಾಲದ ಕುಲಪತಿಗಳಾದ ಲೆಫ್ಟಿನೆಂಟ್ ಜನರಲ್ (ಡಾ.) ಎಂ.ಡಿ.ವೆಂಕಟೇಶ್, ಮತ್ತು ಸಹ ಕುಲಪತಿಗಳಾದ ಡಾ. ಶರತ್ ಕುಮಾರ್ ರಾವ್, ಅವರು ಜಂಟಿಯಾಗಿ ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಡಾ. ಶಿರನ್ ಶೆಟ್ಟಿ, ಹಾಗೂ ವಿಭಾಗದ ಘಟಕ ಮುಖ್ಯಸ್ಥರುಗಳಾದ ಡಾ. ಗಣೇಶ್ ಪೈ ಮತ್ತು ಡಾ. ಗಣೇಶ್ ಭಟ್ ಅವರಿಗೆ ಅನುಮೋದನೆ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು.

ಮಾಹೆ ಮಣಿಪಾಲದ ಬೋಧನಾ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ವೇಣುಗೋಪಾಲ್, ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ, ಮಾಹೆ ಮಣಿಪಾಲದ ಅಂತಾರಾಷ್ಟ್ರೀಯ ಸಹಯೋಗಗಳು ಇದರ ನಿರ್ದೇಶಕರಾದ ಡಾ. ಕರುಣಾಕರ್ ಎ ಕೋಟೆಗಾರ್, ಡಾ. ಸಿಂಧೂರ ಲಕ್ಷ್ಮಿ ಮತ್ತು ಮಾಹೆ ಮಣಿಪಾಲದ ಮಾಧ್ಯಮ ಹಾಗೂ ಸಂವಹನ ವಿಭಾಗದ ಉಪನಿರ್ದೇಶಕರಾದ ಸಚಿನ್ ಕಾರಂತ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!