Friday, September 20, 2024
Friday, September 20, 2024

ಕಲ್ಯಾಣಪುರ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣ

ಕಲ್ಯಾಣಪುರ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣ

Date:

ಕಲ್ಯಾಣಪುರ, ಜೂನ್ 11: ಕಲ್ಯಾಣಪುರ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥಕ್ಕಾಗಿ ಪ್ರಥಮ ಬಾರಿಗೆ ಶ್ರೀನಿವಾಸ ಕಲ್ಯಾಣ ನಡೆಯಿತು. ಧಾರ್ಮಿಕ ಪೂಜಾ ವಿಧಾನಗಳನ್ನು ಚೇಂಪಿ ಶ್ರೀಕಾಂತ್ ಭಟ್ ನೇತೃತ್ವದಲ್ಲಿ ನಡೆಯಿತು. ಸಾಮೂಹಿಕ ಪ್ರಾರ್ಥನೆ, ನವಗ್ರಹ ಹೋಮ, ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ಭಜನಾ ಕಾರ್ಯಕ್ರಮ ನಡೆಯಿತು.

ಸಂಜೆ ಶ್ರೀ ಸಂಸ್ಥಾನ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿ ದೇವಳಕ್ಕೆ ಭೇಟಿ ನೀಡಿ ಆಶೀರ್ವಚನ ನೀಡಿದರು. ಶ್ರೀಗಳನ್ನು ಪೂರ್ಣ ಕುಂಭ ಸ್ವಾಗತಿಸಿ, ಪಾದ ಪೂಜೆ ನಡೆಯಿತು. ದೇವಳದ ಜೀರ್ಣೋದ್ಧಾರದ ಬಗ್ಗೆ ಮನವಿ ಪತ್ರ ಬಿಡುಗಡೆಗೊಳಿಸಿದ ಕಾಶೀ ಮಠಾಧೀಶರು, ಶ್ರೀನಿವಾಸ ಕಲ್ಯಾಣದಿಂದ ದೇವಾಲಯದ ಜೀರ್ಣೋದ್ಧಾರ ಕೆಲಸ ಶೀಘ್ರ ಪೂರ್ಣಗೊಂಡು ಭಕ್ತರ ಕಲ್ಯಾಣವಾಗಲಿ ಎಂದು ಆಶೀರ್ವಚನ ನೀಡಿದರು.

ದೇವಳದ ಆಡಳಿತ ಮೊಕ್ತೇಸರ ಅನಂತಪದ್ಮನಾಭ ಕಿಣಿ, ಜಯದೇವ ಭಟ್, ಗಣಪತಿ ಭಟ್, ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಕೆ. ಮುರಳೀಧರ ಬಾಳಿಗಾ, ಟಿ. ಅಶೋಕ್ ಮಾಧವ ಪೈ, ಅರವಿಂದ ಬಾಳಿಗಾ, ಸುದೇಶ್ ಭಟ್, ಕಾಶೀನಾಥ್ ಭಟ್, ರಮೇಶ ಭಟ್, ರಮಾನಾಥ್ ಶಾನುಭೋಗ್, ಜಿ.ಎಸ್.ಬಿ ಸಭಾ ಸದಸ್ಯರು, ಮಹಿಳಾ ಮತ್ತು ಯುವಕ ಮಂಡಳಿಯ ಸದಸ್ಯರು, ಸಮಾಜ ಬಾಂಧವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!