ಶಿರ್ವ, ಜೂನ್ 12: ಜಿಲ್ಲಾ ಸಂಚಾರಿ ನೇತ್ರ ಘಟಕ ಉಡುಪಿ ಜಿಲ್ಲೆ ಇವರ ವತಿಯಿಂದ ಶಿರ್ವ ಸಮುದಾಯ ಆರೋಗ್ಯ ಕೇಂದ್ರ ವ್ಯಾಪ್ತಿಯ ಬಂಟಕಲ್‌ನಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು. ಸದರಿ ಶಿಬಿರದಲ್ಲಿ 193 ಮಂದಿಗೆ ಕಣ್ಣಿನ ತಪಾಸಣೆ ನಡೆಸಲಾಗಿದ್ದು, 69 ಮಂದಿಗೆ ಕನ್ನಡಕವನ್ನು ಉಚಿತವಾಗಿ ನೀಡಲಾಯಿತು.
ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಆಯ್ಕೆಯಾದ 9 ಮಂದಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗುವುದು. ಶಿಬಿರದಲ್ಲಿ ಜಿಲ್ಲಾ ಸಂಚಾರಿ ನೇತ್ರ ಘಟಕದ ನೇತ್ರತಜ್ಞ ಡಾ. ನಿತ್ಯಾನಂದ ನಾಯಕ್, ಆರ್.ಬಿ.ಎಸ್.ಕೆ ತಂಡದ ನೇತ್ರ ಸಹಾಯಕಿ ಸೌಮ್ಯ ಹಾಗೂ ಹರ್ಷ ಮತ್ತು ಇತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.