Tuesday, July 28, 2026
Tuesday, July 28, 2026

ಗಿರೀಶ್ ಕಾಸರವಳ್ಳಿ ಅವರಿಗೆ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ‘ವಿಶ್ವಪ್ರಭಾ’ ಪುರಸ್ಕಾರ

ಗಿರೀಶ್ ಕಾಸರವಳ್ಳಿ ಅವರಿಗೆ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ‘ವಿಶ್ವಪ್ರಭಾ’ ಪುರಸ್ಕಾರ

Date:

ಉಡುಪಿ: ಕನ್ನಡ, ನಾಡು-ನುಡಿ, ಸಂಸ್ಕೃತಿಗೆ ಅನನ್ಯ ಸೇವೆ ಸಲ್ಲಿಸಿರುವ ಕಲಾವಿದರಿಗೆ ಉಡುಪಿ ವಿಶ್ವನಾಥ ಶೆಣೈ ಹಾಗೂ ಪ್ರಭಾವತಿ ವಿಶ್ವನಾಥ ಶೆಣೈ ಇವರ ಪ್ರಾಯೋಜಕತ್ವದಲ್ಲಿ ಪ್ರತಿವರ್ಷ ಪ್ರದಾನ ಮಾಡುತ್ತಿರುವ ‘ವಿಶ್ವಪ್ರಭಾ ಪುರಸ್ಕಾರ’ ಕ್ಕೆ ಈ ವರ್ಷ ಕನ್ನಡದ ಹೆಸರಾಂತ ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿಯವರು ಪಾತ್ರರಾಗಿದ್ದಾರೆ.

ಕನ್ನಡ ಸಿನಿಮಾ ಜಗತ್ತಿನಲ್ಲಿ ಈಗಾಗಲೇ 15 ಚಲನಚಿತ್ರಗಳನ್ನು ನಿರ್ದೇಶಿಸಿರುವ ಕಾಸರವಳ್ಳಿಯವರು ತಮ್ಮ ಅಷ್ಟೂ ಚಲನಚಿತ್ರಗಳಿಗೆ ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದಿರುವುದು ಅವರ ಅಸಾಧಾರಣ ಪ್ರತಿಭೆಗೆ ಸಾಕ್ಷಿ. ಹದಿನಾರು ಬಾರಿ ರಾಷ್ಟ್ರಪತಿಯವರಿಂದ ‘ಕಮಲ ಪತ್ರ’ ಪ್ರಶಸ್ತಿಯನ್ನು ಪಡೆದಿರುವ ಇವರು, ನಾಲ್ಕು ಬಾರಿ ‘ಸ್ವರ್ಣಕಮಲ’ ಪ್ರಶಸ್ತಿಯನ್ನು ಪಡೆದಿರುತ್ತಾರೆ .

ಇದೇ ಬರುವ ಜನವರಿ 31, 2022 ರಂದು ಉಡುಪಿಯ ಎಂ.ಜಿ.ಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ‘ವಿಶ್ವಪ್ರಭಾ ಪುರಸ್ಕಾರ -2022’ ವನ್ನು ಒಂದು ಲಕ್ಷದ ಗೌರವಧನ ಸಹಿತ ಪ್ರಶಸ್ತಿ ಫಲಕದೊಂದಿಗೆ ಗಿರೀಶ್ ಕಾಸರವಳ್ಳಿಯವರಿಗೆ ಪ್ರದಾನ ಮಾಡಲಾಗುವುದು ಎಂದು ವಿಶ್ವಪ್ರಭಾ ಪುರಸ್ಕಾರದ ಸಂಚಾಲಕರಾಗಿರುವ ಮರವಂತೆ ನಾಗರಾಜ್ ಹೆಬ್ಬಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕರು ಗೌರವಾಧ್ಯಕ್ಷರಾದ ವಿಶ್ವನಾಥ ಶೆಣೈ, ಅಧ್ಯಕ್ಷರಾದ ಪ್ರೊ. ಶಂಕರ್, ಪ್ರಧಾನ ಕಾರ್ಯದರ್ಶಿ ಗಿರೀಶ್ ತಂತ್ರಿ ಹಾಗೂ ಸಂಚಾಲಕರಾದ ರವಿರಾಜ್ ಎಚ್.ಪಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!