ಮಣಿಪಾಲ, ಜೂನ್ 13: ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ‘ಋಷ್ಯರ್ಚ-2023’ ವಿಚಾರ ಸಂಕಿರಣ ನಡೆಯಿತು.
ಸಂಸ್ಥೆಯ ಪ್ರಾಂಶುಪಾಲರಾದ ಡಾ.ಸತ್ಯನಾರಾಯಣ ಭಟ್, ಸಂಪನ್ಮೂಲ ವ್ಯಕ್ತಿಗಳಾದ ಡಾ. ಗಿರೀಶ್ ಕೆ.ಜೆ., ಡಾ. ಸುಬ್ರಹ್ಮಣ್ಯ ಪದ್ಯಾಣ, ಡಾ. ಶ್ರೀವತ್ಸ ಹಾಗೂ ಸಂಸ್ಥೆಯ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥರಾದ ಡಾ. ಚಂದ್ರಕಾಂತ್ ಭಟ್, ಡಾ. ಆಶಾ ಕಾಮತ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ 150ಕ್ಕೂ ಹೆಚ್ಚು ಆಯುರ್ವೇದ ಸ್ನಾತಕೋತ್ತರ ವಿದ್ಯಾರ್ಥಿಗಳು ವಿವಿಧ ಕಾಲೇಜಿನಿಂದ ಭಾಗವಹಿಸಿದರು.