ಉಡುಪಿ, ಜೂನ್ 14: ಉಡುಪಿ ಲೋಕಾಯುಕ್ತ ಪೊಲೀಸ್ ವಿಭಾಗದ ವತಿಯಿಂದ ಕಾರ್ಕಳ ತಾಲೂಕು ಕಚೇರಿಯಲ್ಲಿ ಬುಧವಾರ ಸಾರ್ವಜನಿಕ ಅಹವಾಲು ಕಾರ್ಯಕ್ರಮ ನಡೆಯಿತು. ಕರ್ನಾಟಕ ಲೋಕಾಯುಕ್ತ ಉಡುಪಿ ವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ಕೆ.ಸಿ., ಪೊಲೀಸ್ ನಿರೀಕ್ಷಕರಾದ ಜಯರಾಮ ಡಿ.ಗೌಡ ಹಾಗೂ ರಫೀಕ್ ಎಂ., ಕಾರ್ಕಳ ತಾಲೂಕು ತಹಶೀಲ್ದಾರ್ ಬಿ.ಅನಂತ ಶಂಕರ್, ಕಾರ್ಕಳದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಶ್ರೀನಿವಾಸ ಕಾರ್ಕಳ, ಕಾರ್ಕಳದ ಸಹಾಯಕ ಕೃಷಿ ನಿರ್ದೇಶಕ ಸತೀಶ್.ಬಿ., ವಾಣಿಜ್ಯ ತೆರಿಗೆಯ ಸಹಾಯಕ ಆಯುಕ್ತ ರಾಜಾರಾಮ.ಹೆಚ್.ಎ., ತಾಲೂಕು ಪಂಚಾಯತ್ ವ್ಯವಸ್ಥಾಪಕ ಹರೀಶ್.ಕೆ.ಬಿ., ಕಾರ್ಕಳ ತಾಲೂಕು ಆರೋಗ್ಯಾಧಿಕಾರಿ ಡಾ. ಕೃಷ್ಣಾನಂದ ಶೆಟ್ಟಿ, ಪಶುಪಾಲನಾ ಇಲಾಖೆಯ ಡಾ. ಕೆ.ಬಿ ಸುನೀಲ್, ನಿಟ್ಟೆ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ವಿನಾಯಕ ಕೆ.ಕಾಮತ್, ಕಾರ್ಕಳ ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸದಾನಂದ ನಾಯ್ಕ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಅಹವಾಲು ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಸ್ವೀಕರಿಸಲಾದ ಒಟ್ಟು 7 ಅಹವಾಲುಗಳನ್ನು ಸ್ಥಳದಲ್ಲಿ ಇತ್ಯರ್ಥಪಡಿಸಲಾಯಿತು. ಮಳೆಗಾಲ ಪ್ರಾರಂಭವಾಗಿದ್ದು ಸಾಂಕ್ರಮಿಕ ಕಾಯಿಲೆಗಳು ಹರಡುವ ಸಾಧ್ಯತೆಯಿರುವುದರಿಂದ ಸೂಕ್ತ ಮುನ್ನಚ್ಚೆರಿಕೆ ವಹಿಸುವಂತೆ ಹಾಗೂ ಕೃಷಿ ಸಂಬಂಧ ಚಟುವಟಿಕೆಗಳು ಪ್ರಾರಂಭವಾಗಿದ್ದು ರೈತರಿಗೆ ಬಿತ್ತನೆ ಬೀಜ ರಸಗೊಬ್ಬರಗಳು ಸಕಾಲದಲ್ಲಿ ದೊರಕಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.