ಬ್ರಹ್ಮಾವರ, ಜೂನ್ 15: ರುಡ್ ಸೆಟ್ ಸಂಸ್ಥೆಯಲ್ಲಿ ಕಲಿಯುವಂತಹ ಇಚ್ಚಾಶಕ್ತಿ ಇದ್ದರೆ, ಕಲಿಕೆ ಸುಲಭ. ನಿಮ್ಮ ಅಭಿರುಚಿಗೆ ಸರಿಯಾದ ಮಾಹಿತಿ, ಮಾರ್ಗದರ್ಶನ ನೀಡಿ ನಿಮ್ಮನ್ನು ಸುಂದರ ಮೂರ್ತಿಯನ್ನಾಗಿ ರೂಪಿಸುತ್ತಾರೆ ಎಂದು ಪಶು ಇಲಾಖೆಯ ನಿವೃತ್ತ ಉಪನಿರ್ದೇಶಕ ವೈದ್ಯಾಧಿಕಾರಿಗಳಾದ ಡಾ. ಗುರುರಾಜ್ ಮನೋಳಿ ಅಭಿಪ್ರಾಯಪಟ್ಟರು.
ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯಲ್ಲಿ 30 ದಿನಗಳ ಕಾಲ ನಡೆಯಲಿರುವ ಗೃಹೋಪಯೋಗಿ ವಿದ್ಯುತ್ ಉಪಕರಣಗಳ ದುರಸ್ತಿ ತರಬೇತಿಯನ್ನು ಉದ್ಘಾಟಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಲಕ್ಷ್ಮೀಶ ಎ.ಜಿ ಮಾತನಾಡಿ, ಇಂದಿನ ದಿನಗಳಲ್ಲಿ ನಾವೆಲ್ಲರೂ ವಿದ್ಯುತ್ ಉಪಕರಣಗಳ ಮೇಲೆ ಅವಲಂಬಿತರಾಗಿದ್ದೇವೆ. ಹಾಗಾಗಿ ಈ ಕ್ಷೇತ್ರದಲ್ಲಿ ಹೆಚ್ಚಿನ ಅವಕಾಶವಿದೆ ಎಂದರು. ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಕೆ.ಕರುಣಾಕರ ಜೈನ್ ಸ್ವಾಗತಿಸಿ, ತರಬೇತಿಯ ಕುರಿತು ಮಾತನಾಡಿದರು. ಹಿರಿಯ ಕಛೇರಿ ಸಹಾಯಕರಾದ ಶ್ರೀನಿವಾಸಯ್ಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಶಿಭಿರಾರ್ಥಿ ಸುರೇಶ ಪ್ರಾರ್ಥನೆಯನ್ನು ನೆರವೇರಿಸಿದರು.