Sunday, January 19, 2025
Sunday, January 19, 2025

ಸರಸ್ವತಿ ವಿದ್ಯಾಲಯ: ಉಪನ್ಯಾಸಕ ಪೋಷಕರ ಸಮ್ಮಿಲನ ಕಾರ್ಯಕ್ರಮ

ಸರಸ್ವತಿ ವಿದ್ಯಾಲಯ: ಉಪನ್ಯಾಸಕ ಪೋಷಕರ ಸಮ್ಮಿಲನ ಕಾರ್ಯಕ್ರಮ

Date:

ಗಂಗೊಳ್ಳಿ, ಜೂನ್ 17: ಮಕ್ಕಳ ತಪ್ಪುಗಳನ್ನು ಪ್ರೀತಿಯಿಂದಲೇ ತಿದ್ದುವ ಅಭ್ಯಾಸವನ್ನು ಪೋಷಕರು ಬೆಳೆಸಿಕೊಳ್ಳಬೇಕು. ಮಕ್ಕಳ ಜೊತೆ ನಿರಂತರವಾದ ಉತ್ತಮ ಸಂವಹನ ಮತ್ತು ಸಂಬಂಧವನ್ನು ಕಾಪಿಟ್ಟುಕೊಳ್ಳಬೇಕು ಎಂದು ಬಸ್ರೂರು ಶಾರದ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೆ.ರಾಧಾಕೃಷ್ಣ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಮತ್ತು ಹೆತ್ತವರ ಸಮ್ಮಿಲನ ಕಾರ್ಯಕ್ರಮದ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ ಅಧ್ಯಕ್ಷತೆ ವಹಿಸಿದ್ದರು. ಜಿ.ಎಸ್​.ವಿ.ಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ. ಕಾಶಿನಾಥ್ ಪೈ ಶುಭ ಹಾರೈಸಿದರು. ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ಎನ್. ಸದಾಶಿವ ನಾಯಕ್ ಉಪಸ್ಥಿತರಿದ್ದರು.

ರಸಾಯನಶಾಸ್ತ್ರ ಉಪನ್ಯಾಸಕಿ ಪವಿತ್ರ ಸ್ವಾಗತಿಸಿ, ಅರ್ಥಶಾಸ್ತ್ರ ಉಪನ್ಯಾಸಕಿ ಸುಗುಣ ಆರ್ ಕೆ ವಂದಿಸಿದರು. ಆಂಗ್ಲ ಭಾಷಾ ಉಪನ್ಯಾಸಕ ಥಾಮಸ್ ಪಿ ಎ ಪ್ರಸ್ತಾವಿಕ ಮಾತುಗಳನ್ನಾಡಿದರು. ಇತಿಹಾಸ ಉಪನ್ಯಾಸಕ ಭಾಸ್ಕರ್ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ಹಿಂದಿ ಭಾಷಾ ಉಪನ್ಯಾಸಕ ನಾರಾಯಣ ಈ ನಾಯ್ಕ್ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!