Sunday, January 19, 2025
Sunday, January 19, 2025

ಕ್ರೀಡಾ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

ಕ್ರೀಡಾ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

Date:

ಉಡುಪಿ, ಜೂನ್ 17: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ 6 ರಿಂದ 10 ನೇ ತರಗತಿ ವರೆಗಿನ ಮಾಧ್ಯಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟುಗಳಿಂದ ವಾರ್ಷಿಕ ರೂ. 10,000 ದಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ಇಲಾಖಾ ವೆಬ್‌ಸೈಟ್ http://sevasindhuservices.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೋಂದಾಯಿತ ಕ್ರೀಡಾ ಸಂಸ್ಥೆಗಳು 2022 ರ ಏಪ್ರಿಲ್ 1 ರಿಂದ 2023 ರ ಮಾರ್ಚ್ 31 ರ ವರೆಗೆ ನಡೆಸಿದ ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರುವವರು, ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸಿದ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರುವವರು, ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳು ಹಾಗೂ ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳು ಜುಲೈ 31 ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2521324, 9480886467 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!