Saturday, June 13, 2026
Saturday, June 13, 2026

ಕ್ರಿಯೇಟಿವ್‌ ಪದವಿಪೂರ್ವ ಕಾಲೇಜಿನ 7 ವಿದ್ಯಾರ್ಥಿಗಳು ಜೆ.ಇ.ಇ ಅಡ್ವಾನ್ಸ್ಡ್‌ ನಲ್ಲಿ ತೇರ್ಗಡೆ

ಕ್ರಿಯೇಟಿವ್‌ ಪದವಿಪೂರ್ವ ಕಾಲೇಜಿನ 7 ವಿದ್ಯಾರ್ಥಿಗಳು ಜೆ.ಇ.ಇ ಅಡ್ವಾನ್ಸ್ಡ್‌ ನಲ್ಲಿ ತೇರ್ಗಡೆ

Date:

ಕಾರ್ಕಳ, ಜೂನ್ 18: ದೇಶದ ಪ್ರತಿಷ್ಠಿತ ಐ.ಐ.ಟಿ ಸಂಸ್ಥೆಯಲ್ಲಿ ಬಿ.ಇ ಪದವಿ ಪ್ರವೇಶಕ್ಕೆ ನಡೆಯುವ ರಾಷ್ಟ್ರಮಟ್ಟದ ಜೆ.ಇ.ಇ (JEE) ಅಡ್ವಾನ್ಸ್ಡ್‌ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪದವಿಪೂರ್ವ ಕಾಲೇಜಿನ ಉದ್ಭವ್‌ ಎಂ ಆರ್‌, ಜಾಗೃತಿ ಕೆ ಪಿ., ಆದಿತ್ಯ ವಿ ಹೊಳ್ಳ, ಅಭಯ್‌ ಎಸ್‌ ಎಸ್‌., ಕಾರ್ತಿಕ್‌ ಕೃಷ್ಣಮೂರ್ತಿ ಹೆಗಡೆ, ಸೂರಜ್‌ ಕುಮಾರ್‌ ಎನ್‌., ಪ್ರಣವ್‌ ಪಿ ಸಂಜೀ ಉನ್ನತ ರ‍್ಯಾಂಕ್‌ನೊಂದಿಗೆ ತೇರ್ಗಡೆ ಹೊಂದಿದ್ದಾರೆ. ಅದರಲ್ಲಿ ಉದ್ಭವ್‌ ಎಂ ಆರ್‌ PREP-ST ಯಲ್ಲಿ 3 ನೇ ರ‍್ಯಾಂಕ್‌, ಜಾಗೃತಿ ಕೆಪಿ 24 ನೇ ರ‍್ಯಾಂಕ್‌ ಗಳಿಸಿ ವಿಶೇಷ ಸಾಧನೆಗೈದಿದ್ದಾರೆ.

ಪರೀಕ್ಷೆಗೆ ಹಾಜರಾದ ಕ್ರಿಯೇಟಿವ್‌ ನ 12 ವಿದ್ಯಾರ್ಥಿಗಳಲ್ಲಿ 7 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ದೇಶದ ಪ್ರತಿಷ್ಠಿತ 23 ಐಐಟಿಗಳ ಪ್ರವೇಶಕ್ಕೆ ನಡೆಯುವ ಆಯ್ಕೆ ಪ್ರಕ್ರಿಯೆಗೆ ಅರ್ಹರಾಗಿದ್ದಾರೆ. ಸಂಸ್ಥೆಯ ಆರಂಭದ ವರ್ಷಗಳಲ್ಲೇ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ಉನ್ನತ ಫಲಿತಾಂಶ ಗಳಿಸುವ ಮೂಲಕ ಗುಣಾತ್ಮಕ ಶಿಕ್ಷಣಕ್ಕೆ ಹೆಸರುವಾಸಿಯಾಗಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವರ್ಗದವರು, ಉಪನ್ಯಾಸಕೇತರ ವರ್ಗದವರು, ಜೆಇಇ ಸಂಯೋಜಕರಾದ ನಂದೀಶ್ ಹೆಚ್‌ ಬಿ ಮತ್ತು ತಿರುಮಲ ರೆಡ್ಡಿ ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಭೇಟಿ

ಕೊಲ್ಲೂರು, ಜೂ.12: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಶುಕ್ರವಾರ ಕೊಲ್ಲೂರು...

‘ಯಶೋ ಮಾಧ್ಯಮ-2026’ ಪ್ರಶಸ್ತಿಗೆ ಸುಬ್ರಹ್ಮಣ್ಯ ಜಿ ಕುರ್ಯ ಆಯ್ಕೆ

ಉಡುಪಿ, ಜೂ.12: ರಾಜಾಜಿನಗರದ ಸ್ಪಂದನ ಸೇವಾ ಸಂಸ್ಥೆ ವತಿಯಿಂದ ಪ್ರತಿ ವರ್ಷದಂತೆ...

ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಮತ್ತು ಭಾರತೀಯ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನು ನೆನಪು ಮಾತ್ರ

ನವದೆಹಲಿ, ಜೂ.12: ಏಷ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಹಲವಾರು...

ಕೋಡಿಯಲ್ಲಿ ಹಸಿರು ಹೆಜ್ಜೆ ಅಭಿಯಾನಕ್ಕೆ ಚಾಲನೆ

ಕೋಟ, ಜೂ.12: ದೇಶದೆಲ್ಲೆಡೆ ತಾಪಮಾನ ಹೆಚ್ಚುತ್ತಿದೆ. ಕಾಡೆಲ್ಲ ನಾಡಾಗಿ ಪರಿವರ್ತನೆಗೊಂಡಿದ್ದು ಇದರಿಂದ...
error: Content is protected !!