Sunday, January 19, 2025
Sunday, January 19, 2025

ಜೂನ್ 22-25 ರವರೆಗೆ ಉಡುಪಿಯಲ್ಲಿ ಹಲಸು ಮೇಳ

ಜೂನ್ 22-25 ರವರೆಗೆ ಉಡುಪಿಯಲ್ಲಿ ಹಲಸು ಮೇಳ

Date:

ಉಡುಪಿ, ಜೂನ್ 20: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಉಡುಪಿ ಜಿಲ್ಲೆ ಹಾಗೂ ರೊಬೋಸಾಫ್ಟ್ ಟೆಕ್ನಾಲಜೀಸ್ ಪ್ರೈ ಲಿ. ಇವರ ಸಂಯುಕ್ತ ಆಶ್ರಯದಲ್ಲಿ ರೊಬೋಸಾಫ್ಟ್ ಟೆಕ್ನಾಲಜೀಸ್ ಪ್ರೈ ಲಿ ರವರ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ರೈತ ಸೇವಾ ಕೇಂದ್ರದ ಆವರಣದಲ್ಲಿ ನಿರ್ಮಾಣವಾದ ಮೇಲ್ಮಾವಣಿ ಲೋಕಾರ್ಪಣೆ ಹಾಗೂ ಹಲಸು ಮೇಳ 2023 ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರ ದೊಡ್ಡಣಗುಡ್ಡೆ, ಉಡುಪಿ ಇಲಿನ ಪುಷ್ಪ ಹರಾಜು ಕೇಂದ್ರ (ರೈತ ಸೇವಾ ಕೇಂದ್ರದ ಆವರಣದಲ್ಲಿ ಜೂನ್ 22 ರಿಂದ 25 ರವರೆಗೆ ಆಯೋಜಿಸಲಾಗಿದ್ದು, ಇದರ ಉದ್ಘಾಟನಾ ಕಾರ್ಯಕ್ರಮವು ಜೂನ್ 22 ರಂದು ಸಂಜೆ 4 ಘಂಟೆಗೆ ನಡೆಯಲಿದೆ.

ಸದರಿ ಮೇಳದಲ್ಲಿ ಹಲಸಿನ ವಿವಿಧ ತಳಿಗಳ ಹಣ್ಣು, ಗಿಡಗಳು ಹಾಗೂ ಹಲಸಿನ ಆಹಾರ ಉತ್ಪನ್ನಗಳು ಹಾಗೂ ಮೌಲ್ಯ ವರ್ಧಿತ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ, ಜಿಲ್ಲೆಯಲ್ಲಿ ಉತ್ಪಾದನೆಯಾಗುವ ಜೇನು ಪ್ರದರ್ಶನ ಹಾಗೂ ಮಾರಾಟ ಮತ್ತು ಜಿಲ್ಲೆಯ ವಿವಿಧ ರೈತರು ಬೆಳೆಯುವ ಅಪ್ರದಾನ ಹಾಗೂ ಅಪರೂಪದ ಹಣ್ಣುಗಳು ಹಾಗೂ ಅಣಬೆಗಳನ್ನು ಮಾರಾಟ ಮಾಡಲು ರೈತರು, ರೈತ ಸಂಘಗಳು, ರೈತ ಉತ್ಪಾದಕರ ಸಂಸ್ಥೆಗಳ ಹಾಗೂ ಸಂಸ್ಕರಣಾ ಘಟಕಗಳಿಗೆ ಅವಕಾಶ ಕಲ್ಪಿಸಲಾಗುವುದು.

ಸದರಿ ಮೇಳದಲ್ಲಿ ಪ್ರದರ್ಶನ ಹಾಗೂ ಮಾರಾಟಕ್ಕೆ ಆಸಕ್ತಿ ಹೊಂದಿರುವ ಮೇಲೆ ನಮೂದಿಸಿರುವ ಉತ್ಪನ್ನಗಳನ್ನು ಹೊಂದಿರುವ ರೈತರು, ರೈತ ಸಂಘಗಳು, ನರ್ಸರಿದಾರರು, ರೈತ ಉತ್ಪಾದಕರ ಸಂಸ್ಥೆಗಳ ಹಾಗೂ ಸಂಸ್ಕರಣಾ ಘಟಕಗಳ ಮಾಲಕರು ಜೂನ್ 20 ರ ಒಳಗಾಗಿ ತಮ್ಮ ಉತ್ಪನ್ನ ಹಾಗೂ ಲಭ್ಯತೆಯ ವಿವರದೊಂದಿಗೆ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾ.ವ.), ಪುಷ ಹರಾಜು ಕೇಂದ್ರ, ಉಡುಪಿ ರವರನ್ನು (9900910948) ಸಂಪರ್ಕಿಸಿ ಮೇಳದಲ್ಲಿ ಭಾಗವಹಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!