Monday, January 20, 2025
Monday, January 20, 2025

ಸರಕಾರಿ ಆಸ್ಪತ್ರೆಯಲ್ಲಿ ಜನಸ್ನೇಹಿ ವೈದ್ಯಕೀಯ ಸೇವೆಗೆ ಆದ್ಯತೆ ನೀಡಿ: ಶಾಸಕ ಯಶ್ಪಾಲ್ ಸುವರ್ಣ

ಸರಕಾರಿ ಆಸ್ಪತ್ರೆಯಲ್ಲಿ ಜನಸ್ನೇಹಿ ವೈದ್ಯಕೀಯ ಸೇವೆಗೆ ಆದ್ಯತೆ ನೀಡಿ: ಶಾಸಕ ಯಶ್ಪಾಲ್ ಸುವರ್ಣ

Date:

ಉಡುಪಿ, ಜೂ. 20: ಉಡುಪಿ ಕ್ಷೇತ್ರದ ಗ್ರಾಮೀಣ ಹಾಗೂ ನಗರ ಭಾಗದ ಜನಸಾಮಾನ್ಯರಿಗೆ ಸರಕಾರದ ಜಿಲ್ಲಾಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಮೂಲಕ ಜನಸ್ನೇಹಿ ವೈದ್ಯಕೀಯ ಸೇವೆಗೆ ಆದ್ಯತೆ ನೀಡುವಂತೆ ವೈದ್ಯಾಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ ನೀಡಿದರು. ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ, ಉಡುಪಿ ಜಿಲ್ಲಾ ಸರ್ಜನ್ ಡಾ. ಸುಧೇಶ್ ಉಪಸ್ಥಿತಿಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಸಭೆಯಲ್ಲಿ ಉಡುಪಿ ಜಿಲ್ಲಾಸ್ಪತ್ರೆಯ ಡಯಾಲಿಸಿಸ್ ಕೇಂದ್ರದ ಖಾಸಗಿ ಸಂಸ್ಥೆಯ ಅಸಮರ್ಪಕ ನಿರ್ವಹಣೆಯಿಂದ ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿರುವ ಬಗ್ಗೆ ಮಾಹಿತಿ ಪಡೆದು ಸರ್ಕಾರಕ್ಕೆ ಈ ಬಗ್ಗೆ ವರದಿ ಮಾಡುವಂತೆ ಹೇಳಿದರು. ಬ್ರಹ್ಮಾವರ ತಾಲೂಕಿನಲ್ಲಿ ನೂತನ ತಾಲೂಕು ಆಸ್ಪತ್ರೆಗೆ ಸೂಕ್ತ ಸರಕಾರಿ ನಿವೇಶನ ಗುರುತಿಸುವಂತೆ ಕಂದಾಯ ಇಲಾಖೆಯ ಮೂಲಕ ಪ್ರಸ್ತಾವನೆ ಸಲ್ಲಿಕೆ, ಮಳೆಗಾಲದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಸೂಕ್ತ ಮುಂಜಾಗ್ರತ ಕ್ರಮ, ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ನಿರ್ವಹಣೆಯ ಪ್ರಸ್ತುತ ಸಮಸ್ಯೆಗಳ ಪರಿಹಾರಕ್ಕೆ ಸರಕಾರಕ್ಕೆ ಮನವಿ, ಖಾಲಿ ಇರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ಮತ್ತು ಆಶಾ ಕಾರ್ಯಕರ್ತರ ನೇಮಕಾತಿಗೆ ಸೂಕ್ತ ಕ್ರಮ, 108 ಆಂಬುಲೆನ್ಸ್ ಸೇವೆ, ಖಾಸಗಿ ಆಸ್ಪತ್ರೆಗಳ ತಜ್ಞ ವೈದ್ಯರ ಸಂಯೋಜನೆಯೊಂದಿಗೆ ಜಿಲ್ಲಾಸ್ಪತ್ರೆಯ ಆರೋಗ್ಯ ಸೇವೆಯನ್ನು ಪರಿಣಾಮಕಾರಿಯಾಗಿಸುವ ನಿಟ್ಟಿನಲ್ಲಿ ಸಭೆಯಲ್ಲಿ ಚರ್ಚಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಕಳ ಮಹಾಲಿಂಗೇಶ್ವರ ದೇವಸ್ಥಾನ ಕೆರೆ ಮರು ನಿರ್ಮಾಣಕ್ಕೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ

ಮಣಿಪಾಲ, ಜ.20: ಪರ್ಕಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಕಾಮಗಾರಿ ಸ್ಥಳಕ್ಕೆ...

ಕೋಡಿ ಮಹಾಸತೀಶ್ವರಿ ಗೆಂಡೋತ್ಸವ ಸಂಪನ್ನ

ಕೋಟ, ಜ.20: ಇಲ್ಲಿನ ಕರಾವಳಿ ಕಡಲತಟದಲ್ಲಿ ಆರಾಧಿಸುವ ದೇವಿ ಶ್ರೀ ಮಹಾಸತೀಶ್ವರಿ...

ಪಂಚವರ್ಣದ ನೇತೃತ್ವದಲ್ಲಿ 238 ನೇ ವಾರದ ಪರಿಸರ ಸ್ನೇಹಿ ಅಭಿಯಾನ

ಕೋಟ, ಜ.20: ಪಂಚವರ್ಣ ಯುವಕ ಮಂಡಲ ಕೋಟ ಇದರ ಪ್ರವರ್ತಿತ ಪಂಚವರ್ಣ...

ಹನೆಹಳ್ಳಿ: ವಿದ್ಯಾರ್ಥಿಗಳಿಗೆ ಉಚಿತ ಶೂ ವಿತರಣೆ

ಬಾರಕೂರು, ಜ.20: ಲಯನ್ಸ್ ಕ್ಲಬ್ ಬಾರ್ಕೂರು (Dist 317 zone 1Region...
error: Content is protected !!