ಬೆಳ್ಮಣ್: ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ 2021-22ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು ಘಟಕ ಮಟ್ಟದ ವಿವಿಧ ಪ್ರಶಸ್ತಿ ಪ್ರದಾನ ಸಮಾರಂಭವು
ಕುಂಟಲಗುಂಡಿಯಲ್ಲಿರುವ ಸಂಘದ ರಂಗಮಂದಿರದಲ್ಲಿ ಸಂಘದ ಅಧ್ಯಕ್ಷ ಬೋಳ ಉದಯ ಅಂಚನ್ ಅವರ ಅಧ್ಯಕ್ಷತೆಯಲ್ಲಿ ಜರಗಿತು.
2021-22ನೇ ಸಾಲಿನ ನೂತನ ಅಧ್ಯಕ್ಷರಾಗಿ ನಂದಳಿಕೆ ಪ್ರಶಾಂತ್ ಪೂಜಾರಿ ಅವರು ಪದಪ್ರದಾನ ಸ್ವೀಕರಿಸಿ, ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾರತ ಸರಕಾರದ ನೆಹರು ಯುವ ಕೇಂದ್ರದ ಉಡುಪಿ ಜಿಲ್ಲೆಯ ಯುವಜನ ಅಧಿಕಾರಿ ವಿಲ್ಫ್ರೆಡ್ ಡಿಸೋಜ ಅವರು ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿ ಮಾತನಾಡಿದರು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಕೇವಲ ಸಂಘಟನೆ ಮಾತ್ರವಲ್ಲ ಇದೊಂದು ಮಾದರಿ ಕುಟುಂಬವೆಂದರು. ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ಹೊಸತನದ ಕಾರ್ಯಕ್ರಮಗಳಿಂದಲೇ ಈ ಸಂಸ್ಥೆ ಜಿಲ್ಲೆಯಲ್ಲೇ
ಮುಂಚೂಣಿಯಲ್ಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಂಡ್ಕೂರು ನಾನಿಲ್ತಾರ್ ಕುಲಾಲ ಸಂಘದ ಅಧ್ಯಕ್ಷರಾದ ಇನ್ನಾ ಕುಶ ಆರ್. ಮೂಲ್ಯ, ಜೇಸಿಐ ರಾಷ್ಟ್ರೀಯ ತರಬೇತುದಾರ ಸುಧಾಕರ್ ಪೂಜಾರಿ ಕಾರ್ಕಳ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಸಂಘದ ನಿಕಟಪೂರ್ವಾಧ್ಯಕ್ಷ ಅಬ್ಬನಡ್ಕ ಸತೀಶ್ ಪೂಜಾರಿ, ಪೂರ್ವಾಧ್ಯಕ್ಷರಾದ ಬೋಳ ರಘುವೀರ್ ಶೆಟ್ಟಿ, ಆನಂದ ಪೂಜಾರಿ, ದಿನೇಶ್ ಪೂಜಾರಿ ಬಿರೋಟ್ಟು, ಸುರೇಶ್ ಪೂಜಾರಿ ಕಾಸ್ರಬೈಲು, ರಾಜೇಶ್ ಕೋಟ್ಯಾನ್, ಉಪಾಧ್ಯಕ್ಷ ಸುರೇಶ್ ಅಬ್ಬನಡ್ಕ, ಜೊತೆ ಕಾರ್ಯದರ್ಶಿ ಪುಷ್ಪ ಕುಲಾಲ್, ಕೋಶಾಧಿಕಾರಿ ವೀಣಾ ಪೂಜಾರಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಭಜನಾ ಮಂಡಳಿಯ ಅಧ್ಯಕ್ಷೆ ಸುಲೋಚನಾ ಕೋಟ್ಯಾನ್, ಕಾರ್ಯದರ್ಶಿ ಹರಿಣಾಕ್ಷಿ ಪೂಜಾರಿ, ಶ್ರೀ ವನದುರ್ಗಾ ಸ್ವಸಹಾಯ ಸಂಘದ ಅಧ್ಯಕ್ಷೆ ಲಲಿತಾ ಆಚಾರ್ಯ ಮೊದಲಾದವರಿದ್ದರು.
ಪದ್ಮಶ್ರೀ ಪೂಜಾರಿ ನೂತನ ಅಧ್ಯಕ್ಷರ ಪರಿಚಯ ವಾಚಿಸಿದರು. ಆರತಿ ಕುಮಾರಿ ನೂತನ ಸದಸ್ಯರ ಪರಿಚಯ ಹೇಳಿದರು. ಸಂಘದ ಕಾರ್ಯದರ್ಶಿ ಹರಿಪ್ರಸಾದ್ ಆಚಾರ್ಯ ಅಬ್ಬನಡ್ಕ ವಾರ್ಷಿಕ ವರದಿ ಮಂಡಿಸಿದರು. ಸುಲೋಚನಾ ಕೋಟ್ಯಾನ್ ಪ್ರಾರ್ಥನೆಗೈದರು.
ಸಂಧ್ಯಾ ಶೆಟ್ಟಿ ಸ್ವಾಗತಿಸಿ, ನೂತನ ಕಾರ್ಯದರ್ಶಿ ಸುರೇಶ್ ಪೂಜಾರಿ ಕಾಸ್ರಬೈಲು ವಂದಿಸಿದರು. ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.