Tuesday, February 25, 2025
Tuesday, February 25, 2025

ಮತ್ಸ್ಯ ಸಂಪದ ಯೋಜನೆಯಡಿ ಉಪ ಘಟಕ ಅನುಷ್ಠಾನ: ಅರ್ಜಿ ಆಹ್ವಾನ

ಮತ್ಸ್ಯ ಸಂಪದ ಯೋಜನೆಯಡಿ ಉಪ ಘಟಕ ಅನುಷ್ಠಾನ: ಅರ್ಜಿ ಆಹ್ವಾನ

Date:

ಉಡುಪಿ, ಜೂನ್ 21: ಮೀನುಗಾರಿಕೆ ಇಲಾಖೆಯ ವತಿಯಿಂದ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಅನುಷ್ಠಾನಗೊಳಿಸುತ್ತಿರುವ ಉಪಘಟಕಗಳಾದ ಉತ್ಪಾದನೆ ಮತ್ತು ಉತ್ಪಾದಕತೆಯ ವರ್ಧನೆಗೆ ಸಂಬಂಧಿಸಿದ ಯೋಜನೆಗಳಾದ ಒಳನಾಡು ಮೀನುಗಾರಿಕೆ ಮತ್ತು ಜಲಕೃಷಿ ಅಭಿವೃದ್ಧಿ, ಕಡಲ ಕೃಷಿ ಮತ್ತು ಕಡಲಕಳೆ ಕೃಷಿ ಸೇರಿದಂತೆ ಸಮುದ್ರ ಮೀನುಗಾರಿಕೆಯ ಅಭಿವೃದ್ಧಿ, ಅಲಂಕಾರಿಕ ಮತ್ತು ಮನರಂಜನಾ ಮೀನುಗಾರಿಕೆಯ ಅಭಿವೃದ್ಧಿ ಹಾಗೂ ತಂತ್ರಜ್ಞಾನದ ಅಳವಡಿಕೆ, ಮೂಲಭೂತ ಸೌಕರ್ಯ ಮತ್ತು ಹಿಡುವಳಿ ನಂತರದ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಹಿಡುವಳಿ ನಂತರದ ಮತ್ತು ಶೀತಲ ಸರಪಳಿ ಮೂಲಸೌಕರ್ಯ, ಮೀನು ಮಾರುಕಟ್ಟೆಗಳು ಮತ್ತು ಮಾರಾಟ ಮೂಲಸೌಕರ್ಯ ಹಾಗೂ ಆಳ ಸಮುದ್ರದ ಮೀನುಗಾರಿಕೆಯ ಅಭಿವೃದ್ಧಿ ಮತ್ತು ಮೀನುಗಾರಿಕೆ ನಿರ್ವಹಣೆ ಮತ್ತು ನಿಯಂತ್ರಣ ವಿಧಿಗಳಿಗೆ ಸಂಬಂಧಿಸಿದಂತೆ ಮೀನುಗಾರರ ಸುರಕ್ಷತೆ ಮತ್ತು ಸುರಕ್ಷತೆಯನ್ನು ಬಲಪಡಿಸುವುದು ಹಾಗೂ ಮೀನುಗಾರಿಕೆ ವಿಸ್ತರಣೆ ಮತ್ತು ಬೆಂಬಲ ಸೇವೆ ಯೋಜನೆಯ ಸೌಲಭ್ಯ ಪಡೆಯಲು ಆಸಕ್ತ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು ಕುಂದಾಪುರ, ಉಡುಪಿ ಹಾಗೂ ಕಾರ್ಕಳ ಕಚೇರಿ ಹಾಗೂ ಮೀನುಗಾರಿಕೆ ಉಪನಿರ್ದೇಶಕರು, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!