ಬೆಳ್ಮಣ್, ಜೂ. 22: ರಾಜ್ಯ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಮಹಿಳಾ ವಿಭಾಗದ ನೇತೃತ್ವದಲ್ಲಿ ಸಂಘದ ರಂಗಮಂದಿರದಲ್ಲಿ ‘ಮಹಿಳಾ ಸಂಗಮ’ ಕಾರ್ಯಕ್ರಮದ ಅಂಗವಾಗಿ ರಂಗೋಲಿ ಸ್ಪರ್ಧೆ ಸಂಘದ ಮಿನಿ ಸಭಾಂಗಣದಲ್ಲಿ ಜರಗಿತು. ಸ್ಪರ್ಧೆಯಲ್ಲಿ ಸಾಕ್ಷಿ ಎಸ್. ಕುಲಾಲ್ ಪ್ರಥಮ ಸ್ಥಾನ ಹಾಗೂ ಪೂರ್ವಿ ಸಿ. ರಾವ್ ದ್ವಿತೀಯ ಬಹುಮಾನ ಪಡೆದರು. ಸಮಾರಂಭದ ಅಧ್ಯಕ್ಷತೆಯನ್ನು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷ ಪ್ರಶಾಂತ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಸ್ಪರ್ಧಾ ಕಾರ್ಯಕ್ರಮದ ತೀರ್ಪುಗಾರರಾಗಿ ಬೆಳ್ಮಣ್ಣು ನಿತ್ಯಾ ಸ್ಟುಡಿಯೋ ಮಾಲಕರಾದ ರವಿರಾಜ್ ಶೆಟ್ಟಿ ಹಾಗೂ ಹೆಬ್ರಿ ಅಮೃತಾ ಭಾರತಿ ಕಾಲೇಜಿನ ಉಪನ್ಯಾಸಕರಾದ ವೀಣೇಶ್ ಅಮೀನ್ ಸ್ಪರ್ಧೆಯ ತೀರ್ಪು ನೀಡಿದರು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬೆಳ್ಮಣ್ಣು ಜೇಸಿಐ ಅಧ್ಯಕ್ಷರಾದ ಅಬ್ಬನಡ್ಕ ಸತೀಶ್ ಪೂಜಾರಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭ ಹಾರೈಸಿದರು.
ಸಂಘದ ಪೂರ್ವಾಧ್ಯಕ್ಷರಾದ ಸುರೇಶ್ ಕಾಸ್ರಬೈಲು, ರಾಜೇಶ್ ಕೋಟ್ಯಾನ್, ಉಪಾಧ್ಯಕ್ಷೆ ಲೀಲಾ ನಾರಾಯಣ ಪೂಜಾರಿ, ಜೊತೆ ಕಾರ್ಯದರ್ಶಿ ಸುದರ್ಶನ್ ಕುಂದರ್, ಸದಸ್ಯರಾದ ಪುಷ್ಪ ಶಾಂತರಾಮ್ ಕುಲಾಲ್, ಹರಿಣಾಕ್ಷಿ ನಂದೀಶ್ ಪೂಜಾರಿ, ಬಾಲಕೃಷ್ಣ ಮಡಿವಾಳ, ಸುರೇಶ್ ಅಬ್ಬನಡ್ಕ, ಹರೀಶ್ ಪೂಜಾರಿ, ಕೀರ್ತನ್ ಪೂಜಾರಿ ಮೊದಲಾದವರಿದ್ದರು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಸುಲೋಚನಾ ರಾಜೇಶ್ ಕೋಟ್ಯಾನ್ ಪ್ರಾರ್ಥನೆಗೈದರು. ಆರತಿ ಕುಮಾರಿ ಸ್ವಾಗತಿಸಿ, ಕಾರ್ಯದರ್ಶಿ ಲಲಿತಾ ರವಿ ಆಚಾರ್ಯ ವಂದಿಸಿದರು. ವೀಣಾ ಹರೀಶ್ ಪೂಜಾರಿ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು, ಕಾರ್ಯಕ್ರಮದ ನಿರ್ದೇಶಕರು ಸಂಘದ ಮಹಿಳಾ ಸಂಘಟನಾ ಕಾರ್ಯದರ್ಶಿ ಅಬ್ಬನಡ್ಕ ಪದ್ಮಶ್ರೀ ಸತೀಶ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.