Sunday, January 19, 2025
Sunday, January 19, 2025

ಹಲಸಿಗೆ ಮೌಲ್ಯವರ್ಧನೆ ಮತ್ತು ಸೂಕ್ತ ಮಾರುಕಟ್ಟೆ ಕಲ್ಪಿಸುವ ಉದ್ದೇಶದಿಂದ ಹಲಸು ಮೇಳ: ಶಾಸಕ ಯಶ್ಪಾಲ್ ಸುವರ್ಣ

ಹಲಸಿಗೆ ಮೌಲ್ಯವರ್ಧನೆ ಮತ್ತು ಸೂಕ್ತ ಮಾರುಕಟ್ಟೆ ಕಲ್ಪಿಸುವ ಉದ್ದೇಶದಿಂದ ಹಲಸು ಮೇಳ: ಶಾಸಕ ಯಶ್ಪಾಲ್ ಸುವರ್ಣ

Date:

ಉಡುಪಿ, ಜೂನ್ 22: ಹಲಸಿನ ಮೌಲ್ಯವರ್ಧನೆ ಹಾಗೂ ರೈತ ಭಾಂಧವರಿಗೆ ಸೂಕ್ತ ಮಾರುಕಟ್ಟೆಯನ್ನು ಒದಗಿಸುವ ಉದ್ದೇಶದಿಂದ ಹಲಸಿನ ಮೇಳಗಳನ್ನು ಅಯೋಜಿಸಲಾಗುತ್ತಿದ್ದು, ಇದರ ಪ್ರಯೋಜನವನ್ನು ಎಲ್ಲರೂ ಪಡೆಯಬೇಕೆಂದು ಶಾಸಕ ಯಶ್ಪಾಲ್ ಸುವರ್ಣ ಕರೆ ನೀಡಿದರು. ಅವರು ಗುರುವಾರ ಉಡುಪಿ ದೊಡ್ಡಣಗುಡ್ಡೆ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರ ಇಲ್ಲಿನ ಪುಷ್ಪ ಹರಾಜು ಕೇಂದ್ರ (ರೈತ ಸೇವಾ ಕೇಂದ್ರ)ದ ಆವರಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಉಡುಪಿ ಜಿಲ್ಲೆ ಹಾಗೂ ರೋಬೋಸಾಫ್ಟ್ ಟೆಕ್ನೋಲಾಜಿಸ್ ಪ್ರೈ.ಲಿ ಇವರ ಸಂಯುಕ್ತ ಆಶ್ರಯದಲ್ಲಿ ರೋಬೋಸಾಫ್ಟ್ ಟೆಕ್ನೋಲಾಜಿಸ್ ಪ್ರೈ..ಲಿ ರವರ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ನಿರ್ಮಾಣವಾದ ರೈತ ಸೇವಾ ಕೇಂದ್ರದ ಆವರಣದ ಮೇಲ್ಛಾವಣಿಯ ಲೋಕಾರ್ಪಣೆ ಹಾಗೂ ಹಲಸು ಮೇಳವನ್ನು ಉದ್ಘಾಟಿಸಿ ಮಾತನಾಡಿದರು.

ಮಲೆನಾಡು ಸೇರಿದಂತೆ ಕರಾವಳಿ ಭಾಗದಲ್ಲಿ ಪೌಷ್ಠಿಕ ಆಹಾರಗಳಲ್ಲಿ ಒಂದಾದ ಹಲಸು ಹೇರಳವಾಗಿ ಉತ್ಪಾದನೆಯಾಗುತ್ತದೆ. ಇದಕ್ಕೆ ಹೆಚ್ಚಿನ ಮೌಲ್ಯವರ್ಧನೆ ಹಾಗೂ ಮಾರುಕಟ್ಟೆಯನ್ನು ಒದಗಿಸುವುದರಿಂದ ರೈತರು ಹೆಚ್ಚಿನ ಲಾಭ ಪಡೆಯುವುದರೊಂದಿಗೆ ಆರ್ಥಿಕವಾಗಿ ಸಬಲರಾಗಲು ಸಾಧ್ಯವಾಗುತ್ತದೆ ಎಂದರು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಹಲಸಿನಿಂದ ವಿವಿಧ ರೀತಿಯ ಖಾದ್ಯ ಉತ್ಪನ್ನಗಳನ್ನು ದೇಶ ವಿದೇಶಗಳಿಗೆ ರಫ್ತು ಮಾಡುವುದರಿಂದ ಹೆಚ್ಚಿನ ಲಾಭ ಪಡೆಯಲು ರೈತರು ಮುಂದಾಗಬೇಕು ಎಂದರು. ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ಹಲಸಿನ ಮೇಳಗಳಲ್ಲಿ ವಿವಿಧ ಬಗೆಯ ಹಲಸುಗಳು ಲಭ್ಯವಿದ್ದು, ಇದನ್ನು ಜನರು ಸವಿಯಲು ಅನುಕೂಲವಾಗುವುದರ ಜೊತೆಗೆ ರೈತರಿಗೆ ಮಾರುಕಟ್ಟೆ ಸೌಲಭ್ಯ ಒದಗಲಿದೆ ಎಂದರು.

ರೋಬೋಸಾಫ್ಟ್ ಟೆಕ್ನೋಲಾಜಿಸ್ ಪ್ರೈ.ಲಿ ವತಿಯಿಂದ ಸಾಮಾಜಿಕ ಹೊಣೆಗಾರಿಕ ನಿಧಿಯಿಂದ 48.5 ಲಕ್ಷ ರೂ ವೆಚ್ಚದಲ್ಲಿ ರೈತ ಸೇವಾ ಕೇಂದ್ರದ ಮೇಲ್ಛಾವಣಿ ನಿರ್ಮಿಸಿರುವುದು ರೈತರಿಗೆ ಮತ್ತು ಸಾರ್ವಜನಿಕರಿಗೆ ಅನುಕೂಲವಾಗುವ ಕಾರ್ಯವಾಗಿದೆ ಎಂದು ಶ್ಲಾಘಿಸಿದರು. ರೋಬೋಸಾಫ್ಟ್ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರವೀತೇಜ ಬೊಮ್ಮಿರೆಡ್ಡಿ ಪಲ್ಲಿ ಮಾತನಾಡಿ, ನಮ್ಮ ಕೆಂಪೆನಿಯ ಮುಖ್ಯ ಕಚೇರಿಯು ಈ ಜಿಲ್ಲೆಯಲ್ಲಿದ್ದು, ಇಲ್ಲಿನ ಅಭಿವೃಧ್ದಿ ಸೇರಿದಂತೆ ಜನಹಿತ ಕಾರ್ಯವನ್ನು ಮಾಡಲು ಕೈ ಜೋಡಿಸಲಿದ್ದೇವೆ ಎಂದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ತರಬೇತಿ ನಿರತ ಐ.ಎ.ಎಸ್. ಅಧಿಕಾರಿ ಯತೀಶ್, ರೋಬೋಸಾಫ್ಟ್ ಕಂಪೆನಿಯ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥೆ ಮತ್ತಿತರರು ಉಪಸ್ಥಿತರಿದ್ದರು. ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಭುವನೇಶ್ವರಿ ಸ್ವಾಗತಿಸಿ, ಅಶೋಕ್ ಕಾಮತ್ ನಿರೂಪಿಸಿದರು. ರೋಬೋಸಾಫ್ಟ್ ಕಂಪೆನಿಯ ಹಣಕಾಸು ವಿಭಾಗದ ನಾಗೇಶ್ ದೊಂಡಿಯ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!