Thursday, November 19, 2026
Thursday, November 19, 2026

ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ: ಅರ್ಜಿ ಆಹ್ವಾನ

ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ: ಅರ್ಜಿ ಆಹ್ವಾನ

Date:

ಉಡುಪಿ, ಜೂನ್ 22: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಎನ್.ಎಮ್.ಡಿ.ಎಫ್.ಸಿ ಮಾದರಿಯಲ್ಲಿ ವಿದೇಶದಲ್ಲಿ ವ್ಯಾಸಂಗ ಮಾಡಲು ಬಯಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಮತ್ತು ಮಾನ್ಯತೆ ಪಡೆದಿರುವ ಯಾವುದೇ ವಿದೇಶ ವಿದ್ಯಾಲಯದಿಂದ ಭಾರತ ದೇಶದ ಪ್ರತಿಷ್ಟಿತ ಐ.ಐ.ಟಿ.ಎಸ್, ಐ.ಐ.ಎಮ್.ಎಸ್ ಹಾಗೂ ಐ.ಎಸ್.ಸಿ ಸಂಸ್ಥೆಗಳಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಮಾಡಬಯಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆಯ ಸೌಲಭ್ಯ ಪಡೆಯಲು ನಿಗಮದ ವೆಬ್‌ಸೈಟ್ http://kmdconline.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಅಜಾದ್ ಭವನ, 1ನೇ ಮಹಡಿ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ಉಡುಪಿ, ದೂರವಾಣಿ ಸಂಖ್ಯೆ:0820-2574990, ಸಹಾಯವಾಣಿ ಸಂಖ್ಯೆ 8277799990 ಮತ್ತು ಉಡುಪಿ ದೂರವಾಣಿ ಸಂಖ್ಯೆ: 0820-2574596, ಕಾರ್ಕಳ ದೂರವಾಣಿ ಸಂಖ್ಯೆ: 08258-231101 ಹಾಗೂ ಕುಂದಾಪುರ ದೂರವಾಣಿ ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸನ್ಮತಿ ಮಾಸಿಕ ಸಂಚಿಕೆ ಬಿಡುಗಡೆ, ತಿಂಗಳ ಅಂಗಳ ಸಂವಾದ

ಉಡುಪಿ, ನ.18: ಎಲ್‌ನಿನೋ ಹಿನ್ನೆಲೆಯಲ್ಲಿ ಬೇಸಿಗೆಯಲ್ಲಿ ಕಾಡುವ ಕುಡಿಯುವ ನೀರಿನ ಸಮಸ್ಯೆ...

ಕಡೆಕಾರು: ಉಚಿತ ಕಣ್ಣಿನ ತಪಾಸಣಾ ಶಿಬಿರ

ಉಡುಪಿ, ನ.18: ಕೆ.ಎಂ.ಸಿ. ಮಣಿಪಾಲದ ಕಣ್ಣಿನ ವಿಭಾಗ, ಆಪ್ಟೋಮಿಟ್ರಿ ವಿಭಾಗ ಹಾಗೂ...

ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50 ರ ರಿಯಾಯಿತಿ

ಉಡುಪಿ, ನ.17: ಕನ್ನಡ ರಾಜ್ಯೋತ್ಸವದ ಅಂಗವಾಗಿ 2026 ರ ನವೆಂಬರ್ ತಿಂಗಳು...
error: Content is protected !!