Friday, November 20, 2026
Friday, November 20, 2026

ಕುಂದಾಪ್ರ ಡಾಟ್ ಕಾಂ: ವಿಷನ್ 2023 ಬೈಂದೂರು

ಕುಂದಾಪ್ರ ಡಾಟ್ ಕಾಂ: ವಿಷನ್ 2023 ಬೈಂದೂರು

Date:

ಬೈಂದೂರು, ಜೂ. 23: ಪ್ರಗತಿಯ ದೃಷ್ಟಿ, ಹೊಸ ಆಲೋಚನೆಗಳ ಸೃಷ್ಟಿಗೆ ವೇದಿಕೆ ಕಲ್ಪಿಸುವ ಆಶಯದೊಂದಿಗೆ ಕುಂದಾಪ್ರ ಡಾಟ್ ಕಾಂ ನೇತೃತ್ವದಲ್ಲಿ ವಿಷನ್ ಬೈಂದೂರು ಕಾರ್ಯಕ್ರಮ ಜೂನ್ 24ರ ಶನಿವಾರ ಮಧ್ಯಾಹ್ನ 2 ಗಂಟೆಗೆ ಉಪ್ಪುಂದದ ನಂದನವನ – ದೇವಕಿ ಬಿ.ಆರ್. ಸಭಾಂಗಣದಲ್ಲಿ ಆಯೋಜಿಸಿದೆ. ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹಾಗೂ ಅಭಿವೃದ್ಧಿಯ ಕನಸು ಹೊತ್ತ ನಾಗರಿಕರೊಂದಿಗೆ ಮಾತು – ಚರ್ಚೆ – ಮಂಥನ ನಡೆಯಲಿದೆ.

ಕಾರ್ಯಕ್ರಮವನ್ನು ಬೈಂದೂರಿನ ಮಾಜಿ ಶಾಸಕ ಬಿ. ಅಪ್ಪಣ್ಣ ಹೆಗ್ಡೆ ಉದ್ಘಾಟನೆ ಮಾಡಲಿದ್ದಾರೆ. ಈ ವೇಳೆ ಅಭಿವೃದ್ಧಿಯ ಪರಿಕಲ್ಪನೆ ಎಂಬ ವಿಷಯದ ಬಗ್ಗೆ ರಾಜ್ಯ ಪಂಚಾಯತ್ ರಾಜ್ ಸಂಪನ್ಮೂಲ ವ್ಯಕ್ತಿ ಎಸ್. ಜನಾರ್ದನ ಮರವಂತೆ ಹಾಗೂ ಅಭಿವೃದ್ಧಿ ಸಮಸ್ಯೆ ಮತ್ತು ಸವಾಲುಗಳು ಎಂಬ ವಿಷಯದ ಬಗ್ಗೆ ಕೇಂದ್ರ ರೈಲ್ವೆ ಬೋರ್ಡ್ ಮಾಜಿ ಸದಸ್ಯ ಕೆ. ವೆಂಕಟೇಶ್ ಕಿಣಿ ವಿಚಾರ ಮಂಡನೆ ಮಾಡಲಿದ್ದಾರೆ. ಬಳಿಕ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅವರೊಂದಿಗೆ ಸಾರ್ವಜನಿಕರ ಸಂವಾದ ನಡೆಯಲಿದ್ದು, ಬೈಂದೂರು ವಿಧಾನಸಭಾ ಕ್ಷೇತ್ರದ ನಾಗರಿಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ ಎಂದು ಸಂಪಾದಕ ಸುನಿಲ್ ಹೆಚ್. ಜಿ. ಬೈಂದೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶತಮಾನದ ಸಂಭ್ರಮಕ್ಕೆ ಸಜ್ಜಾದ ಪುತ್ತೂರು ಎಲ್.ವಿ.ಪಿ. ಶಾಲೆ; ನ. 20 ಮತ್ತು 21ರಂದು ಶತಮಾನೋತ್ಸವ ಆಚರಣೆ

ಉಡುಪಿ, ನ.19: ಉಡುಪಿಯ ಪುತ್ತೂರಿನ ಎಲ್.ವಿ.ಪಿ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯು...

ಪೇಶ್ ಇಮಾಮ್ ಹಾಗೂ ಮುಅಝಿನ್‌ರವರ ಬಾಕಿ ಗೌರವಧನ ಕೂಡಲೇ ಬಿಡುಗಡೆಗೊಳಿಸಿ: ಅಸ್ಗರ್ ಮುಡಿಪು ಆಗ್ರಹ

ಮಂಗಳೂರು, ನ.19: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಡಳಿತಾವಧಿಯಲ್ಲಿ ಮುಸ್ಲಿಂ...

ಕಾವೇರಿ 2.0: ಆಸ್ತಿ ನೋಂದಣಿಗೆ ಡಿಜಿಟಲ್ ಸ್ಪರ್ಶ

ಬೆಂಗಳೂರು, ನ.19: ಆಸ್ತಿ ನೋಂದಣಿಗಾಗಿ ಕಚೇರಿಗಳಿಗೆ ತೆರಳಿ ಭೌತಿಕ ದಾಖಲೆಗಳನ್ನು ಸಲ್ಲಿಸುವ...
error: Content is protected !!