Monday, November 25, 2024
Monday, November 25, 2024

ಮುನಿಯಾಲ್ ಆಯುರ್ವೇದ: ವಿಶ್ವ ಯೋಗ ದಿನಾಚರಣೆ

ಮುನಿಯಾಲ್ ಆಯುರ್ವೇದ: ವಿಶ್ವ ಯೋಗ ದಿನಾಚರಣೆ

Date:

ಉಡುಪಿ, ಜೂ. 23: ಮುನಿಯಾಲ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಮುನಿಯಾಲ್ ಯೋಗ ಮತ್ತು ನ್ಯಾಚುರೋಪತಿ ಕಾಲೇಜು ಇದರ ಜಂಟಿ ಆಶ್ರಯದಲ್ಲಿ 9ನೇ ಅಂತರರಾಷ್ಟೀಯ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕೆಎಂಸಿ ಮಣಿಪಾಲ ಯೋಗ ವಿಭಾಗ ನಿವೃತ್ತ ಮುಖ್ಯಸ್ಥರಾದ ಡಾ. ಗಣಪತಿ ಜೋಯಿಸ, ಮುನಿಯಾಲ್ ಆಯುರ್ವೇದ ಕಾಲೇಜಿನ ಪ್ರಾಂಶುಪಾಲರಾದ ಡಾ. ಸತ್ಯನಾರಾಯಣ ಬಿ., ಮುನಿಯಾಲ್ ಯೋಗ ಮತ್ತು ನ್ಯಾಚುರೋಪತಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಅಪರ್ಣ ಸುರೇಂದ್ರ, ಸ್ನಾತಕೋತ್ತರ ವಿಭಾಗದ ಮುಖ್ಯಸ್ಥರಾದ ಡಾ. ಚಂದ್ರಕಾಂತ್ ಭಟ್, ಸ್ನಾತಕ ಪೂರ್ವ ವಿಭಾಗದ ಮುಖ್ಯಸ್ಥರಾದ ಡಾ. ಶುಭ ಎಂ ಮುಂತಾದವರು ಉಪಸ್ಥಿತರಿದ್ದರು.

ಡಾ. ಗಣಪತಿ ಜೋಯಿಸ ಇವರು ಸಭೆಯನ್ನು ಉದ್ದೇಶಿಸಿ, ಯೋಗದ ಮಹತ್ವ ಮತ್ತು ಈ ವರ್ಷದ ಅಂತರರಾಷ್ಟ್ರೀಯ ಯೋಗ ದಿನದ ಧ್ಯೇಯವಾದ ‘ವಸುದೈವ ಕುಟುಂಬಕಮ್’ ಎಂಬುದನ್ನು ಸವಿಸ್ತಾರವಾಗಿ ವಿವರಿಸಿದರು. ಡಾ. ಸತ್ಯನಾರಾಯಣ ಬಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಸ್ಥೆಯ ಯೋಗಶಿಕ್ಷಕಿ ಜ್ಯೋತ್ಸ್ನಾ ಯೋಗ ಪ್ರಾತ್ಯಕ್ಷಿಕೆಯನ್ನು ಸಂಸ್ಥೆಯ ವಿದ್ಯಾರ್ಥಿಗಳಿಂದ ನಡೆಸಿಕೊಟ್ಟರು. ಸ್ವಸ್ಥವೃತ್ತ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಆಶಿತಾ ಕಾರ್ಯಕ್ರಮ ನಿರೂಪಿಸಿದರು.

ಸಭಾ ಕಾರ್ಯಕ್ರಮದ ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿವಿಧ ರೀತಿಯ ಯೋಗನೃತ್ಯ, ಯೋಗ ಆಸನಗಳನ್ನು ಪ್ರದರ್ಶಿಸಲಾಯಿತು. ಉಭಯ ಸಂಸ್ಥೆಯ ವೈದ್ಯರು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಎಚ್ ಪಿ ಆರ್ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಮಣಿಪಾಲ ಹಾಗೂ ಕ್ರೈಸ್ಟ್ ಶಾಲೆ ಮಣಿಪಾಲದಲ್ಲಿ ಸಂಸ್ಥೆಯ ಸ್ವಸ್ಥವೃತ್ತ ವಿಭಾಗದಿಂದ ರೋಟರಾಕ್ಟ್ ಘಟಕದ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಂದ ಯೋಗದ ಮಹತ್ವ ಮತ್ತು ಪ್ರಾತ್ಯಕ್ಷಿಕೆಯನ್ನು ನಡೆಸಿಕೊಡಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!