Sunday, January 19, 2025
Sunday, January 19, 2025

ಎಚ್.ಎಂ.ಎಂ ವಿ.ಕೆ.ಆರ್: ಯೋಗ ದಿನಾಚರಣೆ

ಎಚ್.ಎಂ.ಎಂ ವಿ.ಕೆ.ಆರ್: ಯೋಗ ದಿನಾಚರಣೆ

Date:

ಕುಂದಾಪುರ, ಜೂ. 23: ಬಿ.ಎಂ. ಸುಕುಮಾರ ಶೆಟ್ಟಿ ಅಧ್ಯಕ್ಷತೆಯ ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಂ.ಎಂ ಪ್ರಾಥಮಿಕ ಮತ್ತು ವಿ.ಕೆ. ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಇಶಾ ಫೌಂಡೇಶನ್ ನ ಯೋಗ ಗುರುಗಳಾದ ಪ್ರವೀಣ್ ಕುಮಾರ್ ರವರು ಮಾತನಾಡಿ, ಪ್ರಾಚೀನ ಭಾರತೀಯ ಸಂಪ್ರದಾಯದ ಅತ್ಯಮೂಲ್ಯವಾದಂತಹ ಕೊಡುಗೆ ಯೋಗ. ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ವೃದ್ಧಿಸುವಲ್ಲಿ ಯೋಗವು ಪ್ರಮುಖವಾದಂತಹ ಪಾತ್ರವನ್ನು ವಹಿಸುತ್ತದೆ. ದಿನನಿತ್ಯದ ಯೋಗಾಭ್ಯಾಸದಿಂದ ಮಕ್ಕಳಿಗೆ ಏಕಾಗ್ರತೆ ಶಿಸ್ತು ಸಂಯಮ ವನ್ನು ಬೆಳೆಸಿಕೊಳ್ಳಲು ಸಹಕಾರಿಯಾಗಿದೆ ಎಂದರು. ಸಂಸ್ಥೆಯ ವತಿಯಿಂದ ಮುಖ್ಯ ಅತಿಥಿಗಳನ್ನು ಸನ್ಮಾನಿಸಲಾಯಿತು.

ಪ್ರಾಂಶುಪಾಲೆ ಡಾ. ಚಿಂತನಾ ರಾಜೇಶ್ ಅಧ್ಯಕ್ಷತೆಯನ್ನು ವಹಿಸಿದ್ದು, ಉಪಪ್ರಾಂಶುಪಾಲೆ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶುಭಾ ಕೆ.ಎನ್., ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಾದ ಜಗದೀಶ್ ಆಚಾರ್ ಸಾಸ್ತಾನ, ಪ್ರೌಢಶಾಲಾ ಸಹಾಯಕ ಮುಖ್ಯ ಶಿಕ್ಷಕ ಚಂದ್ರಶೇಖರ್ ಶೆಟ್ಟಿ, ಶಾಲೆಯ ಮುಖ್ಯ ಶಿಕ್ಷಕಿ ಲತಾ ಜಿ ಭಟ್ ಉಪಸ್ಥಿತರಿದ್ದರು. ಶಿಕ್ಷಕಿ ಶ್ರೀದೇವಿ ಕಾರ್ಯಕ್ರಮವನ್ನು ನಿರೂಪಿಸಿದರು. ಪ್ರಾಥಮಿಕ ವಿಭಾಗದ ಸಹಾಯಕ ಮುಖ್ಯ ಶಿಕ್ಷಕಿ ಕವಿತಾ ಭಟ್ ಕಾರ್ಯಕ್ರಮವನ್ನು ಸಂಯೋಜಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತಾಂತ್ರಿಕ ಸಹಾಯಕರ ಹುದ್ದೆ: ಅರ್ಜಿ ಅಹ್ವಾನ

ಉಡುಪಿ, ಜ.19: ಕೃಷಿ ಇಲಾಖೆಯ ವತಿಯಿಂದ ಅನುಷ್ಟಾನಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ...

ಜ. 19-21 ರವರೆಗೆ ನಾಟಕೋತ್ಸವ ಪ್ರದರ್ಶನ

ಉಡುಪಿ, ಜ.19: ಕಾರ್ಕಳ ಯಕ್ಷ ರಂಗಾಯಣ ಇವರ ವತಿಯಿಂದ ಜನವರಿ 19...

ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ

ಉಡುಪಿ, ಜ.19: ರಾಷ್ಟ್ರೀಯ ಹೆದ್ದಾರಿ 169 ಎ ರ ಉಡುಪಿ ನಗರ...

ಕರ್ನಾಟಕ ಕ್ರೀಡಾಕೂಟ ಸೈಕ್ಲಿಂಗ್ ಸ್ಪರ್ಧೆ: ಉಡುಪಿ ಜಿಲ್ಲೆಯಲ್ಲಿ ಸಂಚಾರ ಮಾರ್ಗ ಬದಲಾವಣೆ

ಉಡುಪಿ, ಜ.18: ಕರ್ನಾಟಕ ಕ್ರೀಡಾಕೂಟದ ಅಂಗವಾಗಿ ಜನವರಿ 19 ರಂದು ಸೈಕ್ಲಿಂಗ್...
error: Content is protected !!