Saturday, January 18, 2025
Saturday, January 18, 2025

ಕಾಪು: ಯಕ್ಷಗಾನ ಪೂರ್ವಭಾವಿ ಸಭೆ

ಕಾಪು: ಯಕ್ಷಗಾನ ಪೂರ್ವಭಾವಿ ಸಭೆ

Date:

ಕಾಪು, ಜೂ. 24: ಯಕ್ಷಶಿಕ್ಷಣ ಟ್ರಸ್ಟ್ ಕಳೆದ 17 ವರ್ಷಗಳಿಂದ ಉಡುಪಿ ವಿಧಾನಸಭಾ ಕ್ಷೇತ್ರದ 48 ಪ್ರೌಢಶಾಲೆಗಳಲ್ಲಿ ಯಕ್ಷಗಾನ ತರಬೇತಿ ನೀಡುತ್ತಾ ಬಂದಿದೆ. ನೂತನವಾಗಿ ಆಯ್ಕೆಯಾದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಇದರ ಧನಾತ್ಮಕ ಅಂಶವನ್ನು ಮನಗಂಡು ತಮ್ಮ ಕ್ಷೇತ್ರದಲ್ಲಿಯೂ ಇಂತಹ ಒಂದು ಅಭಿಯಾನವನ್ನು ಆರಂಭಿಸಲು ಯಕ್ಷಶಿಕ್ಷಣ ಟ್ರಸ್ಟ್ ಸಹಕಾರ ಕೇಳಿದ ಹಿನ್ನಲೆಯಲ್ಲಿ ಶಾಸಕರು ಮತ್ತು ಟ್ರಸ್ಟ್ ಪದಾಧಿಕಾರಿಗಳ ಸಭೆ ಕಾಪು ಶಾಸಕರ ಕಛೇರಿಯಲ್ಲಿ ಜರಗಿತು. ನಮ್ಮ ಸಂಸ್ಕೃತಿಯಲ್ಲಿ ಮೂಡಿಬಂದ ಶ್ರೀಮಂತ ಕಲೆ ಯಕ್ಷಗಾನ ಇದನ್ನು ಮಕ್ಕಳಿಗೆ ಕಲಿಸುವುದರ ಮೂಲಕ ಅವರು ಧನಾತ್ಮಕವಾಗಿ ಯೋಚಿಸುವಂತೆ ಮಾಡಲು ಸಾಧ್ಯವಾಗುತ್ತದೆ. ಇದಕ್ಕೆ ಶಿಕ್ಷಕರ ಸಹಕಾರ ಬಹಳ ಮುಖ್ಯ ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಭಿಪ್ರಾಯಪಟ್ಟರು. ಇದರಲ್ಲಿ ಸುಮಾರು 15 ಪ್ರೌಢಶಾಲೆಗಳ ಶಿಕ್ಷಕ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಟ್ರಸ್ಟಿನ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಸ್ತಾವನೆಯ ಮಾತುಗಳೊಂದಿಗೆ ಸ್ವಾಗತಿಸಿದರು. ಟ್ರಸ್ಟಿಗಳಾದ ಎಂ. ಗಂಗಾಧರ ರಾವ್ ಮತ್ತು ವಿ. ಜಿ. ಶೆಟ್ಟಿ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದಂತೆ, ಇಲ್ಲಿಯೂ ಎಲ್ಲರು ಒಟ್ಟಾಗಿ ಇದನ್ನು ಯಶಸ್ವಿಗೊಳಿಸೋಣ ಎಂದು ಹೇಳಿದರು. ಈ ವರ್ಷ ಪ್ರಾಯೋಗಿಕವಾಗಿ 10 ರಿಂದ 15 ಶಾಲೆಗಳಲ್ಲಿ ಆರಂಭಿಸುವ ಕುರಿತು ನಿರ್ಣಯಿಸಲಾಯಿತು. ಭಾಗವಹಿಸಿದ ಶಾಲಾ ಶಿಕ್ಷಕರು ಧನಾತ್ಮಕವಾಗಿ ಸ್ಪಂಧಿಸಿದರು. ಶಾಸಕರು ಟ್ರಸ್ಟ್ ನ ಪದಾಧಿಕಾರಿಗಳನ್ನು ಶಾಲು ಹೊದಿಸಿ ಗೌರವಿಸಿದರು. ಟ್ರಸ್ಟಿ ಎ. ನಟರಾಜ ಉಪಾಧ್ಯಾಯ ಉಪಸ್ಥಿತರಿದ್ದರು. ನಾರಾಯಣ ಎಂ. ಹೆಗಡೆ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!