Saturday, January 18, 2025
Saturday, January 18, 2025

ಅನಧಿಕೃತ ಪ್ರಾಣಿ ವಧೆ ತಡೆ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಅನಧಿಕೃತ ಪ್ರಾಣಿ ವಧೆ ತಡೆ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

Date:

ಉಡುಪಿ, ಜೂನ್ 26: ಜಿಲ್ಲೆಯಾದ್ಯಂತ ಬಕ್ರೀದ್ ಹಬ್ಬದ ಆಚರಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಲೋಪ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. ಅವರು ವರ್ಚುವಲ್ ಮೂಲಕ ಬಕ್ರೀದ್ ಆಚರಣೆ ಸಂದರ್ಭ ಅನಧಿಕೃತವಾಗಿ ಜಾನುವಾರಗಳ ವಧೆ ಹಾಗೂ ಸಾಗಾಣಿಕೆ ತಡೆಗಟ್ಟಲು ರಚಿಸಿರುವ ಜಿಲ್ಲಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅನಧಿಕೃತ ಪ್ರಾಣಿ ವಧೆ ತಡೆಯಲು ಗೋಹತ್ಯೆ ನಿಷೇಧ ಕಾಯ್ದೆ ಅಡಿಯಲ್ಲಿ ವಿವಿಧ ತಂಡಗಳನ್ನು ರಚಿಸಿ, ಕಣ್ಗಾವಲು ಇಡುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚಿಸಿದರು.

ಜಿಲ್ಲೆಯಾದ್ಯಂತ ನಿಯೋಜಿಸಲಾದ ಚೆಕ್‌ಪೋಸ್ಟ್ ಗಳಲ್ಲಿ ಅನಧಿಕೃತವಾಗಿ ಜಾನುವಾರುಗಳು ಸಾಗಾಣಿಕೆ ಆಗದಂತೆ ನಿಗಾ ವಹಿಸಬೇಕು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಕ್ರಮ ವಹಿಸಬೇಕು ಎಂದರು. ಅನಧಿಕೃತವಾಗಿ ಜಾನುವಾರುಗಳನ್ನು ವಶಪಡಿಸಿಕೊಂಡಲ್ಲಿ ಅವುಗಳ ರಕ್ಷಣೆಗಾಗಿ ಗುರುತಿಸಲಾದ ಗೋಶಾಲೆಗಳಲ್ಲಿ ಸಂರಕ್ಷಣೆ ಮಾಡುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಅವರು, ಈ ತರಹದ ಪ್ರಕರಣಗಳು ಕಂಡುಬಂದಲ್ಲಿ ಸಾರ್ವಜನಿಕರು ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಎಂ ಹಾಕೆ, ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್.ಆರ್., ನಗರಸಭೆ ಪೌರಾಯುಕ್ತ ರಮೇಶ್ ನಾಯಕ್, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ಶಂಕರ್ ಶೆಟ್ಟಿ, ವಿವಿಧ ತಾಲೂಕುಗಳ ತಹಶೀಲ್ದಾರ್‌ಗಳು, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...

ಗಾನ ಸಂಭ್ರಮ 2025 ಸಂಪನ್ನ

ಕುಂದಾಪುರ, ಜ.18: ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲ ನಾಯಕವಾಡಿ ಗುಜ್ಜಾಡಿಯ ಸುವರ್ಣ...
error: Content is protected !!