Sunday, January 19, 2025
Sunday, January 19, 2025

ತೆಂಕನಿಡಿಯೂರು: ಮಂಗಳೂರು ವಿವಿ ಮಟ್ಟದ ಪವರ್‌ಲಿಫ್ಟಿಂಗ್ ಚಾಂಪಿಯನ್‌ಷಿಪ್

ತೆಂಕನಿಡಿಯೂರು: ಮಂಗಳೂರು ವಿವಿ ಮಟ್ಟದ ಪವರ್‌ಲಿಫ್ಟಿಂಗ್ ಚಾಂಪಿಯನ್‌ಷಿಪ್

Date:

ಮಲ್ಪೆ, ಜೂ. 27: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ತೆಂಕನಿಡಿಯೂರು ಸ್ಪೋರ್ಟ್ಸ್ ಕ್ಲಬ್ ಹಾಗೂ ಲಯನ್ಸ್ ಕ್ಲಬ್ ಉಡುಪಿ ಅಮೃತ್ ಸಂಯುಕ್ತ ಆಶ್ರಯದಲ್ಲಿ ನಡೆದ ಮಂಗಳೂರು ವಿವಿ ಪುರುಷರ ಮತ್ತು ಮಹಿಳೆಯರ ಪವರ್‌ಲಿಫ್ಟಿಂಗ್ ಚಾಂಪಿಯನ್‌ಷಿಪ್ ಸಮಾರೋಪ ಸಮಾರಂಭ ನಡೆಯಿತು. ಪ್ರಶಸ್ತಿ ಪ್ರದಾನ ನೆರವೇರಿಸಿದ ಮಾಜಿ ಶಾಸಕ ಕೆ.ರಘುಪತಿ ಭಟ್ ಮಾತನಾಡಿ, ಸರಕಾರಿ ಸಂಸ್ಥೆಗಳಲ್ಲಿ ಇದೇ ರೀತಿಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಿದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಾಕಷ್ಟು ಉತ್ತೇಜನ ನೀಡಿದಂತಾಗುತ್ತದೆ. ಈ ನಿಟ್ಟಿನಲ್ಲಿ ತೆಂಕನಿಡಿಯುರು ಕಾಲೇಜಿನ ಸಾಧನೆ ಶ್ಲಾಘನೀಯವೆಂದರು.

ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲರಾದ ಪ್ರೊ.ಸುರೇಶ್ ರೈ.ಕೆ, ಪಂದ್ಯಾಕೂಟದ ಯಶಸ್ಸಿಗೆ ಶ್ರಮಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿ ಜಯಶಾಲಿಯಾದ ಕ್ರೀಡಾಪಟುಗಳಿಗೆ ಮುಂದಿನ ದಿನಗಳಲ್ಲಿ ಯಶಸ್ಸು ಸಿಗಲೆಂದು ಶುಭ ಹಾರೈಸಿದರು. ಪಂದ್ಯಾಕೂಟದ ಆಯೋಜಕ ಡಾ.ರೋಶನ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ತೀರ್ಪುಗಾರರಾಗಿ ಸಹಕರಿಸಿದ ಅಂತರಾಷ್ಟ್ರೀಯ ಕ್ರೀಡಾಪಟು ಪುಷ್ಪರಾಜ್ ಹೆಗ್ಡೆ, ಪ್ರೇಮನಾಥ ಉಳ್ಳಾಲ, ಜಗದೀಶ್, ಪ್ರಭಾವತಿ, ಪ್ರಮೋದ್, ಪಂದ್ಯಾಕೂಟದ ವೀಕ್ಷಕರಾದ ಹರಿದಾಸ್ ಕುಳೂರು, ರಾಮಚಂದ್ರ ಪಾಟ್ಕರ್, ಪ್ರಸಾದ್ ರಾವ್, ತೆಂಕನಿಡಿಯೂರು ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾದ ಕೃಷ್ಣಾನಂದ ಇನ್ನಿತರರು ಉಪಸ್ಥಿತರಿದ್ದರು. ಕಾಲೇಜಿನ ಕಚೇರಿ ಸಹಾಯಕರಾದ ಪಾಂಡು ಮತ್ತು ಸುನಿಲ್ ಸಹಕರಿಸಿದರು.

ಫಲಿತಾಂಶ: ಪುರುಷರ ವಿಭಾಗದಲ್ಲಿ ಆಳ್ವಾಸ್ ಕಾಲೇಜು ಮೂಡುಬಿದಿರೆ ಪ್ರಥಮ, ಸ.ಪ್ರ.ದ.ಕಾ.ತೆಂಕನಿಡಿಯೂರು ದ್ವಿತೀಯ ಸ್ಥಾನ, ಎಸ್.ಡಿ.ಎಂ. ಉಜಿರೆ ತೃತೀಯ ಸ್ಥಾನ ಪಡೆದುಕೊಂಡಿದೆ. ಆಳ್ವಾಸ್ ಕಾಲೇಜಿನ ರಂಜಿತ್ ಜಿ. ಬೆಸ್ಟ್ ಲಿಫ್ಟರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಮಹಿಳಾ ವಿಭಾಗದಲ್ಲಿ ಆಳ್ವಾಸ್ ಕಾಲೇಜು ಮೂಡುಬಿದಿರೆ ಪ್ರಥಮ, ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಕಾಲೇಜು ಅಜ್ಜರಕಾಡು ದ್ವಿತೀಯ, ಎಸ್.ಡಿ.ಎಂ. ಉಜಿರೆ ತೃತೀಯ ಸ್ಥಾನ ಪಡೆದುಕೊಂಡಿದೆ. ಅಜ್ಜರಕಾಡು ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಕಾಲೇಜಿನ ಪ್ರತೀಕ್ಷಾ ಬೆಸ್ಟ್ ಲಿಫ್ಟರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!