ಬ್ರಹ್ಮಾವರ, ಜೂನ್ 28: ಎಸ್.ಎಂ.ಎಸ್ ಕಾಲೇಜು ಬ್ರಹ್ಮಾವರ ಇದರ 43ನೇ ಕಾಲೇಜು ವಾರ್ಷಿಕೋತ್ಸವ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಸಂಚಾಲಕರಾದ ರೆ.ಫಾದರ್ ಎಂ ಸಿ. ಮಥಾಯ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಸುಶೀಲಾ ಆರ್ ರೈ ಶುಭ ಹಾರೈಸಿದರು. ಕಾಲೇಜು ಕಾರ್ಯದರ್ಶಿಗಳಾದ ಅಲ್ವರಿಸ್ ಡಿಸಿಲ್ವಾ, ಪ್ರಾಂಶುಪಾಲ ಡಾ. ಮಂಜುನಾಥ ಉಡುಪ ಕೆ., ಉಪಪ್ರಾಂಶುಪಾಲರಾದ ಡಾ. ವಿದ್ಯಾಲತಾ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು, ಅಂತಾರಾಷ್ಟ್ರೀಯ ಹಾಗೂ ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು, ರೋವರ್ಸ್ ಮತ್ತು ರೇಂಜರ್ಸ್ ನಲ್ಲಿ ರಾಜ್ಯ ಪುರಸ್ಕಾರ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.