ಉಡುಪಿ, ಜುಲೈ 03: ತೋಟಗಾರಿಕೆ ಇಲಾಖೆಯ ವತಿಯಿಂದ ಜಿಲ್ಲೆಯ ತೋಟಗಾರಿಕೆ ಕ್ಷೇತ್ರಗಳಲ್ಲಿ ರೈತರ ಹಾಗೂ ಸಾರ್ವಜನಿಕರ ಬೇಡಿಕೆ ಆಧಾರದ ಮೇಲೆ ವಿವಿಧ ತೋಟಗಾರಿಕೆ ಕಸಿ/ ಸಸಿ ಗಿಡಗಳನ್ನು ಉತ್ಪಾದಿಸಿ ಇಲಾಖಾ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಉಡುಪಿ ತಾಲೂಕಿನ ಶಿವಳ್ಳಿ ತೋಟಗಾರಿಕೆ ಕ್ಷೇತ್ರದಲ್ಲಿ ಅಡಿಕೆ 2,667, ಕಾಳು ಮೆಣಸು 4,328 ಹಾಗೂ ತೆಂಗು 458 ಗಿಡಗಳು ಸೇರಿದಂತೆ ಒಟ್ಟು 7,453 ಸಸಿಗಳು ಮತ್ತು ಕಾರ್ಕಳ ತಾಲೂಕಿನ ರಾಮಸಮುದ್ರ ತೋಟಗಾರಿಕೆ ಕ್ಷೇತ್ರಗಳಲ್ಲಿ ಅಡಿಕೆ 9,000, ಗೋಡಂಬಿ 5,683 ಹಾಗೂ 15,266 ಕಾಳುಮೆಣಸು ಸಸಿಗಳು ಸೇರಿದಂತೆ ಒಟ್ಟು 29,949 ಉತ್ತಮ ಗುಣಮಟ್ಟದ ಗಿಡಗಳು ಲಭ್ಯವಿರುತ್ತದೆ.
ಅಡಿಕೆ (ರೂ. 20), ಕಸಿ ಗೇರು (ರೂ. 32), ಕಾಳು ಮೆಣಸು (ರೂ.11) ಹಾಗೂ ತೆಂಗು ತಳಿ (ರೂ. 170) ಗಿಡಗಳನ್ನು ಖರೀದಿಸಲು ವರುಣ್, ಸಹಾಯಕ ತೋಟಗಾರಿಕೆ ನಿರ್ದೇಶಕರು, ಮೊ.ನಂ 7892326323 ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಕಾರ್ಕಳ ತಾಲೂಕು ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.