Saturday, October 19, 2024
Saturday, October 19, 2024

ಕ್ರಿಯೇಟಿವ್ ಪದವಿಪೂರ್ವ ಕಾಲೇಜು: ಕ್ರಿಯೇಟಿವ್‌ ಸಮಾಗಮ

ಕ್ರಿಯೇಟಿವ್ ಪದವಿಪೂರ್ವ ಕಾಲೇಜು: ಕ್ರಿಯೇಟಿವ್‌ ಸಮಾಗಮ

Date:

ಉಡುಪಿ, ಜುಲೈ 3: ಕ್ರಿಯೇಟಿವ್‌ ಶಿಕ್ಷಣ ಪ್ರತಿಷ್ಠಾನ (ರಿ.) ಕಾರ್ಕಳ ಇವರ ಸಹಭಾಗಿತ್ವದ ಕ್ರಿಯೇಟಿವ್‌ ಪದವಿಪೂರ್ವ ಕಾಲೇಜು ಕಲ್ಯಾಣಪುರ ಉಡುಪಿಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಮತ್ತು ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡಾ ಸಂಘಟನೆಗಳ ಉದ್ಘಾಟನೆ ನಿಮಿತ್ತ ‘ಕ್ರಿಯೇಟಿವ್‌ ಸಮಾಗಮ’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಸಂಸ್ಥೆಯ ಸಂಸ್ಥಾಪಕರುಗಳಲ್ಲಿ ಓರ್ವರಾದ ಅಶ್ವತ್ ಎಸ್‌ ಎಲ್‌ ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ಕನಸನ್ನು ನನಸು ಮಾಡಿಕೊಳ್ಳಲು ಪಿಯುಸಿ ಹಂತಕ್ಕೆ ಬಂದಿದ್ದು, ಬದುಕಿನ ದಿಕ್ಕನ್ನೇ ಬದಲಾಯಿಸುವ ಈ ಹಂತ ಜೀವನದ ಅಮೂಲ್ಯವಾದ ಘಟ್ಟ. ಆದುದರಿಂದ ವಿದ್ಯಾರ್ಥಿಗಳು ತಮ್ಮ ಜೀವನವನ್ನು ಸಾರ್ಥಕತೆಗೊಳಿಸುವಲ್ಲಿ ಶ್ರದ್ಧಾಪೂರ್ವಕವಾಗಿ ಸಕ್ರಿಯವಾಗಿ ಕಲಿಕೆಯಲ್ಲಿ ತೊಡಗಿಸಿಕೊಳ್ಳುವುದು ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಅನಿವಾರ್ಯ. ವಿದ್ಯಾರ್ಥಿಗಳು ತಮ್ಮ ಸರ್ವಾಂಗೀಣ ಬೆಳವಣಿಗೆ ಸಿದ್ದಗೊಳಿಸುವಲ್ಲಿ ನಮ್ಮ ಕ್ರಿಯೇಟಿವ್‌ ಸಂಸ್ಥೆ ಸದಾ ತಮ್ಮ ಜೊತೆಗಿರುತ್ತದೆ ಎಂದರು.

ಸಂಸ್ಥೆಯ ಪ್ರಾಂಶುಪಾಲ ಸ್ಟ್ಯಾನಿ ಲೋಬೊ ಸ್ವಾಗತಿಸಿ, ಸಂಸ್ಥೆಯ ಏಳಿಗೆಗೆ ಸಂಸ್ಥಾಪಕರುಗಳು ಹಗಲಿರುಳು ದುಡಿದು ಕಟ್ಟಿದ್ದರ ಫಲವಾಗಿ ಇಂದು ಹೆಮ್ಮರವಾಗಿ ಬೆಳೆದಿದೆ. ಒಂದು ಸುಸಜ್ಜಿತ ಕಾಲೇಜು ನಿರ್ಮಾಣದಲ್ಲಿ ಅವರ ಕಾರ್ಯ ಶ್ಲಾಘನೀಯ ಎಂದರು. ವಿದ್ಯಾರ್ಥಿಗಳು ಕಲಿಕೆಯಲ್ಲಿ ಶೃದ್ಧೆ, ಸಂಯಮವನ್ನು ಬೆಳೆಸಿಕೊಂಡಾಗ ಭವ್ಯ ಭಾರತದ ದಿವ್ಯ ಪ್ರಜೆಗಳಾಗಿ ಹೊರಹೊಮ್ಮುತ್ತಾರೆ ಎಂದರು. ಕಾರ್ಯಕ್ರಮದಲ್ಲಿ 2022-23 ನೇ ಶೈಕ್ಷಣಿಕ ಸಾಲಿನ ಕಲಿಕೆಯಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನವನ್ನು ಪಡೆದ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು. ಜಿಲ್ಲಾಮಟ್ಟದ ಸಾಂಸ್ಕೃತಿಕ ಚಟುವಟಿಕೆಯಲ್ಲಿ ಭಾಗವಹಿಸಿ ಬಹುಮಾನವನ್ನು ಪಡೆದ ವಿದ್ಯಾರ್ಥಿಗಳ ತಂಡವನ್ನು ಗೌರವಿಸಲಾಯಿತು. ಬೋಧಕ- ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!