ಉಡುಪಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಬೆಂಗಳೂರು, ಸಿಡಾಕ್ ಧಾರವಾಡ ಹಾಗೂ ಶಾರದಾಂಬ ಇನ್ಫೋಟೆಕ್ ಪ್ರೈವೆಟ್ ಲಿಮಿಟೆಡ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಸಿಡಾಕ್ ವತಿಯಿಂದ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ ಮೂರು ದಿನಗಳ ಕಾರ್ಯಕ್ರಮವು ಜನವರಿ 13 ರಂದು ಪೆರ್ಡೂರು ಶಾರದಾಂಬ ಇನ್ಫೋಟೆಕ್ ಪ್ರೈವೆಟ್ ಲಿಮಿಟೆಡ್‌ನಲ್ಲಿ ನಡೆಯಿತು.
ತಾಲೂಕು ಪಂಚಾಯತ್‌ನ ಮಾಜಿ ಅಧ್ಯಕ್ಷೆ ಗೀತಾ ಜಿ ಪ್ರಭು ಕಾರ್ಯಕ್ರಮ ಉದ್ಘಾಟಿಸಿದರು. ಜಂಟಿ ನಿರ್ದೇಶಕ ಅರವಿಂದ ಡಿ ಬಾಳೇರಿ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಯಾಗಿ ಬ್ಯಾಂಕ್ ಆಫ್ ಬರೋಡ ಪೆರ್ಡೂರು ಶಾಖೆಯ ಪ್ರಧಾನ ವ್ಯವಸ್ಥಾಪಕ ಅಕ್ಷರ್, ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಸಂಪನ್ಮೂಲ ವ್ಯಕ್ತಿ ಜೈಕಿಶನ್ ಭಟ್, ಸಿಡಾಕ್‌ನ ತರಬೇತುದಾರರಾದ ಪ್ರಥ್ವಿರಾಜ್ ನಾಯಕ್, ಪ್ರವಿಷ್ಯ, ಶಾರದಾಂಬ ಇನ್ಫೋಟೆಕ್‌ನ ಕೇಂದ್ರ ವ್ಯವಸ್ಥಾಪಕ ರಂಜಿತ್ ಮುಂತಾದವರು ಉಪಸ್ಥಿತರಿದ್ದರು.
ಶಾರದಾಂಬ ಇನ್ಫೋಟೆಕ್‌ನ ತರಬೇತುದಾರರಾದ ನೇತ್ರಾವತಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲೆಯ ಸುಮಾರು 30 ಮಂದಿ ಸ್ವ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದರು.