Thursday, April 23, 2026
Thursday, April 23, 2026

ಕೌಶಲ್ಯ ಕರ್ನಾಟಕ ಯೋಜನೆ ಕಾರ್ಯಕ್ರಮ

ಕೌಶಲ್ಯ ಕರ್ನಾಟಕ ಯೋಜನೆ ಕಾರ್ಯಕ್ರಮ

Date:

ಉಡುಪಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಬೆಂಗಳೂರು, ಸಿಡಾಕ್ ಧಾರವಾಡ ಹಾಗೂ ಶಾರದಾಂಬ ಇನ್ಫೋಟೆಕ್ ಪ್ರೈವೆಟ್ ಲಿಮಿಟೆಡ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಸಿಡಾಕ್ ವತಿಯಿಂದ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ ಮೂರು ದಿನಗಳ ಕಾರ್ಯಕ್ರಮವು ಜನವರಿ 13 ರಂದು ಪೆರ್ಡೂರು ಶಾರದಾಂಬ ಇನ್ಫೋಟೆಕ್ ಪ್ರೈವೆಟ್ ಲಿಮಿಟೆಡ್‌ನಲ್ಲಿ ನಡೆಯಿತು.

ತಾಲೂಕು ಪಂಚಾಯತ್‌ನ ಮಾಜಿ ಅಧ್ಯಕ್ಷೆ ಗೀತಾ ಜಿ ಪ್ರಭು ಕಾರ್ಯಕ್ರಮ ಉದ್ಘಾಟಿಸಿದರು. ಜಂಟಿ ನಿರ್ದೇಶಕ ಅರವಿಂದ ಡಿ ಬಾಳೇರಿ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಬ್ಯಾಂಕ್ ಆಫ್ ಬರೋಡ ಪೆರ್ಡೂರು ಶಾಖೆಯ ಪ್ರಧಾನ ವ್ಯವಸ್ಥಾಪಕ ಅಕ್ಷರ್, ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಸಂಪನ್ಮೂಲ ವ್ಯಕ್ತಿ ಜೈಕಿಶನ್ ಭಟ್, ಸಿಡಾಕ್‌ನ ತರಬೇತುದಾರರಾದ ಪ್ರಥ್ವಿರಾಜ್ ನಾಯಕ್, ಪ್ರವಿಷ್ಯ, ಶಾರದಾಂಬ ಇನ್ಫೋಟೆಕ್‌ನ ಕೇಂದ್ರ ವ್ಯವಸ್ಥಾಪಕ ರಂಜಿತ್ ಮುಂತಾದವರು ಉಪಸ್ಥಿತರಿದ್ದರು.

ಶಾರದಾಂಬ ಇನ್ಫೋಟೆಕ್‌ನ ತರಬೇತುದಾರರಾದ ನೇತ್ರಾವತಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲೆಯ ಸುಮಾರು 30 ಮಂದಿ ಸ್ವ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮನುಷ್ಯ ಮಾನವೀಯನಾಗುವುದು ಮೂಕಜ್ಜಿಯ ಸಂದೇಶ: ಪ್ರೊ.ಸ್ವೀವನ್ ಕ್ವಾಡ್ರಸ್

ಉಡುಪಿ, ಏ.22: ಮನುಷ್ಯ ತನ್ನ ಎಲ್ಲಾ ಸಣ್ಣತನಗಳನ್ನು ಕಳೆದುಕೊಂಡು ಮಾನವೀಯ ವ್ಯಕ್ತಿತ್ವವನ್ನು...

ಹ್ಯಾಕ್ ಫೆಸ್ಟ್ 2026

ಕಾರ್ಕಳ, ಏ.22: ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಫೈನೈಟ್...

ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಯಶಸ್ವಿನ ತಂತ್ರಗಳು

ಬಸ್ರೂರು, ಏ.22: ಶ್ರೀ ಶಾರದಾ ಕಾಲೇಜು ಬಸ್ರೂರು ಗ್ರಂಥಾಲಯ ಮತ್ತು ಮಾಹಿತಿ...

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ವರ್ಷ- ಭಯೋತ್ಪಾದನಾ ಕೃತ್ಯ ಎಸಗಿದವರಿಗೆ ಭಾರತೀಯ ಸೇನೆಯ ಕಠಿಣ ಎಚ್ಚರಿಕೆ

ಶ್ರೀನಗರ, ಏ.22: ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ವರ್ಷ ಈ ದಿನದಂದು,...
error: Content is protected !!