Friday, October 18, 2024
Friday, October 18, 2024

ಜಿ.ಎಸ್.ವಿ.ಎಸ್ ಅಸೋಸಿಯೇಷನ್: ಶೈಕ್ಷಣಿಕ ಸಾಧಕರ ಅಭಿನಂದನಾ ಸಮಾರಂಭ

ಜಿ.ಎಸ್.ವಿ.ಎಸ್ ಅಸೋಸಿಯೇಷನ್: ಶೈಕ್ಷಣಿಕ ಸಾಧಕರ ಅಭಿನಂದನಾ ಸಮಾರಂಭ

Date:

ಗಂಗೊಳ್ಳಿ, ಜು. 5: ಗಂಗೊಳ್ಳಿಯ ಜಿ.ಎಸ್.ವಿ.ಎಸ್ ಅಸೋಸಿಯೇಷನ್ ವತಿಯಿಂದ ಕಳೆದ 2022-23ರ ಶೈಕ್ಷಣಿಕ ವರುಷದಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ಶೇಕಡ 85ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳು ಮತ್ತು ವಿಷಯವಾರು ನೂರಕ್ಕೆ ನೂರು ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಮತ್ತು ಬೋಧಕರನ್ನು ಗೌರವಿಸುವ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭ ಕಾರ್ಯಕ್ರಮ ಇಲ್ಲಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿ ಕುಂದಾಪುರದ ಚಿನ್ಮಯಿ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ಉಮೇಶ್ ಪುತ್ರನ್ ಮಾತನಾಡಿ, ನಮ್ಮಲ್ಲಿ ಇರುವ ಬುದ್ಧಿವಂತಿಕೆಯನ್ನು ಜ್ಞಾನವನ್ನು ಸಂಪತ್ತನ್ನು ಉತ್ತಮವಾದ ಸಾಮಾಜಿಕ ಕೆಲಸಗಳಿಗಾಗಿ ವಿನಿಯೋಗಿಸಬೇಕು. ಅಂತಹ ಕಾರ‍್ಯಗಳಿಂದಲೇ ನಮ್ಮ ಬದುಕಿಗೆ ಅರ್ಥ ಬರುತ್ತದೆ ಎಂದು ಹೇಳಿದರು.

ಡಾ. ಉಮೇಶ್ ಪುತ್ರನ್ ತಮ್ಮ ವತಿಯಿಂದ ಸರಸ್ವತಿ ವಿದ್ಯಾಲಯದ ವಿಜ್ಞಾನದ ಪಿ.ಸಿ.ಎಮ್.ಬಿ ಮತ್ತು ಪಿ.ಸಿ.ಎಮ್.ಸಿ ವಿಭಾಗಗಳಲ್ಲಿ ಪ್ರಥಮ ಸ್ಥಾನವನ್ನು ಪಡೆದ ಮಾನ್ಯತಾ ವಿ ಶೇಠ್, ಪ್ರಿಯಾಂಕ ಕೃಷ್ಣಮೂರ್ತಿ ಮತ್ತು ಸಾಹಿಲ್ ಇವರಿಗೆ ಒಟ್ಟು 55000 ರೂಪಾಯಿಗಳ ನಗದು ಬಹುಮಾನವನ್ನು ವಿತರಿಸಿದರು. ಜಿ.ಎಸ್.ವಿ.ಎಸ್ ಅಸೋಷಿಯೇಷನ್ ವತಿಯಿಂದ ಹೆಚ್ಚುವರಿ 20000 ನಗದು ಬಹುಮಾನವನ್ನು ಇವರಿಗೆ ವಿತರಿಸಲಾಯಿತು.

ರಾಜ್ಯಮಟ್ಟದಲ್ಲಿ ವಾಣಿಜ್ಯ ವಿಭಾಗದಲ್ಲಿ ಒಂಬತ್ತನೇ ಸ್ಥಾನ ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ ಗಳಿಸಿದ ಕೀರ್ತಿ ಭಟ್, ಪಿ.ಸಿ.ಎಮ್. ಬಿ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ ಮಾನ್ಯತಾ ವಿ ಶೇಠ್, ಪ್ರಿಯಾಂಕ ಕೃಷ್ಣಮೂರ್ತಿ, ಪಿ.ಸಿ. ಎಮ್.ಸಿ ವಿಭಾಗದ ಪ್ರಥಮ ಸ್ಥಾನಿ ಸಾಹಿಲ್, ಎಸ್ ಎಸ್ ಎಲ್ ಸಿಯಲ್ಲಿ ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆಯ ಪ್ರಥಮ ಸ್ಥಾನಿ ರುತೇಶ್, ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಜ್ಯೋತಿ ಬುತೆಲ್ಲೋ ಅವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ವಾಣಿಜ್ಯ ವಿಭಾಗದ ಮೂರು ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದ ಕೀರ್ತಿ ಭಟ್, ಸಿಂಚನಾ ಮತ್ತು ಆಶಿತಾ ಇವರಿಗೆ ನಗರ ಕೃಷ್ಣಾನಂದ ಸುಬ್ರಾಯ ನಾಯಕ್ ಸಿ.ಎ ಬೆಂಗಳೂರು ಕೊಡಮಾಡಿದ ತಲಾ ಐದು ಸಾವಿರ ರೂಪಾಯಿಗಳ ನಗದು ಬಹುಮಾನವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಒಟ್ಟು 69 ವಿದ್ಯಾರ್ಥಿ ಸಾಧಕರಿಗೆ ನಗದು ಪುರಸ್ಕಾರವನ್ನು ವಿತರಿಸಲಾಯಿತು. ವಿಷಯವಾರು ನೂರಕ್ಕೆ ನೂರು ಅಂಕಗಳನ್ನು ಪಡೆದ ವಿಷಯಗಳ ಬೋಧಕರನ್ನು ವಿಶೇಷವಾಗಿ ಅಭಿನಂದಿಸಲಾಯಿತು.

ಜಿ.ಎಸ್.ವಿ.ಎಸ್ ಅಸೋಷಿಯೇಷನ್‌ನ ಅಧ್ಯಕ್ಷ ಡಾ. ಕಾಶೀನಾಥ ಪೈ ಅಧ್ಯಕ್ಷತೆ ವಹಿಸಿದ್ದರು. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಮ್ ಸಿ ಸ್ವಾಗತಿಸಿದರು. ಉಪನ್ಯಾಸಕಿ ಪವಿತ್ರಾ ಅತಿಥಿಗಳನ್ನು ಪರಿಚಯಿಸಿದರು. ಉಪನ್ಯಾಸಕರಾದ ಪ್ರವೀಣ ಕಾಮತ್, ರಾಘವೇಂದ್ರ ಭಟ್, ಸುಗುಣ ಆರ್ ಕೆ, ಶಿಕ್ಷಕಿಯರಾದ ಶ್ರೀಲತಾ ಮತ್ತು ಸುಜಾತ ದೇವಾಡಿಗ ಪುರಸ್ಕಾರ ಪಡೆದ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ನೇಹಾ ಕೊಡೇರಿ, ಪೂರ್ವಿ ಚಿತ್ತಾಲ್ ಮತ್ತು ಇಂಚರ ದೇವಾಡಿಗ ಪ್ರಾರ್ಥಿಸಿದರು. ಪ್ರೌಢಶಾಲೆಯ ಉಪಪ್ರಾಂಶುಪಾಲರಾದ ಉಮೇಶ್ ಕರ್ಣಿಕ್ ಉಪಸ್ಥಿತರಿದ್ದರು. ಜಿ.ಎಸ್.ವಿ.ಎಸ್ ಅಸೋಷಿಯೇಷನ್‌ನ ಕಾರ‍್ಯದರ್ಶಿ ಹೆಚ್ ಗಣೇಶ್ ಕಾಮತ್ ಪ್ರಸ್ತಾವಿಕ ಮಾತುಗಳನ್ನಾಡಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಕಾರ್ಯಕ್ರಮ ನಿರೂಪಿಸಿದರು. ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಧ್ಯಾಯ ರಾಘವೇಂದ್ರ ಶೇರುಗಾರ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!