Saturday, January 18, 2025
Saturday, January 18, 2025

ಉಡುಪಿ ಜಿಲ್ಲೆ: ಜು. 11 ಮತ್ತು 13 ರಂದು ವಿದ್ಯುತ್ ವ್ಯತ್ಯಯ

ಉಡುಪಿ ಜಿಲ್ಲೆ: ಜು. 11 ಮತ್ತು 13 ರಂದು ವಿದ್ಯುತ್ ವ್ಯತ್ಯಯ

Date:

ಉಡುಪಿ, ಜುಲೈ 7: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಜುಲೈ 11 ಮತ್ತು 13 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 110/33/11 ಕೆ.ವಿ ಹಿರಿಯಡ್ಕ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಪೆರ್ಡೂರು ಫೀಡರ್ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಪುತ್ತಿಗೆ, ಪಕ್ಕಾಲು, ಪೆರ್ಡೂರು ಪೇಟೆ, ಮುತ್ತೂರ್ಮೆ, ಕುಕ್ಕೆಹಳ್ಳಿ, ಪಾಡಿಗಾರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜುಲೈ 11 ರಂದು ಬೆಳಗ್ಗೆ 9 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

110/11 ಕೆ.ವಿ ಬ್ರಹ್ಮಾವರ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆ.ವಿ ಚೇರ್ಕಾಡಿ, ಕೊಕ್ಕರ್ಣೆ ಫೀಡರ್ ಮಾರ್ಗದಲ್ಲಿ ಹಾಗೂ 110/11ಕೆ.ವಿ ನಿಟ್ಟೂರು ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆ.ವಿ ಕಲ್ಯಾಣಪುರ ಮತ್ತು ಶಾಂತಿವನ ಫೀಡರ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೇರೂರು, ಚಾಂತಾರು, ಕುಂಜಾಲು, ಆರೂರು, ಚೇರ್ಕಾಡಿ, ಹಲುವಳ್ಳಿ, ಪಡುನೀಲಾವರ, ಎಳ್ಳಂಪಳ್ಳಿ, ತಡೆಕಲ್ಲು, ಪ್ರಗತಿನಗರ, ಜಾರ್ಜೆಡ್ಡು, ಗಣೇಶ್ ಕಲಾಮಂದಿರ, ಕೆ.ಕೆ.ಪಾರ್ಮ್ಸ್, ಸಂತೆಕಟ್ಟೆ, ನೇಜಾರು, ಮೂಡುತೋನ್ಸೆ, ಕೋಡಿಬೆಂಗ್ರೆ, ಅಂಬಾಗಿಲು, ಪೆರಂಪಳ್ಳಿ, ಪುತ್ತೂರು, ಗೋಪಾಲಪುರ, ಶಾಂತಿವನ, ಬಡಾನಿಡಿಯೂರು, ಗರಡಿಮಜಲು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜುಲೈ 11 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

33/11 ಕೆ.ವಿ ಶಿರ್ವ ಎಂ.ಯು.ಎಸ್.ಎಸ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಕಾಪು ಫೀಡರ್ ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಾಗೂ ಟ್ರಾನ್ಸ್ಫಾರ್ಮರ್ ಸ್ಟ್ರಕ್ಚರ್ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಉಚ್ಚಿಲ, ಇನ್ನಂಜೆ, ಕಲ್ಯ, ಕಾಪು, ಮೂಳೂರು, ಪೊಲಿಪು, ಕೊಪ್ಪಲಂಗಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜುಲೈ 11 ರಂದು ಬೆಳಗ್ಗೆ 9 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. 33/11 ಕೆ.ವಿ ಶಿರ್ವ ಎಂ.ಯು.ಎಸ್.ಎಸ್ ನ ಬ್ಯಾಂಕ್-1 ನಲ್ಲಿ ಕೇಬಲ್ ಕಟ್ ಮಾಡಿ POT HEAD ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಶಿರ್ವ ಎಂ.ಯು.ಎಸ್.ಎಸ್ ನ ಬ್ಯಾಂಕ್-1 ರಿಂದ ಹೊರಡುವ 11 ಕೆವಿ ಬಂಟಕಲ್ಲು, ಶಿರ್ವ ಹಾಗೂ ಮುದರಂಗಡಿ ಫೀಡರ್ ಮಾರ್ಗದಲ್ಲಿ ಉಳಿಯಾರಗೋಳಿ ಗ್ರಾಮ, ಬಂಟಕಲ್ಲು ಗ್ರಾಮ, ಮೂಡಬೆಟ್ಟು ಗ್ರಾಮ, ಪಾಂಗಳ ಗ್ರಾಮ, ಶಿರ್ವ ಗ್ರಾಮ, ಮಟ್ಟಾರು ಗ್ರಾಮ, ಪದವು ಪಾಂಬೂರು, ಪಂಜಿಮಾರು, ಪಿಲಾರುಖಾನ, ಪೆರ್ನಾಲು, ಕುತ್ಯಾರು, ಪುಂಚಲಕಾಡು, ಕಳತ್ತೂರು ಗ್ರಾಮ, ಚಂದ್ರನಗರ, ಮಲ್ಲಾರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜುಲೈ 13 ರಂದು ಬೆಳಗ್ಗೆ 9 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜಿನ ಅಗತ್ಯ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು, ಜ.17: ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು ಇರಬೇಕು ಎನ್ನುವುದು ನನ್ನ...

ಕೋಟೆಕಾರ್ ಉಳ್ಳಾಲದ ಸಹಕಾರಿ ಬ್ಯಾಂಕ್ ದರೋಡೆ- ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ತುರ್ತು ಸಭೆ

ಮಂಗಳೂರು, ಜ.17: ಕೋಟೆಕಾರ್ ಉಳ್ಳಾಲದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ...

ಸಾಲಿಗ್ರಾಮ: ಯುವ ವೇದಿಕೆ 8ನೇ ವಾರ್ಷಿಕೋತ್ಸವ

ಕೋಟ, ಜ.17: ಯುವ ವೇದಿಕೆಯ ಸಮಾಜಮುಖಿ ಕಾರ್ಯಗಳು ಅತ್ಯಂತ ಪ್ರಶಂಸನೀಯ ಎಂದು...

ದೈಹಿಕ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವೀಲ್ ಚೇರ್ ಸೌಲಭ್ಯ: ಅರ್ಜಿ ಆಹ್ವಾನ

ಉಡುಪಿ, ಜ.17: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ...
error: Content is protected !!