Sunday, January 19, 2025
Sunday, January 19, 2025

ಸಂತೆಕಟ್ಟೆ ರಾಷ್ಟೀಯ ಹೆದ್ದಾರಿ: ಸುರಕ್ಷತಾ ಕ್ರಮಕ್ಕೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ

ಸಂತೆಕಟ್ಟೆ ರಾಷ್ಟೀಯ ಹೆದ್ದಾರಿ: ಸುರಕ್ಷತಾ ಕ್ರಮಕ್ಕೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ

Date:

ಉಡುಪಿ, ಜೂ. 8: ಸಂತೆಕಟ್ಟೆ ರಾಷ್ಟೀಯ ಹೆದ್ದಾರಿ ಅಂಡರ್ ಪಾಸ್ ಕಾಮಗಾರಿ ತೀವ್ರ ಮಳೆಯ ಹಿನ್ನೆಲೆಯಲ್ಲಿ ಸುಗಮ ಸಂಚಾರ ಹಾಗೂ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಶಾಸಕ ಯಶ್ಪಾಲ್ ಸುವರ್ಣ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶನಿವಾರ ಸಂತೆಕಟ್ಟೆಗೆ ಭೇಟಿ ನೀಡಿದ ಶಾಸಕರು ಮಾತನಾಡಿ, ಸಂತೆಕಟ್ಟೆ ಜಂಕ್ಷನ್ ಸದಾ ವಾಹನ ದಟ್ಟಣೆ ಹೊಂದಿರುವ ಕಾರಣ ಕಾಮಗಾರಿ ಹಿನ್ನೆಲೆಯಲ್ಲಿ ಸುರಕ್ಷತೆಗೆ ಆದ್ಯತೆ ನೀಡುವಂತೆ ಹಾಗೂ ಕಾಮಗಾರಿಯ ಪ್ರದೇಶದಲ್ಲಿ ಮಣ್ಣು ಕುಸಿತವಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.

ಸಂತೆಕಟ್ಟೆ ನೇಜಾರ್ ತಿರುವು ಬಳಿ ರಸ್ತೆಯಲ್ಲಿ ನೀರು ನಿಂತು ಜನಸಾಮಾನ್ಯರಿಗೆ ಸಮಸ್ಯೆ ಬಗ್ಗೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸುಗಮ ಸಂಚಾರಕ್ಕೆ ವ್ಯವಸ್ಥೆಗೆ ಸೂಚನೆ ನೀಡಿದರು. ನಗರಸಭೆ ಪೌರಾಯುಕ್ತರಾದ ರಾಯಪ್ಪ, ಎಇಇ ಯಶವಂತ ಪ್ರಭು, ನಗರಸಭಾ ಸದಸ್ಯರಾದ ಮಂಜುಳಾ ನಾಯಕ್, ಜಯಂತಿ ಪೂಜಾರಿ, ಕಲ್ಯಾಣಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೃಷ್ಣ ದೇವಾಡಿಗ, ಪ್ರಮುಖರಾದ ಉಮೇಶ್ ಶೆಟ್ಟಿ, ಸತೀಶ್ ನಾಯ್ಕ್, ದಿನೇಶ್ ಪೈ, ಅಮಿತ್ ಪೂಜಾರಿ, ಪ್ರಸಾದ್ ರಾವ್, ಚಿನ್ಮಯಮೂರ್ತಿ, ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!