Monday, January 20, 2025
Monday, January 20, 2025

ಆಚಾರ-ವಿಚಾರಗಳು ಪಾರಂಪರಿಕವಾಗಿ ಬೆಳೆದು ನಿಲ್ಲಲು ಪತ್ರಕರ್ತರ ಕೊಡುಗೆ ಅಪಾರ: ಯು.ಟಿ ಖಾದರ್

ಆಚಾರ-ವಿಚಾರಗಳು ಪಾರಂಪರಿಕವಾಗಿ ಬೆಳೆದು ನಿಲ್ಲಲು ಪತ್ರಕರ್ತರ ಕೊಡುಗೆ ಅಪಾರ: ಯು.ಟಿ ಖಾದರ್

Date:

ಉಡುಪಿ, ಜು. 9: ಸಮಾಜದ ಅಂಕು-ಡೊಂಕುಗಳನ್ನು ತಿದ್ದಿ, ಸಾಮರಸ್ಯ, ಸತ್ಯದ ಮೇಲೆ ಬೆಳಕು ಚೆಲ್ಲುವ ಕೆಲಸ ಮಾಡುತ್ತಿರುವ ಪತ್ರಕರ್ತರು ಕುಟುಂಬವನ್ನು ತ್ಯಜಿಸಿ ರಾತ್ರಿ-ಹಗಲೆನ್ನದೇ ದುಡಿಯುತ್ತಾರೆ. ಸಮಾಜದ ಒಳಿತಿಗಾಗಿ ಸದಾ ಚಿಂತಿಸುವ ಪತ್ರಕರ್ತರು ಅವರ ಮಕ್ಕಳ ಭವಿಷ್ಯದ ಬಗ್ಗೆಯೂ ಚಿಂತಿಸಬೇಕಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಲಹೆ ನೀಡಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ರಜತ ಮಹೋತ್ಸವ ಸಮಿತಿ ಹಾಗೂ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇವರ ಸಹಯೋಗದಲ್ಲಿ ಮಣಿಪಾಲ ಕೆಎಂಸಿ ಆಸ್ಪತ್ರೆಯ ಡಾ.ಟಿಎಂಎ ಪೈ ಆಡಿಟೋರಿಯಂನಲ್ಲಿ ಆಯೋಜಿಸಲಾದ ರಾಜ್ಯದ ಪತ್ರಕರ್ತರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ‘ಎರಡು ಕೈಗಳಿಂದ ಹೊತ್ತ ಸಂವಿಧಾನ ಪುಸ್ತಕ’ವನ್ನು ಅನಾವರಣಗೊಳಿಸುವ ಮೂಲಕ ವಿಶಿಷ್ಟವಾಗಿ ಉದ್ಘಾಟಿಸಿ ಅವರು ಮಾತನಾಡಿದರು. ಪತ್ರಕರ್ತರ ಕುಟುಂಬವನ್ನು ಪ್ರೋತ್ಸಾಹಿಸುವ ದಿಸೆಯಲ್ಲಿ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಪತ್ರಕರ್ತರ ಮಕ್ಕಳಿಗಾಗಿ ಆಯೋಜಿಸಿರುವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಮಾದರಿ ಕಾರ್ಯಕ್ರಮವಾಗಿ ರೂಪುಗೊಳ್ಳಲಿ ಎಂದು ಆಶಿಸಿದರು. ಸಮಾಜದ ಅನೇಕ ಸಮಸ್ಯೆಗಳನ್ನು ವರದಿ ಮೂಲಕ ಬೆಳಕು ಚೆಲ್ಲುವ ಪತ್ರಕರ್ತರಿಗೂ ಸಾಕಷ್ಟು ಸಮಸ್ಯೆಗಳಿವೆ. ಈಗಲೂ ನಿವೇಶನಕ್ಕಾಗಿ ಪತ್ರಕರ್ತರು ಹಾತೊರೆಯುತ್ತಿದ್ದಾರೆ. ಪತ್ರಕರ್ತರ ಏಳಿಗೆಗಾಗಿ ಸರ್ಕಾರದ ಮಟ್ಟದಲ್ಲಿ ಮುಂದೆ ನಿಂತು ಮಾಡಿಸಿಕೊಡುತ್ತೇನೆ. ರಾತ್ರಿ-ಹಗಲು, ಚಳಿ-ಮಳೆ ಎನ್ನದೇ ಸುದ್ದಿ ಮಾಡುವ ಪತ್ರಕರ್ತರ ಶ್ರಮವನ್ನು ಕಣ್ಣಾರೆ ಕಂಡಿದ್ದೇನೆ. ಖಂಡಿತವಾಗಿಯೂ ನಿಮ್ಮೆಲ್ಲರ ಶ್ರಮಕ್ಕೆ ಫಲ ಸಿಗುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಕಾರ್ಯಕರ್ತೆಯಾಗಿ ಆರಂಭಗೊಂಡ ನನ್ನ ರಾಜಕೀಯ ಜೀವನ ಇಂದು ಪ್ರತಿಭಾವಂತ ಜಿಲ್ಲೆಯ ಉಸ್ತುವಾರಿ ಸಚಿವೆಯಾಗಿ ನಿಮ್ಮ ಮುಂದೆ ನಿಂತಿದ್ದೇನೆ. ಇದು ನನ್ನ ಶ್ರಮಕ್ಕೆ ಸಿಕ್ಕ ಪ್ರತಿಫಲ. ತಂದೆ-ತಾಯಿ ಕಷ್ಟಪಟ್ಟು ತಮ್ಮ ಭವಿಷ್ಯದ ಬಗ್ಗೆ ಕನಸು ಕಂಡಿದ್ದಾರೆ. ಅವರ ಕನಸನ್ನು ನನಸು ಮಾಡುವ ಗುರುತರವಾದ ಜವಾಬ್ದಾರಿ ನಿಮ್ಮ ಮೇಲಿದೆ. ಅವರ ಕನಸನ್ನು ನನಸುಗೊಳಿಸಲು ನೀವೆಲ್ಲರೂ ಸನ್ನದ್ದರಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕರ್ನಾಟಕ ವಿಧಾಸಭಾ ಸಭಾಪತಿ ಯು.ಟಿ ಖಾದರ್ ಮಾತನಾಡಿ, ನಮ್ಮ ಸಂಪ್ರದಾಯ, ಆಚಾರ-ವಿಚಾರಗಳು ಪಾರಂಪರಿಕವಾಗಿ ಬೆಳೆದು ನಿಲ್ಲಬೇಕಾದರೆ ಅದಕ್ಕೆ ಪತ್ರಕರ್ತರ ಕೊಡುಗೆ ಅಪಾರವಾದುದು. ಯುವಪೀಳಿಗೆಗೆ ನಮ್ಮ ಸಂಪ್ರದಾಯಗಳನ್ನು ವರ್ಗಾಯಿಸುವ ದೊಡ್ಡ ಶಕ್ತಿಯಾಗಿ ಮಾಧ್ಯಮದ ಪಾಲು ಬಹಳಷ್ಟಿವೆ ಎಂದರು. ಪತ್ರಕರ್ತರು ಮತ್ತು ರಾಜಕಾರಣಿಗಳ ನಡುವೆ ಅವಿನಾಭಾವ ಸಂಬಂಧವಿದೆ. ಪತ್ರಕರ್ತರಿಲ್ಲದೇ ರಾಜಕಾರಣಿಗಳಿಲ್ಲ, ಹಾಗೆಯೇ ರಾಜಕಾರಣಿಗಳಿಲ್ಲದೇ ಪತ್ರಕರ್ತರಿಲ್ಲ. ರಾಜಕೀಯದಲ್ಲಿ ಗೊಂದಲಗಳುಂಟಾದಾಗ ಪತ್ರಕರ್ತರ ಸಲಹೆ, ಸೂಚನೆಗಳಿಂದ ಗೊಂದಲ ಬಗೆಹರಿದ ಅನೇಕ ಉದಾಹರಣೆಗಳಿವೆ. ನೂತನ ಶಾಸಕರಿಗೆ ತರಬೇತಿ ಕೊಟ್ಟಂತೆ ಪತ್ರಕರ್ತರಿಗೂ ತರಬೇತಿ ಕೊಡುವ ಅವಶ್ಯಕತೆ ಇದೆ ಎಂದರು. ಈ ಸಂದರ್ಭದಲ್ಲಿ ಸಂಘದ ಸದಸ್ಯ ಪತ್ರಕರ್ತರ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಣಿಪಾಲ ಮಾಹೆ ಪ್ರೊ ಚಾನ್ಸಲರ್ ಡಾ.ಎಚ್.ಎಸ್. ಬಲ್ಲಾಳ್, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ ಮಚ್ಚಿಂದ್ರ ಹಾಕೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷರಾದ ಪುಂಡಲೀಕ ಭೀ ಬಾಳೋಜಿ, ಅಜ್ಜಮಾಡ ರಮೇಶ್ ಕುಟ್ಟಪ್ಪ, ಭವಾನಿ ಸಿಂಗ್ ಠಾಕೂರು, ಕಾರ್ಯದರ್ಶಿಗಳಾದ ಮತ್ತಿಕೆರೆ ಜಯರಾಮ್, ಸೋಮಶೇಖರ್ ಕೆರಗೋಡು, ಕೋಶಾಧಿಕಾರಿ ವಾಸುದೇವ ಹೊಳ್ಳ, ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್ ಕುಮಾರ್ ಶಿರೂರು, ರಜತ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಕರ ಸುವರ್ಣ ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ರಜತ ಮಹೋತ್ಸವ ಸಮಿತಿಯ ಸಂಚಾಲಕ ಮುಹಮ್ಮದ್ ಶರೀಫ್ ಕಾರ್ಕಳ ಸ್ವಾಗತಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜೆ.ಸಿ.ಲೋಕೇಶ್ ಪುರಸ್ಕೃತರ ಪಟ್ಟಿ ವಾಚಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ವಂದಿಸಿದರು. ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ದಾನಿಗಳ ಪಟ್ಟಿ ವಾಚಿಸಿದರು. ಪತ್ರಕರ್ತ ಕೆ.ಸಿ.ರಾಜೇಶ್ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮಕ್ಕೆ ಮೊದಲು ಕಲಾಮಯಂ ತಂಡದಿಂದ ಜಾನಪದ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಕಳ ಮಹಾಲಿಂಗೇಶ್ವರ ದೇವಸ್ಥಾನ ಕೆರೆ ಮರು ನಿರ್ಮಾಣಕ್ಕೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ

ಮಣಿಪಾಲ, ಜ.20: ಪರ್ಕಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಕಾಮಗಾರಿ ಸ್ಥಳಕ್ಕೆ...

ಕೋಡಿ ಮಹಾಸತೀಶ್ವರಿ ಗೆಂಡೋತ್ಸವ ಸಂಪನ್ನ

ಕೋಟ, ಜ.20: ಇಲ್ಲಿನ ಕರಾವಳಿ ಕಡಲತಟದಲ್ಲಿ ಆರಾಧಿಸುವ ದೇವಿ ಶ್ರೀ ಮಹಾಸತೀಶ್ವರಿ...

ಪಂಚವರ್ಣದ ನೇತೃತ್ವದಲ್ಲಿ 238 ನೇ ವಾರದ ಪರಿಸರ ಸ್ನೇಹಿ ಅಭಿಯಾನ

ಕೋಟ, ಜ.20: ಪಂಚವರ್ಣ ಯುವಕ ಮಂಡಲ ಕೋಟ ಇದರ ಪ್ರವರ್ತಿತ ಪಂಚವರ್ಣ...

ಹನೆಹಳ್ಳಿ: ವಿದ್ಯಾರ್ಥಿಗಳಿಗೆ ಉಚಿತ ಶೂ ವಿತರಣೆ

ಬಾರಕೂರು, ಜ.20: ಲಯನ್ಸ್ ಕ್ಲಬ್ ಬಾರ್ಕೂರು (Dist 317 zone 1Region...
error: Content is protected !!