Thursday, September 10, 2026
Thursday, September 10, 2026

ಯುವ ವಿಚಾರ ವೇದಿಕೆ: ವನಮಹೋತ್ಸವ

ಯುವ ವಿಚಾರ ವೇದಿಕೆ: ವನಮಹೋತ್ಸವ

Date:

ಉಪ್ಪೂರು, ಜು. 11: ಯುವ ವಿಚಾರ ವೇದಿಕೆ (ರಿ.) ಕೊಳಲಗಿರಿ, ಗ್ರಾಮ ಪಂಚಾಯತ್ ಉಪ್ಪೂರು, ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ, ಸುವರ್ಣ ಎಂಟರ್ಪ್ರೈಸಸ್ ಬ್ರಹ್ಮಾವರ ಇವರ ಸಂಯುಕ್ತ ಆಶ್ರಯದಲ್ಲಿ ವೇದಿಕೆಯ ವಠಾರದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು.

ಔಷಧೀಯ, ಹಣ್ಣು ಹಾಗೂ ಇನ್ನಿತರ ಸುಮಾರು 100 ಗಿಡಗಳನ್ನು ವೇದಿಕೆಯ ವಠಾರದಲ್ಲಿ ಹಾಗೂ ಸದಸ್ಯರ ಮನೆಗಳಲ್ಲಿ ನೆಡಲಾಯಿತು.ಕೇವಲ ಗಿಡಗಳನ್ನು ನೆಡುವುದು ಮಾತ್ರವಲ್ಲದೆ ಅವುಗಳ ರಕ್ಷಣೆ ಹಾಗೂ ಪೋಷಣೆ ಕೂಡ ಪ್ರತಿಯೊಬ್ಬರ ಕರ್ತವ್ಯ ಹಾಗೂ ಜವಾಬ್ಧಾರಿ. ಗಿಡ ಮರಗಳಿಂದ ಭೂಮಿ, ಜೀವಜಲ ಹಾಗೂ ಪರಿಸರ ಸಂರಕ್ಷಣೆ ಆಗುವುದರಿಂದ ಗಿಡಮರಗಳನ್ನು ನೆಟ್ಟು ಬೆಳೆಸುವ ಅಗತ್ಯತೆ ಹಾಗೂ ಅನಿವಾರ್ಯತೆ ಪ್ರಸ್ತುತ ಇದೆ ಎಂದು ಗಣ್ಯರು ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹೇಶ್ ಕೋಟ್ಯಾನ್, ಸುವರ್ಣ ಎಂಟರ್ಪ್ರೈಸಸ್ ಮಾಲಕ ಹಾಗೂ ಜಯಂಟ್ಸ್ ಗ್ರೂಪ್ ನ ಮಾಜಿ ರಾಜ್ಯಾಧ್ಯಕ್ಷ ಮಧುಸೂಧನ್ ಹೇರೂರು, ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಮಾಜಿ ಅಧ್ಯಕ್ಷ ಸುಂದರ ಪೂಜಾರಿ ಮೂಡುಕುಕ್ಕುಡೆ, ಪುಷ್ಪಲತಾ ನರ್ಸರಿಯ ಕೇಶವ ಹಾಗೂ ವೇದಿಕೆಯ ಅಧ್ಯಕ್ಷರಾದ ದಿನೇಶ್ ಶೆಟ್ಟಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸ್ಥಳೀಯರು, ವೇದಿಕೆಯ ಸದಸ್ಯರು ಭಾಗವಹಿಸಿದ್ದರು. ವೇದಿಕೆಯ ಸುಬ್ರಹ್ಮಣ್ಯ ಆಚಾರ್ಯ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಚಾಮರಾಜನಗರ: ಜಿಲ್ಲಾಧಿಕಾರಿ ಶ್ರೀರೂಪ ಅವರಿಂದ ಆಯುಷ್ಮಾನ್ ಆರೋಗ್ಯ ಕೇಂದ್ರಗಳ ನಾಮಫಲಕ, ಪೋಸ್ಟರ್‍ಗಳ ಬಿಡುಗಡೆ

ಚಾಮರಾಜನಗರ, ಸೆ.9: ಆಯುಷ್ಮಾನ್ ಆರೋಗ್ಯ ಕೇಂದ್ರಗಳ ಕುರಿತು ಸುಲಭವಾಗಿ ಮಾಹಿತಿ ದೊರೆಯುವಂತೆ...

ಉಡುಪಿಯಲ್ಲಿ ಬನ್ನಂಜೆಯವರ ಆತ್ಮಕಥನ ‘ಇಂದು ಎನಗೆ ಗೋವಿಂದ’ ಚಿತ್ರದ ವಿಶೇಷ ಪ್ರದರ್ಶನ – ಸೆ.10 ರಂದು ಮೂರು ಪ್ರದರ್ಶನ

ಉಡುಪಿ, ಸೆ.9: ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನ, ಬೆಂಗಳೂರು ಅರ್ಪಿಸುವ, ನಾಡಿನ ಹೆಮ್ಮೆಯ...

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ; ವಿಮಾನ ಪ್ರಯಾಣ ಅಸ್ತವ್ಯಸ್ತ

ಯು.ಬಿ.ಎನ್.ಡಿ., ಸೆ.8: ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟದಿಂದಾಗಿ ಎಂಟು ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಯನ್ನು...
error: Content is protected !!